Home namma chikmagalur chikamagalur ಪ್ರಯಾಣಿಕರೇ ಬಸ್ ತಳ್ಳುವ ಕೆಎಸ್‌ಆರ್‌ಟಿಸಿ ಬಸ್‌
chikamagalurHomeLatest Newsnamma chikmagalur

ಪ್ರಯಾಣಿಕರೇ ಬಸ್ ತಳ್ಳುವ ಕೆಎಸ್‌ಆರ್‌ಟಿಸಿ ಬಸ್‌

Share
Share

ಚಿಕ್ಕಮಗಳೂರು: ಸರ್ಕಾರದ ಉಚಿತ ಯೋಜನೆಗಳ ಆರ್ಭಟದ ನಡುವೆ ಸಾರಿಗೆ ಬಸ್‌ಗಳ ನಿರ್ವಹಣೆ ಅಧೋಗತಿಗೆ ತಲುಪಿದೆಯೇ? ಇಂತಹದೊಂದು ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಬಲವಾಗಿ ಕೇಳಿಬರುತ್ತಿದೆ.

ಇದಕ್ಕೆ ಸಾಕ್ಷಿ ಎಂಬಂತೆ ಚಿಕ್ಕಮಗಳೂರು ನಗರದ ಮಧ್ಯರಸ್ತೆಯಲ್ಲೇ ಕೆಎಸ್‌ಆರ್‌ಟಿಸಿ ಬಸ್‌ವೊಂದು ಕೆಟ್ಟು ನಿಂತಿದ್ದು, ಪ್ರಯಾಣಿಕರೇ ಬಸ್ ತಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಿಚಾರವಾಗಿ ‘ಕರ್ನಾಟಕ ಪೋರ್ಟ್​​ಫೋಲಿಯೋ’ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್ ಮಾಡಲಾಗಿದ್ದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ. ಸದ್ಯ ಈ ಪೋಸ್ಟ್ ಹಾಗೂ ವಿಡಿಯೋ ವೈರಲ್ ಆಗುತ್ತಿದೆ.

ಚಿಕ್ಕಮಗಳೂರು ಬಸ್ ನಿಲ್ದಾಣದಿಂದ ಕಳಸಾಪುರಕ್ಕೆ ತೆರಳುತ್ತಿದ್ದ ಬಸ್, ನಗರದ ಎನ್‌ಎಂಸಿ (NMC) ಸಿಗ್ನಲ್ ಬಳಿ ತಲುಪುತ್ತಿದ್ದಂತೆ ತಾಂತ್ರಿಕ ದೋಷದಿಂದ ಇದ್ದಕ್ಕಿದ್ದಂತೆ ಸ್ಥಗಿತಗೊಂಡಿದೆ. ಟ್ರಾಫಿಕ್ ದಟ್ಟಣೆ ಇರುವ ಪ್ರದೇಶದಲ್ಲೇ ಬಸ್ ನಿಂತಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು. ಈ ವೇಳೆ ಪ್ರಯಾಣಿಕರು ಅನಿವಾರ್ಯವಾಗಿ ಬಸ್‌ನಿಂದ ಕೆಳಗಿಳಿದು ರಸ್ತೆಯಲ್ಲೇ ಬಸ್ ತಳ್ಳುವ ಮೂಲಕ ಡಿಪೋಗೆ ಕಳುಹಿಸಿಕೊಟ್ಟಿದ್ದಾರೆ.

ಒಂದೆಡೆ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ನೀಡುತ್ತಿದೆ. ಆದರೆ, ಬಸ್‌ಗಳ ಸುಸ್ಥಿತಿಯ ಬಗ್ಗೆ ಮಾತ್ರ ಕಿಂಚಿತ್ತೂ ಗಮನ ಹರಿಸುತ್ತಿಲ್ಲ ಎಂಬ ಟೀಕೆಗಳು ಕೇಳಿಬರುತ್ತಿವೆ. ‘ಫ್ರೀ ಕೊಡುವುದು ಮುಖ್ಯವಲ್ಲ, ನಾವು ಪ್ರಯಾಣಿಸುವ ಬಸ್ ಸುರಕ್ಷಿತವಾಗಿರಬೇಕು. ರಸ್ತೆಯಲ್ಲಿ ಬಸ್ ಕೆಟ್ಟು ನಿಂತರೆ ಪ್ರಯಾಣಿಕರ ಸಮಯ ಮತ್ತು ಘನತೆಗೆ ಬೆಲೆ ಇಲ್ಲವೇ?’ ಎಂದು ಸ್ಥಳೀಯರು ಮತ್ತು ಪ್ರಯಾಣಿಕರು ಪ್ರಶ್ನಿಸಿದ್ದಾರೆ.

ಉಚಿತ ಯೋಜನೆಗಳ ಪ್ರಚಾರಕ್ಕೆ ನೀಡುವ ಆದ್ಯತೆಯನ್ನು ಬಸ್‌ಗಳ ನಿರ್ವಹಣೆಗೆ ನೀಡುತ್ತಿಲ್ಲ ಎಂಬ ಆಕ್ರೋಶ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿರುವ ಬಗ್ಗೆಯೂ ‘ಕರ್ನಾಟಕ ಪೋರ್ಟ್​​ಫೋಲಿಯೋ’ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

KSRTC bus where passengers push the bus

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...