Home Crime News ಹುಡುಗಿಗೆ ಕಿರಿಕ್ ಮಂಜುನಾಥ್ ಮರ್ಡರ್
Crime NewsHomeLatest Newsnamma chikmagalurTarikere

ಹುಡುಗಿಗೆ ಕಿರಿಕ್ ಮಂಜುನಾಥ್ ಮರ್ಡರ್

Share
Share

ತರೀಕೆರೆ: ತರೀಕೆರೆಯ ಸಮೀಪದ ಅತ್ತಿಗನಾಳ್ ಗ್ರಾಮದ ಯುವಕ ಮಂಜುನಾಥ್(23) ಎಂಬುವನಿಗೆ ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ.

ಕೊಲೆಯಾದ ಮಂಜುನಾಥ್ ನಿಶ್ಚಿತಾರ್ಥವಾಗಿದ್ದ ಹುಡುಗಿಗೆ ಪದೆ,ಪದೇ ಮೊಬೈಲ್ ಮೂಲಕ ಮೆಸೇಜ್ ಮಾಡಿ ಕಿರಿ,ಕಿರಿ ಮಾಡುತ್ತಿದ್ದ ಎನ್ನಲಾಗಿದೆ. ಇದರಿಂದ ಕುಪಿತಗೊಂಡ ಹುಡುಗಿಯ ಅಣ್ಣಾ ಕಿರಣ್,ವೇಣು ಮತ್ತಿತರರು ಸೇರಿ ರಾತ್ರಿ 7.30ರ ಸುಮಾರಿಗೆ ಮಂಜುನಾಥ್ ಗೆ ಚಾಕುವಿನಿಂದ ಇರಿದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಎನ್ನಲಾಗಿದೆ.

ಮಂಜುನಾಥ್ ನಿಗೆ ತರೀಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು .ಚಿಕಿತ್ಸೆಗೆ ಸ್ಪಂದಿಸದೇ ಕೊನೆ ಉಸಿರು ಎಳೆದಿದ್ದಾನೆ ಎಂದು ತಿಳಿದುಬಂದಿದೆ.

ವಿಷಯ ತಿಳಿದ ತಕ್ಷಣವೇ ತರೀಕೆರೆ ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್ ಮತ್ತು ಸಿಬ್ಬಂದಿ ವರ್ಗ ಗಾಯಳು ಮಂಜುನಾಥ್ ನನ್ನು ಶಿವಮೊಗ್ಗದ ಆಸ್ಪತ್ರೆಗೆ ಸಾಗಿಸಿದ್ದಾರೆ.

ಕೊಲೆ ಆರೋಪದಲ್ಲಿ ಕಿರಣ್ ಮತ್ತು ವೇಣು ಎಂಬುವರನ್ನು ವಶಕ್ಕೆ ಪಡೆದಿದ್ದು ಇನ್ನಿಬ್ಬರು ಆರೋಪಿಗಳಾದ ಮನು ಮತ್ತು ಅಪ್ಪುಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Kirik Manjunath Murder of a Girl

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...