ಚಿಕ್ಕಮಗಳೂರು: ನಗರದ ಜೂನಿಯರ್ ಕಾಲೇಜು ಸಮೀಪದ ಬೇಲೂರು ಬಸ್ ನಿಲ್ದಾಣದಲ್ಲಿ ಇಂದು ಸಂಜೆ ಕೆಎಸ್ಆರ್ಟಿಸಿ ಬಸ್ಗೆ ದಿಢೀರನೆ ಬೆಂಕಿ ತಗುಲಿದ ಘಟನೆ ನಡೆದಿದೆ.
ಚಿಕ್ಕಮಗಳೂರುದಿಂದ ಬೇಲೂರು ಕಡೆಗೆ ಪ್ರಯಾಣಿಸುತ್ತಿದ್ದ ಬಸ್ನಲ್ಲಿ ಡೀಸೆಲ್ ಲೀಕೇಜ್ ಉಂಟಾದ ಹಿನ್ನೆಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಘಟನೆ ಗಮನಿಸಿದ ಪ್ರಯಾಣಿಕರು ತಕ್ಷಣವೇ ಬಸ್ಸಿನಿಂದ ಕೆಳಗಿಳಿದು ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದ್ದಾರೆ. ಅವರ ತ್ವರಿತ ಕ್ರಮದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಯುತ್ತಿದೆ.
KS RTC bus suddenly catches fire
Leave a comment