Home namma chikmagalur chikamagalur ವಿಶ್ವಮಾನದ ಸಂದೇಶ ಜಗತ್ತಿಗೆ ಸಾರಿದ ಮೊದಲ ದಾರ್ಶನಿಕ ಕುವೆಂಪು
chikamagalurHomeLatest Newsnamma chikmagalur

ವಿಶ್ವಮಾನದ ಸಂದೇಶ ಜಗತ್ತಿಗೆ ಸಾರಿದ ಮೊದಲ ದಾರ್ಶನಿಕ ಕುವೆಂಪು

Share
Share

ಚಿಕ್ಕಮಗಳೂರು:  ವಿಶ್ವಮಾನವ ಸಂದೇಶವನ್ನು ಈ ಜಗತ್ತಿಗೆ ಸಾರಿದ ಮೊದಲ ದಾ ರ್ಶನಿಕ ಹಾಗೂ ಮನುಜ ಮತ ಮತ್ತು ವಿಶ್ವ ಮತದ ಪರಿಕಲ್ಪನೆಯನ್ನು ತಂದವರು ಕುವೆಂಪು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಗುಣಸಾಗರ ವಿಜಯಕುಮಾರ್ ತಿಳಿಸಿದರು.

ತಾಲ್ಲೂಕಿನ ದೇವನೂರು ಗ್ರಾಮದಲ್ಲಿ ಶ್ರೀ ಲಕ್ಷ್ಮೀಶ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ಧ ಜಗದ ಕವಿ ಕುವೆಂಪು ಜನ್ಮದಿನೋತ್ಸವ, ನಾಡಗೀತೆ ಶತಮಾ ನೋತ್ಸವ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕುವೆಂಪು ಅವರು ವಿಶ್ವಮಾನವ ಸಂದೇಶವನ್ನು ಜಗತ್ತಿಗೆ ಸಾರಿ ಎಲ್ಲರನ್ನೂ ಕೂಡ ಸಮನಾಗಿ ಕಂಡ ವರು. ೧೨ನೇ ಶತಮಾನದ ಬಸವಣ್ಣನವರ ಪರಿಕಲ್ಪನೆ ಕುವೆಂಪು ಅವರಲ್ಲಿ ಕಾಣಬಹುದಾಗಿತ್ತು. ಸದ್ಯದಲ್ಲೇ ದೇವನೂರಿನಲ್ಲಿ ಗಮಕ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲು ತಯಾರಿ ನಡೆಸಲಾಗುತ್ತಿದೆ ಎಂದರು.

ಸಾಹಿತಿ ನಾಗಶ್ರೀ ತ್ಯಾಗರಾಜ್ ವಿಶೇಷ ಉಪನ್ಯಾಸ ನೀಡಿ ಮಾತನಾಡಿ ಕುವೆಂಪು ಅವರ ಶ್ರೀ ರಾಮಾ ಯಣ ದರ್ಶನಂ ಕೃತಿಗೆ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ. ಅವರ ಹಲವು ಕೃತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಕೂಡ ಲಭಿಸಿರುವುದು ಹೆಮ್ಮೆಯ ಸಂಗತಿ. ಅವರ ಕಾವ್ಯ ಮೀಮಾಂಸೆ ಹಾಗೂ ಹಲವು ಕವನಗಳಲ್ಲಿ ವೈಚಾರಿಕ ಪ್ರಜ್ಞೆಯನ್ನು ಕಾಣಬಹುದಾಗಿದೆ ಎಂದು ತಿಳಿಸಿದರು.

ಕಸಾಪ ತರೀಕೆರೆ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಸುನಿತಾ ಕಿರಣ್ ಮಾತನಾಡಿ ಅಮ್ಮ ಪೂಜ್ಯ ನೀಯ ಸ್ಥಾನವನ್ನು ಪಡೆದಿದ್ದಾರೆ. ಸನಾತನ ಧರ್ಮದಿಂದ ಹಿಡಿದು ಈವರೆಗೂ ಅಮ್ಮನಿಗೆ ಸರಿಸಮಾನ ವಾಗಿ ಬೇರೆ ಯಾರು ಕೂಡ ನಿಲ್ಲಲು ಸಾಧ್ಯವಿಲ್ಲ. ಆಕೆ ದೇವತಾ ಸ್ವರೂಪಿ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹಿಂದೆ ದೇವ ನೂರಿನ ಲಕ್ಷ್ಮೀಶ ಕವಿಯ ಆಸ್ಥಾನದಲ್ಲಿ ವಿನೂತನವಾದಂತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅದೇ ರೀತಿಯಲ್ಲಿ ಮಾರ್ಚ್ ತಿಂಗಳ ಅಂತ್ಯದ ಸಂದರ್ಭ ರಾಜ್ಯಮಟ್ಟದ ಗಮಕ ಸಾಹಿತ್ಯ ಸಮ್ಮೇಳನವನ್ನು ಆಯೋಜನೆ ಮಾಡಲಾಗುವುದು ಎಂದರು.

ಕಡೂರು ತಾಲೂಕು ಕನ್ನಡ ಸಾಹಿತ್ಯ ಪರಿ?ತ್ತಿನ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಎಸ್ ಕಲ್ಲೇ ಶ್ ನಗರ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶ್ರೀ ಲಕ್ಷ್ಮೀಶ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್.ಲಕ್ಷ್ಮಣ್, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಎನ್.ಸಿ.ಗುರುಮೂರ್ತಿ, ದತ್ತಿದಾನಿಗಳಾದ ಸಖರಾಯಪಟ್ಟಣ ಕೆ.ವಿ. ಚಂದ್ರಮೌಳಿ ಮತ್ತು ಚೇತನ್, ಶಾಲಾ ಉಪಾಧ್ಯಾಯರುಗಳಾದ ಆಮ್ಬ್ರಿನ್ , ಪ್ರಮೀ ಳಾ, ಮಲ್ಲಿಕಾರ್ಜುನ ಸ್ವಾಮಿ ಉಪಸ್ಥಿತರಿದ್ದರು.

Kuvempu was the first philosopher to spread a universal message to the world.

 

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...