Home ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ
HomeLatest Newsnamma chikmagalurTarikere

ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ

Share
Share

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ೪ ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ.

ಲಿಂಗದಹಳ್ಳಿ, ಉಡೇವಾ ಸುತ್ತಮುತ್ತ ಚಿರತೆ ಓಡಾಟ ನಡೆಸಿ ಆತಂಕ ಮೂಡಿಸಿತ್ತು. ೮ಕ್ಕೂ ಹೆಚ್ಚು ನಾಯಿಗಳನ್ನು ಈ ಚಿರತೆ ಬೇಟೆಯಾಡಿತ್ತು. ಜನ, ಮನೆಯಿಂದ ಹೊರಬರೋದಕ್ಕೂ ಸಹ ಹಿಂದೇಟು ಹಾಕುತ್ತಿದ್ದರು. ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದರು.

ಲಿಂಗದಹಳ್ಳಿ ಹಾಗೂ ಉಡೇವಾ ಸುತ್ತಮುತ್ತ ಕಳೆದ ಕೆಲವು ದಿನಗಳಿಂದ ಚಿರತೆ ಓಡಾಡುತ್ತಿದ್ದುದರಿಂದ ಗ್ರಾಮಸ್ಥರಲ್ಲಿ ತೀವ್ರ ಆತಂಕ ನಿರ್ಮಾಣವಾಗಿತ್ತು.

ಚಿರತೆ ಸೆರೆಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು. ಅದಕ್ಕೆ ಸ್ಪಂದಿಸಿದ ಅರಣ್ಯ ಇಲಾಖೆ ಬೋನು ಅಳವಡಿಸಿತ್ತು. ಇದೀಗ ಚಿರತೆ ಬೋನಿಗೆ ಸೆರೆಯಾಗಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

Leopard falls into a trap set by the forest department

 

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...