ಚಿಕ್ಕಮಗಳೂರು: ರಾಜ್ಯದಲ್ಲಿ ಯೂರಿಯಾ ಗೊಬ್ಬರದ ಅಭಾವ ಸೃಷ್ಟಿಯಾಗಲು ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯೇ ಕಾರಣ ,ಗೊಬ್ಬರ ಹಂಚಿಕೆಯಲ್ಲಿಯೂ ಕೇಂದ್ರ ಸರ್ಕಾರ ರಾಜಕಾರಣ ಮಾಡುತ್ತಿರುವುದು ಖಂಡನಿಯ ಎಂದು ಕೆಪಿಸಿಸಿವಕ್ತಾರ ಹೆಚ್.ಹೆಚ್ ದೇವರಾಜ್ ಕಿಡಿಕಾರಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಇಂದು ಕರೆದಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಮರ್ಪಕವಾಗಿ ಗೊಬ್ಬರ ವಿತರಣೆ ಮಾಡಲು ವಿಫಲವಾಗಿರುವ ಕೇಂದ್ರ ಸರ್ಕಾರ ರಾಜ್ಯದ ಅಮಾಯಕ ರೈತರಿಗೆ ಮಣ್ಣು ತಿನಿಸುವ ನಾಟಕವಾಡಿ ಅವರ ಕುಟುಂಬಕ್ಕೆ ಗೊಬ್ಬರ ನೀಡಿದ್ದಾರೆ. ರೈತರಿಗೆ ದೊರೆಯದ ಗೊಬ್ಬರ ಬಿಜೆಪಿ ನಾಯಕರಿಗೆ ಹೇಗೆ ದೊರೆಯಿತು ಎಂದು ಪ್ರಶ್ನಿಸಿದರು.
ರಾಜ್ಯದ ಸಂಸದರು ಕೇಂದ್ರ ಸಚಿವ ಜೆಪಿ ನಡ್ದಾರರನ್ನು ಭೇಟಿ ಮಾಡಿ ಯೂರಿಯಾ ಗೊಬ್ಬರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ೧.೩೫ ಲಕ್ಷ ಟನ್ ರಸಗೊಬ್ಬರ ಪೂರೈಕೆ ಮಾಡುವ ಭರವಸೆ ನೀಡಿದ್ದಾರೆ. ಈವರೆಗೂ ರಾಜ್ಯಕ್ಕೆ ಗೊಬ್ಬರ ಪೂರೈಕೆ ಮಾಡಲು ಮೀನಾ ಮೇಷ ಎಣಿಸಿದ ಕೇಂದ್ರ ಸರ್ಕಾರ ಇದೀಗ ಪೂರೈಕೆ ಮಾಡುವ ಭರವಸೆ ನೀಡಿರುವುದು ಯಾವ ಉದ್ದೇಶಕ್ಕೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದಿದೆ ಎಂಬ ಒಂದೇ ಕಾರಣಕ್ಕೆ ರಾಜ್ಯದ ಅರ್ಥಿಕ ಪಾಲನ್ನು ನೀಡದೆ ವಂಚಿಸಿದೆ ಅದರೊಂದಿಗೆ ಗೊಬ್ಬರವನ್ನು ಹಂಚಿಕೆ ಮಾಡದೆ ರೈತ ಜೀವನದೊಂದಿಗೆ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಹೇಳಿದರು.
ಬಿಜೆಪಿಯವರಿಗೆ ರೈತರ ಸಂಕಷ್ಟದ ಅರಿವಿಲ್ಲ. ಇದೊಂದು ರೈತ ವಿರೋಧಿ ಸರ್ಕಾರ ಎಂದು ಹೇಳಿದ ಅವರು ಹಂಚಿಕೆ ಮಾಡಿದ ರಸಗೊಬ್ಬರವನ್ನು ಕಾಂಗ್ರೆಸ್ ಸರ್ಕಾರ ಕಾಳ ಸಂತೆಯಲ್ಲಿ ಮಾರಾಟ ಮಾಡಿಕೊಂಡಿದೆ ಎಂಬ ಆರೋಪ ಮಾಡುವ ಮೂಲಕ ಸರ್ಕಾರದ ಗೂಬೆ ಕೂರಿಸುವ ಪ್ರಯತ್ನ ಮಾಡಿ ಇದೀಗ ರಾಜ್ಯದ ಜನರು ಅಪಹಾಸ್ಯ ಕೀಡಾಗಿದೆ ಎಂದು ಮೂದಲಿಸಿದರು.
ರಾಜ್ಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಎಲ್ಲಾ ವಿಚಾರದಲ್ಲಿಯೂ ರಾಜಕಾರಣ ಮಾಡುವುದನ್ನು ಕೂಡಲೇ ನಿಲ್ಲಿಸಬೇಕು. ಆರ್ ಅಶೋಕ್ ವಿರೋಧ ಪಕ್ಷದ ನಾಯಕನಾಗಲುಅನರ್ಹರಾಗಿದ್ದು ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಮಲೆನಾಡಿನಲ್ಲಿ ಇತ್ತೀಚೆಗೆ ಪ್ರಾಣಿ ಮತ್ತು ಮಾನವ ನಡುವೆ ಸಂಘರ್ಷ ನಡೆಯುತ್ತಿದ್ದು ಸಾವು ,ನೋವುಗಳು ಸಂಭವಿಸುತ್ತಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು,ತಜ್ಞರು,ಅಧಿಕಾರಿಗಳು ಸಮಾಲೋಚನೆ ನಡೆಸಿ ವೈಜ್ಞಾನಿಕ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇತ್ತೀಚೆಗೆ ಸುರಿಯುತ್ತಿರುವ ಬಾರಿ ಗಾಳಿ ಮಳೆಯಿಂದ ಮಲೆನಾಡಿನಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿ ಗ್ರಾಮೀಣ ಪ್ರದೇಶಗಳು ಕತ್ತಲಿನಲ್ಲಿ ಕೊಳೆಯುವಂತಾಗಿದೆ.ಗ್ರಾಮೀಣ ಪ್ರದೇಶಗಳಿಗೆ ಸಮರೋಪಾದಿಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲು ವಿಶೇಷ ತಂಡ ರಚಿಸಿ ಕಾರ್ಯಚರಣೆಗೆ ಮುಂದಾಗುವಂತೆ ಉಸ್ತುವಾರಿ ಸಚಿವರಿಗೆ ಸಲಹೆ ನೀಡಲಾಗುವುದು ಎಂದರು.
ಈ ಘೋಷ್ಠಿಯಲ್ಲಿ ಮುಖಂಡರಾದ ಜಯರಾಜ್ ಅರಸ್ ,ಮೊಹಮ್ಮದ್ ಅಕ್ಬರ್, ನಾಗೇಶ್,ಶ್ರೀನಿವಾಸ ದೇವಾಂಗ ಹಿರೇಮಗಳೂರು ರಾಮಚಂದ್ರ ಇದ್ದರು
Lack of fertilizer is due to the step mother attitude of the central government
Leave a comment