Home namma chikmagalur chikamagalur ಆನೆ ದಾಳಿಗೆ ಸಿಲುಕಿ ಕೂಲಿ ಕಾರ್ಮಿಕನ ಬಲಿ
chikamagalurHomeLatest Newsnamma chikmagalur

ಆನೆ ದಾಳಿಗೆ ಸಿಲುಕಿ ಕೂಲಿ ಕಾರ್ಮಿಕನ ಬಲಿ

Share
Share

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆ ಅಟ್ಟಹಾಸ ಮುಂದುವರಿದಿದ್ದು, ಆನೆ ದಾಳಿಗೆ ಸಿಲುಕಿ ಕೂಲಿ ಕಾರ್ಮಿಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ತಿರುವಳ್ಳಿ ಮೂಲದ ಯಲ್ಲಪ್ಪ (45) ಎಂಬುವವರೇ ಮೃತಪಟ್ಟ ದುರ್ದೈವಿ.‌ ಮೃತ ಯಲ್ಲಪ್ಪ ಅವರು ಈ ಭಾಗದ ತೋಟಗಳಲ್ಲಿ ಕೂಲಿ ಕೆಲಸ ಹಾಗೂ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಘಟನೆಯ ದಿನ ಕೆಲಸ ಮುಗಿಸಿ ನಾಗೇಶ್ ಗೌಡರ ತೋಟದ ಹಾದಿಯ ಮೂಲಕ ಶ್ರೀಧರ್ ಗೌಡ ಎಂಬುವವರ ತೋಟದ ಲೈನ್ ಮನೆಗೆ ತೆರಳುತ್ತಿದ್ದರು. ಈ ವೇಳೆ ದಿಢೀರನೆ ಎದುರಾದ ಕಾಡಾನೆ ಯಲ್ಲಪ್ಪ ಅವರ ಮೇಲೆ ಭೀಕರವಾಗಿ ದಾಳಿ ನಡೆಸಿದ್ದು, ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕಾಫಿ ತೋಟಗಳ ನಡುವೆ ಆನೆಗಳ ಹಾವಳಿ ಹೆಚ್ಚುತ್ತಿರುವುದು ಕಾರ್ಮಿಕರಲ್ಲಿ ಮತ್ತು ಸ್ಥಳೀಯರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದ್ದು, ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Laborer killed in elephant attack

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲಾಸ್ಪತ್ರೆಗೆ ಎಂಎಲ್ಸಿ ಸಿ.ಟಿ. ರವಿ ಭೇಟಿ

ಚಿಕ್ಕಮಗಳೂರು: ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಔಷಧಿಗಳ ತೀವ್ರ ಕೊರತೆಯ ಕುರಿತು ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ, ಎಂಎಲ್ಸಿ ಸಿ.ಟಿ. ರವಿ ಅವರು ಇಂದು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ...

ಸ್ನಾನಕ್ಕೆ ಇಳಿದಿದ್ದ ಯುವಕ ಕೆರೆಯಲ್ಲಿ ನಾಪತ್ತೆ

ಕಳಸ : ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಅಂಬಾತೀರ್ಥದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಇಲ್ಲಿನ ಭದ್ರಾ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕೋಲಾರ ಜಿಲ್ಲೆಯಿಂದ...

Related Articles

ಕೆ.ಎಸ್.ಆರ್.ಟಿ.ಸಿಯ ದುಸ್ಥಿತಿ ಕೆಟ್ಟು-ಕೆಟ್ಟು ನಿಲ್ಲುತ್ತಿರುವ ಬಸ್ಸುಗಳು

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳು ಅತ್ಯಂತ ದುಸ್ಥಿತಿಯಲ್ಲಿ ಇದೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು...

ಸಂತ ಸೇವಾಲಾಲ್ ಜಯಂತಿಯಲ್ಲಿ ಸರ್ಕಾರದ ವಿರುದ್ಧದ ಆಕ್ರೋಶ

ಚಿಕ್ಕಮಗಳೂರು: ಕಾಫಿನಾಡಿನ ಕುವೆಂಪು ಕಲಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವು ಸಂಭ್ರಮದ ಬದಲು...

ಶ್ರೀ ಸಂತ ಸೇವಾಲಾಲ್ ತತ್ವಾದರ್ಶಗಳು ಮಾsರ್ಗದರ್ಶಿ:

ಚಿಕ್ಕಮಗಳೂರು:  ಹಿಂಸೆ, ಅಸಮಾನತೆ ಇರುವ ಪ್ರಸ್ತುತ ಸಮಾಜಕ್ಕೆ ಶ್ರೀ ಸಂತ ಸೇವಾಲಾಲ್ ಅವರ ತತ್ವಾದರ್ಶಗಳು ಮಾರ್ಗದರ್ಶನ...

ಜೂಜಾಟದಲ್ಲಿ ತೊಡಗಿಕೊಂಡಿದ್ದ ಮೂವರ ಬಂಧನ

ಚಿಕ್ಕಮಗಳೂರು: ಜಿಲ್ಲೆಯ ದೋಣಗುಡಿ ಬಳಿ ಇಸ್ಪೇಟು ಜೂಜಾಟದಲ್ಲಿ ತೊಡಗಿಕೊಂಡಿದ್ದ ಮೂವರನ್ನು ಬಂಧಿಸಿ 17 ಸಾವಿರ ರು....