Home namma chikmagalur ಸಕಲ ಧರ್ಮಕ್ಕೂ ದಯೆ-ಮಾನವೀಯತೆ ಮುಕುಟಪ್ರಾಯ
namma chikmagalurchikamagalurHomeLatest News

ಸಕಲ ಧರ್ಮಕ್ಕೂ ದಯೆ-ಮಾನವೀಯತೆ ಮುಕುಟಪ್ರಾಯ

Share
Share
ಬಾಳೆಹೊನ್ನೂರು: ಜಗದಲ್ಲಿ ಒಳ್ಳೆಯದು ಕೆಟ್ಟದ್ದು ಎರಡೂ ಇವೆ. ನೋಡುವ ದೃಷ್ಠಿಯನ್ನು ಅವಲಂಬಿಸಿರುತ್ತದೆ. ಸಕಲ ಧರ್ಮಕ್ಕೂ ದಯೆ ಮತ್ತು ಮಾನವೀಯತೆ ಮುಕುಟಪ್ರಾಯವಾಗಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಬುಧವಾರ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಜರುಗಿದ ಪೌರ್ಣಿಮೆ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ಸಮಾಜದ ಕಷ್ಟ ಸುಖಗಳನ್ನು ಚಿಂತಿಸಿ ಅವುಗಳಿಗೆ ಪರಿಹಾರ ಮಾಡುವ ಕಾರ್ಯದಲ್ಲಿ ಪ್ರವೃತ್ತರಾಗಿರುವುದೇ ನಿಜವಾದ ಧರ್ಮವಾಗಿದೆ.
ಜೀವನಾಧಾರಕ್ಕೆ ನೀರು ಅನ್ನ ಗಾಳಿ ಮತ್ತು ಒಳ್ಳೆಯ ಮಾತು ಮುಖ್ಯ. ಸತ್ಯ ಸಂಸ್ಕೃತಿ ಗೌರವಿಸದೇ ಹೋದರೆ ಜೀವನ ನಾಶಗೊಳ್ಳುತ್ತದೆ. ವಸ್ತು ಒಡವೆಗಳ ಹೊರರೂಪ ಬದಲಾಗಬಹುದು. ಆದರೆ ಒಳಗಿರುವ ಮೂಲ ಸತ್ಯ ಬದಲಾಗುವುದಿಲ್ಲ. ಜೀವ ಹೋಗುವ ಈ ದೇಹ, ನಾಶವಾಗುವ ಈ ಸಂಪತ್ತು ಮತ್ತು ಮಾಸಿ ಹೋಗುವ ಸೌಂದರ್ಯ ನೆಚ್ಚದೇ ಸತ್ಯ ಶುದ್ಧ ಧರ್ಮ ಮಾರ್ಗದಲ್ಲಿ ನಡೆಯುವುದರಿಂದ ಜೀವನದಲ್ಲಿ ಸಕಲ ಸಂಪತ್ತು ಶಾಂತಿ ದೊರಕುವುದೆಂದು ಶ್ರೀ ಜಗದ್ಗುರು ರೇಣುಕಾಚಾರ್ಯರು ಜೀವನ ಸಿದ್ಧಾಂತದಲ್ಲಿ  ಬೋಧಿಸಿದ್ದಾರೆ.
ನಾವು ಏನು ಪಡೆದಿದ್ದೇವೆ ಎನ್ನುವುದಕ್ಕಿಂತ ಹೇಗೆ ದುಡಿದಿದ್ದೇವೆ ಎಂಬುದು ಮುಖ್ಯ. ಏನು ನುಡಿದಿದ್ದೇವೆ ಎನ್ನುವುದಕ್ಕಿಂತ ಹೇಗೆ ನಡೆದಿದ್ದೇವೆ ಎಂಬುದು ಮುಖ್ಯ. ಏನು ಗಳಿಸಿದ್ದೇವೆ ಎನ್ನುವುದಕ್ಕಿಂತ ಹೇಗೆ ಬೆಳೆದಿದ್ದೇವೆ ಎಂಬುದು ಮುಖ್ಯ. ಏನು ಹೇಳಿ ಕೇಳಿದೆವು ಅನ್ನುವುದಕ್ಕಿಂತ ಹೇಗೆ ಬಾಳಿದೆವು ಎಂಬುದು ಮುಖ್ಯ. ಅರಿತು ಬಾಳುವುದರಿಂದ ಬಾಳು ವಿಕಾಸಗೊಳ್ಳುವುದೆಂದರು.
