Home namma chikmagalur chikamagalur ಹಿಂಬದಿಯಿಂದ ಬಂದ ಬೈಕ್ ಡಿಕ್ಕಿಗೆ ಕೂಲಿ ಕಾರ್ಮಿಕ ಸಾವು
chikamagalurHomeLatest Newsnamma chikmagalur

ಹಿಂಬದಿಯಿಂದ ಬಂದ ಬೈಕ್ ಡಿಕ್ಕಿಗೆ ಕೂಲಿ ಕಾರ್ಮಿಕ ಸಾವು

Share
Share

ಶೃಂಗೇರಿ: ರಾಷ್ಟ್ರೀಯ ಹೆದ್ದಾರಿ 169ರ ಶೌಕತ್ ಅಲಿ ಗ್ಯಾರೇಜ್ ಮುಂಭಾಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಂಜುನಾಥ್ ಎಂಬ ಕೂಲಿ ಕಾರ್ಮಿಕನಿಗೆ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿದ್ದಾರೆ.

ಜೂನ್ 6 ರಂದು ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಮಂಜುನಾಥ್ ಅವರಿಗೆ ಕೆಎ 14 EW 8530 ನಂಬರಿನ ಬೈಕ್ ಚಾಲಕ ಅತಿ ವೇಗವಾಗಿ ಬಂದು ಗುದ್ದಿದ್ದನು. ಅಪಘಾತದ ಬಳಿಕ ಅವರನ್ನು ಶೃಂಗೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ಆದರೆ ಮನೆಗೆ ಬಂದ ನಂತರ ತೀವ್ರ ತಲೆನೋವು ಕಾಣಿಸಿಕೊಂಡಿದ್ದರಿಂದ, ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪ ಆಸ್ಪತ್ರೆಗೆ ಹಾಗೂ ಅಲ್ಲಿಂದ ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಎನ್.ಆರ್.ಪುರ ಬಳಿ ದಾರಿಯಲ್ಲೇ ಮೃತಪಟ್ಟಿದ್ದಾರೆ. ಮೃತರ ಮಗಳು ಅನ್ನಪೂರ್ಣ ನೀಡಿದ ದೂರಿನನ್ವಯ ಶೃಂಗೇರಿ ಪೊಲೀಸರು ಬೈಕ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Laborer dies after being hit by a bike from behind

Share

Leave a comment

Leave a Reply

Your email address will not be published. Required fields are marked *

Don't Miss

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು ಇದೀಗ ಹಂಚಿಕೆ ಮಾಡಿದ್ದಾರೆ. ಮುಖ್ಯವಾಗಿ ಡಿಕೆಶಿ ಅವರು ಹಣಕಾಸು ಖಾತೆಯನ್ನು ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ. ಯಾರಿಗೆ...

5.50 ಕೋಟಿಯ ಟಿಂಬರ್ ವ್ಯವಹಾರದಲ್ಲಿ ವಂಚನೆ

ಚಿಕ್ಕಮಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಟಿಂಬರ್ ವ್ಯವಹಾರಕ್ಕೆ ಸಂಬಂಧಿಸಿದಂತೆ ದೊಡ್ಡ ಮಟ್ಟದ ವಂಚನೆ, ಜಗಳ ಹಾಗೂ ಕೊಲೆ ಬೆದರಿಕೆ ಪ್ರಕರಣವೊಂದು ಆಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಗೋಣಿಕೊಪ್ಪ...

Related Articles

ಲಕ್ಷ, ಲಕ್ಷ, ಅಲಕ್ಷ್ಯ ! ಹಣಕಾಸಿನ ವ್ಯವಹಾರ ಕುದುರುವುದಿಲ್ಲವೇ ?

ಸುಖರಾಯಪಟ್ಟಣ:ಜನಪ್ರತಿನಿಧಿಗಳು,ಅಧಿಕಾರಿಗಳು, ಹೋರಾಟಗಾರರು ಲಕ್ಷ, ಲಕ್ಷ ಅಲಕ್ಷ್ಯ ಮಾಡುತ್ತಿರುವುದೇಕೆ? ಯಾರಾದರೂ ಲಕ್ಷ, ಲಕ್ಷ ನಿರ್ಲಕ್ಷ್ಯ ಮಾಡಲು ಸಾಧ್ಯವೇ?...

ಬೆಲೆಏರಿಕೆ ಖಂಡಿಸಿ ನಗರದಲ್ಲಿ ಬ್ಲಾಕ್‌ಕಾಂಗ್ರೆಸ್ ವಿನೂತನ ಪ್ರತಿಭಟನೆ

ಚಿಕ್ಕಮಗಳೂರು : ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಚಿಕ್ಕಮಗಳೂರು ಹಾಗೂ ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್...

ಮೆಡಿಕಲ್ ಕಾಲೇಜಿನ ಹುಡುಗಿಯರ ಹಾಸ್ಟೆಲ್‌ಗೆ ನುಗ್ಗಿದ ಯುವಕ ಬಂಧನ

ಚಿಕ್ಕಮಗಳೂರು: ಸರ್ಕಾರಿ ಮೆಡಿಕಲ್ ಕಾಲೇಜಿನ ಹುಡುಗಿಯರ ಹಾಸ್ಟೆಲ್‌ಗೆ ಮಧ್ಯರಾತ್ರಿ ನುಗ್ಗಿ ಯುವಕಮೋರ್ವ ಓಡಾಟ ನಡೆಸಿರುವ ಘಟನೆ...

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ

ಕೊಟ್ಟಿಗೆಹಾರ : ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ...