Home namma chikmagalur chikamagalur ಐಎ ಆಧಾರಿತ ಸಂಚಾರ ನಿರ್ವಹಣಾ ವ್ಯವಸ್ಥೆಗೆ ಚಾಲನೆ
chikamagalurHomeLatest Newsnamma chikmagalur

ಐಎ ಆಧಾರಿತ ಸಂಚಾರ ನಿರ್ವಹಣಾ ವ್ಯವಸ್ಥೆಗೆ ಚಾಲನೆ

Share
Share

ಚಿಕ್ಕಮಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಸ್ವಯಂ ಚಾಲಿತ ದಂಡ ನಿರ್ವಹಣಾ ವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆಗಾಗಿ ಜಿಲ್ಲಾ ಪೊಲೀಸ್ ವತಿಯಿಂದ ಆರಂಭಿಸಲಾಗಿರುವ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ರಸ್ತೆ ಸಂಚಾರ ನಿರ್ವಹಣಾ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಸೋಮವಾರ ಚಾಲನೆ ನೀಡಿದರು.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ, ಅಪರಾಧ ಪ್ರಕರಣಗಳ ನಿಯಂತ್ರಣ ತಡೆಗಟ್ಟುವಿಕೆ ಹಾಗೂ ಹೆಚ್ಚುತ್ತಿರುವ ವಾಹನ ದಟ್ಟಣೆ ಸಂಬಂಧ ರಸ್ತೆ ಸಂಚಾರ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸುಮಾರು 41 ಸೌರ ವಿದ್ಯುತ್ ಆಧಾರಿತ ಕೃತಕ ಬುದ್ಧಿಮತ್ತೆ (ಎಐ) ಕ್ಯಾಮರಾ ಕಣ್ಗಾವಲು ಸಂಪರ್ಕ ಜಾಲವನ್ನು ಚಿಕ್ಕಮಗಳೂರು ನಗರದೆಲ್ಲೆಡೆ ಅಳವಡಿಸಲಾಗಿದ್ದು, ಇಂಟಿಗ್ರೇಟೆಡ್ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ (ಐಸಿಸಿಸಿ) ಮೂಲಕ ಇದನ್ನು ನಿರ್ವಹಿಸಲಾಗುತ್ತಿದೆ.

ಕೃತಕ ಬುದ್ಧಿಮತ್ತೆ ಆಧಾರಿತ ರಸ್ತೆ ಸಂಚಾರ ನಿರ್ವಹಣಾ ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್ ಅವರು, “ಮೆಸ್ಕಾಂ ಸಹಯೋಗದಲ್ಲಿ ಕಾರ್ಪೋರೇಟ್ ಹೊಣೆಗಾರಿಕೆ (CSR) ನಿಧಿಯಡಿ ಅಂದಾಜು 1.75 ಕೋಟಿ ರೂ. ವೆಚ್ಚದಲ್ಲಿ ಎರಡು ಹಂತಗಳಲ್ಲಿ ಯೋಜನೆ ಜಾರಿಗೊಳಿಸಲಾಗುತ್ತಿದೆ,” ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಎಚ್‌.ಡಿ. ತಮ್ಮಯ್ಯ, ಜಿಲ್ಲಾಧಿಕಾರಿ ಎನ್‌.ಎಂ. ನಾಗರಾಜ್‌, ಜಿಲ್ಲಾ ರಕ್ಷಣಾಧಿಕಾರಿ ಜಿತೇಂದ್ರ ಕುಮಾರ್‌ ದಯಾಮ ಮತ್ತಿತರರು ಇದ್ದರು.

Launch of AI-based traffic management system

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...