ವೈದ್ಯಕೀಯ ಸಚಿವರ ಭೇಟಿ: ರಾಜ್ಯದ ವೈದ್ಯಕೀಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ ಡಾ|| ಶರಣ ಪ್ರಕಾಶ ಪಾಟೀಲರು ಶ್ರೀ ರಂಭಾಪುರಿ ಪೀಠಕ್ಕೆ ಭೇಟಿಯಿತ್ತು ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಮತ್ತು ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿಗೆ ಪೂಜೆ ಸಲ್ಲಿಸಿ ಶ್ರೀ ರಂಭಾಪುರಿ ಜಗದ್ಗುರುಗಳ ದರ್ಶನಾಶೀರ್ವಾದ ಪಡೆದರು.
ಈ ಪವಿತ್ರ ಸಮಾರಂಭದಲ್ಲಿ ನೆಗಳೂರು, ಆಲಮೇಲ, ಸೋನಪೇಟೆ, ಹುಡುಗಿ, ವೆಂಕಟಬೆನ್ನೂರು ಶ್ರೀಗಳು ಪಾಲ್ಗೊಂಡಿದ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆಂಶುಮಂತ್, ಬಳ್ಳಾರಿ ಮಹಲಿಂಗಯ್ಯ, ಪ್ರಭುಸ್ವಾಮಿ, ಗ್ರಾಮ ಪಂಚಾಯತಿ ಎಲ್ಲ ಸದಸ್ಯರು ಉಪಸ್ಥಿತರಿದ್ದರು. ಸುಮಾರು ೧೩ ಜನ ವೀರಮಾಹೇಶ್ವರ ವಟುಗಳಿಗೆ ಶಿವದೀಕ್ಷಾ ಮತ್ತು ಅಯ್ಯಾಚಾರ ಜರುಗಿತು. ಕ್ಷೇತ್ರದ ಎಲ್ಲ ದೈವಗಳಿಗೆ ಹುಣ್ಣಿಮೆ ಪ್ರಯುಕ್ತ ವಿಶೇಷ ಪೂಜಾ ಕಾರ್ಯಗಳು ಜರುಗಿದವು.
ಜಾತಿ ಜನಗಣತಿ ನಿರ್ಧಾರಕ್ಕೆ ಸ್ವಾಗತ:
ರಾಜ್ಯದಲ್ಲಿ ಜಾತಿ ಜನಗಣತಿಯನ್ನು ಮತ್ತೊಮ್ಮೆ ಮಾಡಬೇಕೆಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು, ಕಾಂಗ್ರೆಸ್, ಧುರೀಣರು ಹೇಳಿದ ಮಾತಿಗೆ ಎಲ್ಲರೂ ಸಹಮತ ವ್ಯಕ್ತಪಡಿಸಿರುವುದಕ್ಕೆ ಶ್ರೀ ರಂಭಾಪುರಿ ಜಗದ್ಗುರುಗಳು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಜಾತಿ ಜನಗಣತಿ ಸಂದರ್ಭದಲ್ಲಿ ವೀರಶೈವ-ಲಿಂಗಾಯತ ಧರ್ಮದ ಎಲ್ಲಾ ಒಳಪಂಗಡದವರು ವೀರಶೈವ ಲಿಂಗಾಯತ ಎಂದೇ ಬರೆಸಬೇಕೆಂದರು.
Kindness-humanity is the crown of all religions
Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...