Home Crime News ನಿತ್ಯ ಜಗಳದ ಪರಿಣಾಮ ಕಾರ್ಮಿಕ ಮಹಿಳೆ ಕೊಲೆ
Crime NewschikamagalurHomeLatest Newsnamma chikmagalur

ನಿತ್ಯ ಜಗಳದ ಪರಿಣಾಮ ಕಾರ್ಮಿಕ ಮಹಿಳೆ ಕೊಲೆ

Share
Share

ಚಿಕ್ಕಮಗಳೂರು: ನಿತ್ಯ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ.

ಪತ್ನಿಯನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಲಾಗಿದೆ.

ಕಳಸ ತಾಲ್ಲೂಕಿನ ಮರಸಣಿಗೆ ಸಮೀಪದ ಯಮಗೊಂಡ ಎಸ್ಟೇಟ್ ಕೂಲಿ ಲೈನಿನಲ್ಲಿ ಘಟನೆ ನಡೆದಿದೆ.

ಮಂಜುಳ (32) ಮೃತ ದುರ್ದೈವಿ, ರಕ್ತಸ್ರಾವದಿಂದ ಬಳಲುತ್ತಿದ್ದ ಮಂಜುಳಾಳನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಮಗುವಿನ ಎದುರೇ ತಾಯಿಯನ್ನ ಕೊಂದ ಪಾಪಿ ಗಂಡ.ಯಮಗೊಂಡ ಕಾಫಿತೋಟದ ಲೈನ್ ಮನೆಯಲ್ಲಿ ವಾಸವಿದ್ದ ಮಂಜುಳಾ ಹಾಗೂ ಆತನ ಪತಿ ನಿತ್ಯ ಜಗಳ ಆಡೋದ ನೋಡಿ ಕೆಲಸಕ್ಕೆ ಬರಬೇಡಿ ಎಂದು ತೋಟದ ರೈಟರ್ ತಿಳಿಸಿದ್ದ.

ತೋಟದ ಕಾರ್ಮಿಕರ ಮನೆಯಲ್ಲಿ ಗಂಡ ಹೆಂಡತಿ ಜಗಳ ತಾರಕ್ಕಕ್ಕೆರಿ ಪತಿ ಕಬ್ಬಿಣದ ರಾಡ್ ನಿಂದ ಹೊಡೆದು ಪತ್ನಿಯನ್ನು ಕೊಲೆ ಮಾಡಿದ್ದಾನೆ.ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Laborer woman murdered as a result of daily quarrel

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...