Home namma chikmagalur chikamagalur ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಕಿಂಗ್ ಸಿಗರೇಟ್ ಮಾರಾಟ ….?
chikamagalurHomeLatest Newsnamma chikmagalur

ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಕಿಂಗ್ ಸಿಗರೇಟ್ ಮಾರಾಟ ….?

Share
Share
ಕೊಟ್ಟಿಗೆಹಾರ: ಐಟಿಸಿ ಕಂಪನಿಯ ಕಿಂಗ್ ಸಿಗರೇಟ್ ಪ್ಯಾಕ್ ಮೇಲೆ ಮುದ್ರಿತ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ₹170 ಆಗಿದ್ದರೂ, ಹಲವು ಚಿಲ್ಲರೆ ಅಂಗಡಿಗಳಲ್ಲಿ ಅದೇ ಪ್ಯಾಕ್ ಅನ್ನು ₹230ರಿಂದ ₹250ರವರೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ
.
ಒಂದು ಪ್ಯಾಕ್‌ನಲ್ಲಿರುವ ಸಿಗರೇಟ್‌ಗಳನ್ನು ಪ್ರತ್ಯೇಕವಾಗಿ ಮಾರಾಟ ಮಾಡುವ ಸಂದರ್ಭಗಳಲ್ಲಿ ಪ್ರತಿ ಕಿಂಗ್ ಸಿಗರೇಟ್‌ಗೆ ₹25ವರೆಗೆ ಹಣ ವಸೂಲಿ ಮಾಡಲಾಗುತ್ತಿದೆ. ಎಂಆರ್‌ಪಿ ಲೆಕ್ಕಾಚಾರ ಪ್ರಕಾರ ಪ್ರತಿ ಸಿಗರೇಟ್‌ಗೆ ಸುಮಾರು ₹17 ಮಾತ್ರ ಆಗಬೇಕಾದರೂ, ಅದಕ್ಕಿಂತ ಹೆಚ್ಚಿನ ದರ ವಸೂಲಿ ಮಾಡುತ್ತಿರುವುದು ಗ್ರಾಹಕ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಲೆ ಕುರಿತು ಪ್ರಶ್ನಿಸಿದಾಗ ಕೆಲ ಅಂಗಡಿದಾರರು ಸ್ಪಷ್ಟ ಉತ್ತರ ನೀಡದೆ, ತಮ್ಮದೇ ದರ ನಿಗದಿ ಮಾಡಿಕೊಂಡು ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪಗಳಿವೆ. ಇನ್ನೂ ಕೆಲ ವ್ಯಾಪಾರಿಗಳು, “ಸಿಗರೇಟ್ ಮಾರಾಟ ಪ್ರತಿನಿಧಿಗಳು ನಮಗೆ ಹೆಚ್ಚಿನ ದರಕ್ಕೆ ಸರಕು ನೀಡುತ್ತಾರೆ. ಅದಕ್ಕಾಗಿ ಹೆಚ್ಚಾಗಿ ಮಾರಾಟ ಮಾಡಬೇಕಾಗುತ್ತದೆ” ಎಂದು ಕಾರಣ ನೀಡುತ್ತಿರುವುದು ಗಮನಾರ್ಹವಾಗಿದೆ.
ಗ್ರಾಹಕ ಹಕ್ಕು ಕಾಯ್ದೆ ಪ್ರಕಾರ ಎಂಆರ್‌ಪಿಗಿಂತ ಹೆಚ್ಚಿನ ದರಕ್ಕೆ ವಸ್ತು ಮಾರಾಟ ಮಾಡುವುದು ಕಾನೂನುಬಾಹಿರವಾಗಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಗ್ರಾಹಕ ಸಂರಕ್ಷಣಾ ಅಧಿಕಾರಿಗಳು ಇಂತಹ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವ ಅವಕಾಶವಿದೆ.
ಅಕ್ರಮ ದರ ವಸೂಲಿನ ವಿರುದ್ಧ ತಕ್ಷಣ ತಪಾಸಣೆ ನಡೆಸಿ, ತಪ್ಪಿತಸ್ಥ ಅಂಗಡಿದಾರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಹಾಗೂ ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಎಂಆರ್‌ಪಿ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಮೂಲಕ ಗ್ರಾಹಕರಿಗೆ ನ್ಯಾಯ ಒದಗಿಸಬೇಕೆಂಬುದು ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿದೆ.
King cigarettes are being sold for ₹250 even though the MRP is ₹170…?
Share

Leave a comment

Leave a Reply

Your email address will not be published. Required fields are marked *

Don't Miss

ಹಿರಿಯ ನಾಗರಿಕರಿಗೆ 3.12 ಲಕ್ಷ ರೂ ವಂಚನೆ

ಚಿಕ್ಕಮಗಳೂರು: ಸೈಬರ್ ಕ್ರಿಮಿನಲ್‌ಗಳ ಜಾಲಕ್ಕೆ ಸಿಲುಕಿ ಹಿರಿಯ ನಾಗರಿಕರೊಬ್ಬರು ಬರೋಬ್ಬರಿ 3.12 ಲಕ್ಷ ಕಳೆದುಕೊಂಡಿದ್ದಾರೆ. ನಗರದಲ್ಲಿ ವಾಸವಾಗಿರುವ 62 ವರ್ಷದ ವೆಂಕಟೇಶ್ ಇತ್ತೀಚೆಗೆ ಅವರ ಮೊಬೈಲ್‌ಗೆ ಬಂದಿದ್ದ ಒಂದು ಅಪರಿಚಿತ ಎಪಿಕೆ...

ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಶಿಫಾರಸ್ ಪತ್ರ

ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ಭಜರಂಗದಳದ ಮುಖಂಡ ಶ್ಯಾಮ್ ವಿ ಗೌಡ, ಮುಸ್ಲಿಂ ಸಮುದಾಯದ 10 ಮಂದಿ ಸೇರಿ ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಜಿಲ್ಲಾ...

Related Articles

ಎಸ್.ಬಿದರೆಯ ಬೆಂಕಿ ಲಕ್ಷ್ಮೀ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವ

ಕಡೂರು: ತಾಲ್ಲೂಕಿನ ಸಖರಾಯಪಟ್ಟಣ ಹೋಬಳಿ ಎಸ್.ಬಿದರೆಯ ಬೆಂಕಿ ಲಕ್ಷ್ಮೀ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವವು ಮಂಗಳವಾರ ಶ್ರದ್ಧಾ...

ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿದ್ದ ಇಂದಿರಾ ಕ್ಯಾಂಟೀನ್ ಸ್ಥಳಾಂತರ

ಚಿಕ್ಕಮಗಳೂರು : ನಗರದ ಐ.ಜಿ. ರಸ್ತೆಯ ಬಸ್ ನಿಲ್ದಾಣದ ಸಮೀಪವಿರುವ ಇಂದಿರಾ ಕ್ಯಾಂಟೀನ್ ಅನ್ನು ಸ್ಥಳಾಂತರ...

ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳು ಮನೆ ಬಾಗಿಲಿಗೆ

ಚಿಕ್ಕಮಗಳೂರು: ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ...

ಶಾಸಕ ಜಿ.ಹೆಚ್. ಶ್ರೀನಿವಾಸ್ ವಿರುದ್ಧ ಪ್ರತಿಭಟನೆ

ಅಜ್ಜಂಪುರ : ಶಾಸಕ ಜಿ.ಹೆಚ್. ಶ್ರೀನಿವಾಸ್ ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು...