Home namma chikmagalur chikamagalur ಬಿಡದಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಕಿಸಾನ್ ಸಂಘ ಆಗ್ರಹ
chikamagalurHomeLatest Newsnamma chikmagalur

ಬಿಡದಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಕಿಸಾನ್ ಸಂಘ ಆಗ್ರಹ

Share
oplus_161480704
Share

ಚಿಕ್ಕಮಗಳೂರು : ಬಿಡದಿ ವ್ಯಾಪ್ತಿ ಪ್ರದೇಶದಲ್ಲಿ ಪ್ರಸ್ತಾವಿತ ಟೌನ್‌ಷಿಪ್ ಯೋಜನೆಗಾಗಿ ಫಲವತ್ತಾದ ಕೃಷಿ ಭೂಮಿಯನ್ನು ಭೂಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ತಕ್ಷಣ ಕೈಬಿಡುವಂತೆ ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಮತ್ತಾವರ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು ಭೂಸ್ವಾಧೀನ ಪ್ರಕ್ರಿಯೆ ಸಂದರ್ಭದಲ್ಲಿ ನಡೆದ ಗಲಾಟೆಯಲ್ಲಿ ರೈತರ ವಿರುದ್ದ ದಾಖಲಿಸಿರುವ ಕೊಲೆಯತ್ನ ಪ್ರಕರಣ ಸೇರಿದಂತೆ ಎಲ್ಲಾ ಕೇಸುಗಳನ್ನು ಬೇಷರತ್ತಾಗಿ ಹಿಂಪಡೆಯಬೇಕೆಂದು ಆಗ್ರಹಿಸಿದರು.

ರೈತರ ಬದುಕು ಕೃಷಿ ಹಾಗೂ ರಾಜ್ಯದ ಆಹಾರ ಭದ್ರತೆಯನ್ನು ಕಾಪಾಡುವುದು ಸರ್ಕಾರದ ಮೊದಲ ಆದ್ಯ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಬಿಡದಿಯ ಪ್ರಸ್ತಾವಿತ ಟೌನ್‌ಷಿಪ್ ಯೋಜನೆಗಾಗಿ ಫಲವತ್ತಾದ ಕೃಷಿ ಭೂಮಿ ಭೂಸ್ವಾಧೀನ ಪಡಿಸಿಕೊಳ್ಳುವುದರಿಂದ ಸಾವಿರಾರು ರೈತ ಕುಟುಂಬಗಳ ಮೇಲೆ ಗಂಭೀರ ಪರಿಣಾಮ ಬೀರುವ ಬೆಳವಣಿಗೆಯಾಗಿದೆ. ತಲೆಮಾರುಗಳಿಂದ ಕೃಷಿಯನ್ನೇ ನಂಬಿ ಬದುಕುವ ರೈತರಿಗೆ ಭೂಮಿ ಕೇವಲ ಆಸ್ತಿಯಲ್ಲ ಅದು ಅವರ ಜೀವನೋಪಾಯ ಮತ್ತು ಮುಂದಿನ ಪೀಳಿಗೆಯ ಭದ್ರತೆಯಾಗಿದೆ ಎಂದರು.

ಈ ಭಾಗದ ರೈತರು ಪ್ರತಿನಿತ್ಯ ಬೆಂಗಳೂರು ಮಹಾನಗರಕ್ಕೆ ಅಗತ್ಯವಿರುವ ತರಕಾರಿ, ಒಪ್ಪ, ತೆಂಗಿನಕಾಯಿ ಸೇರಿದಂತೆ ಅನೇಕ ಕೃಷಿ ಉತ್ಪನ್ನಗಳನ್ನು ಹಾಗೂ ಪ್ರತಿನಿತ್ಯ ಲಕ್ಷಾಂತರ ಲೀಟರ್ ಹಾಲನ್ನು ಪೂರೈಸುತ್ತಿದ್ದಾರೆ. ಟೌನ್ ಷಿಪ್ ಹೆಸರಿನಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ನಾಶ ಪಡಿಸಿದರೆ ನಾಗರೀಕರ ಆಹಾgದ ಮೇಲೆ ಗಂಭೀರ ಪರಿಣಾಮ ಬೀರಲಿದ್ದು, ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.

