Home ಶೃಂಗೇರಿಯ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಗುಡ್ಡ ಕುಸಿತ
HomechikamagalurLatest Newsnamma chikmagalur

ಶೃಂಗೇರಿಯ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಗುಡ್ಡ ಕುಸಿತ

Share
Share

ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಗಾಳಿ–ಮಳೆ ಅಬ್ಬರ ಮುಂದುವರೆದಿದ್ದು ಭಾರೀ ಗಾಳಿ-ಮಳೆ ಮಳೆಗೆ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದ ಬಳಿ ನಡೆದಿದೆ.

ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿಯದಂತೆ ರಸ್ತೆ ಬದಿಗೆ ಕಟ್ಟಿದ್ದ ಕಬ್ಬಿಣದ ತಡೆಗೋಡೆಗಳು ಕುಸಿದು ಬಿದ್ದಿದೆ. ಮಳೆ ಜೊತೆ ಗಾಳಿ ಕೂಡ  ವೇಗವಾಗಿ ಬೀಸುತ್ತಿರುವುದರಿಂದ ಅಲ್ಲಲ್ಲಿ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ರಾತ್ರಿ ಇಡೀ ಒಂದೇ ಸಮನೆ ನಿರಂತರವಾಗಿ ಮಳೆಯಾಗಿರುವುದರಿಂದ ಶೃಂಗೇರಿಯಲ್ಲಿ ನಾನಾ ಅವಾಂತರಗಳು ಸೃಷ್ಟಿಯಾಗಿವೆ.‌

ಈ ವರ್ಷ ಜನವರಿಯಿಂದಲೂ ನಿರಂತರವಾಗಿ ಮಳೆಯಾಗಿದ್ದು ಭೂಮಿಯ ತೇವಾಂಶ ಕೂಡ ಹೆಚ್ಚಾಗಿದೆ. ಮಳೆ ಪ್ರಮಾಣ ಮತ್ತಷ್ಟು ಹೆಚ್ಚಾದರೆ ಇನ್ನಷ್ಟು ಭೂಮಿ ಕುಸಿಯುವ ಆತಂಕ ಎದುರಾಗಿದ್ದು ವಾಹನ ಚಾಲಕರು ಬದಲಿ ಮಾರ್ಗವನ್ನು ಬಳಸಬೇಕಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆ ಮುಂದುವರೆದಿದ್ದು ಎಡಬಿಡದೆ ಒಂದೇ ಸಮನೆ ಮಳೆ ಸುರಿಯುತ್ತಿದೆ.

ನಿನ್ನೆ ಕೂಡ ಚಂದ್ರದ್ರೋಣ ಪರ್ವತ ಶ್ರೇಣಿಯ ಕವಿಕಲ್ ಗಂಡಿ ಬಳಿ ಸಣ್ಣ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿತ್ತು. ಇಂದು ಶೃಂಗೇರಿಯಲ್ಲಿ ಭೂ ಕುಸಿತ ಉಂಟಾಗಿದೆ. ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ಮಳೆ ನಿರಂತರವಾಗಿದ್ದು ಮತ್ತಷ್ಟು ಅನಾಹುತ ಸಂಭವಿಸುವ ಆತಂಕ ಸ್ಥಳಿಯರನ್ನ ಕಾಡುತ್ತಿದೆ.‌

Landslide on National Highway 169 in Sringeri

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...