Home namma chikmagalur chikamagalur ಬೈಕ್‌ಗೆ ಡಿಕ್ಕಿಯಾಗಿ ತೋಟಕ್ಕೆ ನುಗ್ಗಿದ ಕೆ.ಎಸ್.ಆರ್.ಟಿ.ಸಿ ಬಸ್
chikamagalurCrime NewsHomeLatest Newsnamma chikmagalur

ಬೈಕ್‌ಗೆ ಡಿಕ್ಕಿಯಾಗಿ ತೋಟಕ್ಕೆ ನುಗ್ಗಿದ ಕೆ.ಎಸ್.ಆರ್.ಟಿ.ಸಿ ಬಸ್

Share
Share

ಚಿಕ್ಕಮಗಳೂರು : ಜಿಲ್ಲೆ ಅಜ್ಜಂಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ರಸ್ತೆ ದಾಟುತ್ತಿದ್ದ ನಾಗರಹಾವನ್ನು ಕಂಡು ಬೈಕ್ ಸವಾರ ಏಕಾಏಕಿ ವಾಹನ ನಿಲ್ಲಿಸಿದ ಪರಿಣಾಮ, ಹಿಂದಿನಿಂದ ಬರುತ್ತಿದ್ದ ಸರ್ಕಾರಿ ಬಸ್ ಬೈಕ್‌ಗೆ ಡಿಕ್ಕಿಯಾಗಿ ತೋಟಕ್ಕೆ ನುಗ್ಗಿದ ಘಟನೆ ನಡೆದಿದೆ.

ರಸ್ತೆಯ ಮಧ್ಯೆ ನಾಗರಹಾವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೈಕ್ ಸವಾರ ದಿಢೀರನೆ ಬೈಕ್ ನಿಲ್ಲಿಸಿದ್ದಾನೆ. ಈ ವೇಳೆ ಹಿಂದಿನಿಂದ ಬಂದ ಸರ್ಕಾರಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟದೊಳಗೆ ನುಗ್ಗಿದೆ.

ಘಟನೆಯ ವೇಳೆ ಬಸ್ ಚಾಲಕ ಸಮಯಪ್ರಜ್ಞೆ ಮೆರೆದು ವಾಹನವನ್ನು ನಿಯಂತ್ರಿಸಲು ಪ್ರಯತ್ನಿಸಿದ್ದು, ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾನೆ. ಬಸ್ ಮುಂದೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯುವ ಸಾಧ್ಯತೆ ಇದ್ದರೂ, ಚಾಲಕನ ಚಾಣಾಕ್ಷತನದಿಂದ ಅದು ತಪ್ಪಿದೆ. ತೋಟದೊಳಗೆ ನುಗ್ಗಿದ ಬಸ್ ಕೊನೆಗೆ ನಿಂತಿದ್ದು, ಭಾರೀ ದುರಂತವೊಂದು ತಪ್ಪಿದಂತಾಗಿದೆ.

ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಬೈಕ್ ಸವಾರ ಸೇರಿದಂತೆ ಎಲ್ಲರೂ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.‌

KSRTC bus collides with bike and enters garden

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...