ರಾಜ್ಯದ ಅಭಿವೃದ್ದಿಯನ್ನು ಕಟ್ಟಡಗಳ ಎತ್ತರದಿಂದ ಅಳೆಯುವುದಲ್ಲ. ಅನ್ನದಾತನಿಗೆ ನೀಡುವ ನ್ಯಾಯದ ಅಳತೆಯಾಗಿದೆ. ಕೃಷಿಭೂಮಿಯನ್ನು ಉಳಿಸುವುದು ಮತ್ತು ರೈತರ ಗೌರವ ಕಾಪಾಡುವುದು ಅಭಿವೃದ್ದಿಗಿಂತ ದೊಡ್ಡ ಜವಾಬ್ದಾರಿಯಾಗಿದೆ ಎಂದ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನ್ಯಾಯ ಸಮ್ಮತ ಹಾಗೂ ಜನಪರ ನಿರ್ಧಾರ ಕೈಗೊಂಡು ರೈತ ಸಮುದಾಯದ ವಿಶ್ವಾಸ ಉಳಿಸುವಂತೆ ಮನವಿ ಮಾಡಿದರು.

ರೈತರ ಬುದುಕು ಕೃಷಿ ಮತ್ತು ರಾಜ್ಯದ ಆಹಾರ ಭದ್ರತೆಯನ್ನು ಕಾಪಾಡುವ ಐತಿಹಾಸಿಕ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಳ್ಳಬೇಕೆಂದು ವಿನಂತಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾ ಸಂಚಾಲಕ ಶ್ರೀನಿವಾಸಗೌಡ, ಮುಖಂಡರುಗಳಾದ ಸ್ವಾಗತ್, ಅವಿನ್, ಪ್ರಮೊದ್ ಎಂ.ಕೆ., ಉಲ್ಲಾಸ್ ಗೌಡ, ನಕುಲ್ ಪ್ರಧಾನ್, ಸುನಿಲ್, ತನುಷ್, ದರ್ಶನ್, ರಕ್ಷಿತ್, ಉದಯ್ ಉಪಸ್ಥಿತರಿದ್ದರು.

Kisan Sangh demands abandonment of Bidadi land acquisition process

Share

Leave a comment

Leave a Reply

Your email address will not be published. Required fields are marked *

Don't Miss

ರೈತರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮಾರಾಮಾರಿ

ಚಿಕ್ಕಮಗಳೂರು: ಶಾಂತಿಯುತವಾಗಿ ನಡೆಯಬೇಕಿದ್ದ ರೈತರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯೊಂದು ನೋಡನೋಡುತ್ತಿದ್ದಂತೆ ಜಿದ್ದಾಜಿದ್ದಿನ ಅಖಾಡವಾಗಿ ಮಾರ್ಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಹಂಗರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿದೆ. ಸಭೆಯಲ್ಲಿ...

ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಪ್ರತಿಷ್ಠಾಪನೆ ಉತ್ಸವಗಳು ನಡೆದವು. ಬೋಳರಾಮೇಶ್ವರ ದೇವಸ್ಥಾನದದ ಆವರಣದಲ್ಲಿ ಸಾರ್ವಜನಿಕ ಗಣಪತಿ ಸೇವಾ ಸಮಿತಿಯಿಂದ(ಅಜಾದ್ ಮೈದಾನ), ಹಿಂದೂ ಮಹಾಗಣಪತಿ ಸೇವಾ ಸಂಘದ...

Related Articles

ಜಿಲ್ಲೆಯ ಐದು ಜನ ಶಾಸಕರಿಗೆ ಬೊಗಣಿ ಗೂಟ ಖಚಿತ !?

ಚಿಕ್ಕಮಗಳೂರು: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸುವ ಜೊತೆಗೆ ಕಾಂಗ್ರೆಸ್ ಮುಖಂಡರು ಮತ್ತು...

ಕಲಿಕೆ ವಯಸ್ಸಿನಲ್ಲಿ ವ್ಯಾಮೋಹಕ್ಕೆ ಒಳಗಾಗದಿರಿ

ಚಿಕ್ಕಮಗಳೂರು: ರಾಷ್ಟ್ರದ ಭವಿಷ್ಯವನ್ನು ಉಜ್ವಲಗೊಳಿಸುವ ಇಂದಿನ ಯುವಪೀಳಿಗೆ ಬಹಳ ಷ್ಟು ಎಚ್ಚರಿಕೆ ವಹಿಸಬೇಕು. ಕಲಿಕೆಯಲ್ಲಿ ಹೊರತಾಗಿ...

ಭೋವಿ ಜಾತಿ ಪ್ರಮಾಣಪತ್ರ ನೀಡಲು ವಿಳಂಬ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ವಡ್ಡರ ಸಮುದಾಯದವರಿಗೆ ಭೋವಿ ಜಾತಿ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ಅಧಿಕಾರಿಗಳು ಅನಗತ್ಯ ತೊಂದರೆ...

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ...