Home namma chikmagalur ಮಾತೃಭಾಷೆ ಕನ್ನಡವನ್ನು ಪ್ರೀತಿಯಿಂದ ಅಪ್ಪಿಕೊಳ್ಳೋಣ
namma chikmagalurchikamagalurHomeLatest News

ಮಾತೃಭಾಷೆ ಕನ್ನಡವನ್ನು ಪ್ರೀತಿಯಿಂದ ಅಪ್ಪಿಕೊಳ್ಳೋಣ

Share
Share

ಚಿಕ್ಕಮಗಳೂರು: ಕನ್ನಡತನಕ್ಕೆ ಸವಾಲನ್ನು ಒಡ್ಡುತ್ತಿರುವ ಇಂಗ್ಲಿಷ್ ಭಾಷೆಯ ವಿರುದ್ಧ ಕನ್ನಡಿಗರೆಲ್ಲಾ ಒಂದಾಗುವುದರ ಮೂಲಕ ಜ್ಞಾನ ಸಂಪಾದನೆಗೆ ಎಲ್ಲಾ ಭಾಷೆಗಳು ಬೇಕು. ಇಂಗ್ಲಿಷ್ ಮುಂತಾದ ಹಲವು ಭಾಷೆಗಳನ್ನು ವ್ಯವಹಾರಕ್ಕಾಗಿ ಕಲಿತು ಬಳಸೋಣ. ಆದರೆ, ಆದರೆ ನಮ್ಮ ಮಾತೃಭಾಷೆ ಕನ್ನಡವನ್ನು ಪ್ರೀತಿಯಿಂದ ಅಪ್ಪಿಕೊಳ್ಳೋಣ, ಉಳಿಸೋಣ, ಬೆಳೆಸೋಣ. ಮುಂದಿನ ಪೀಳಿಗೆಗೆ ಹೆಮ್ಮೆಯಿಂದ ನೀಡೋಣ ಎಂದು ರಾಜ್ಯ ಇಂಧನ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಭಿಪ್ರಾಯಿಸಿದರು.

ಅವರು ಇಂದು ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ ಏರ್ಪಡಿಸಿದ್ದ ೭೦ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ ಸ್ವೀಕರಿಸಿ ಜನತೆಗೆ ರಾಜ್ಯೋತ್ಸವ ಸಂದೇಶ ನೀಡಿದರು.

ಕನ್ನಡ ಭಾಷೆ ಕ್ರಿ.ಪೂ ದಿಂದಲೂ ಅಸ್ತಿತ್ವ ಪಡೆದುಕೊಂಡಿದ್ದು, ಕನ್ನಡ ನುಡಿ ಮೊದಲು ಬೆಳಕಿಗೆ ಬಂದಿದು ಚಿಕ್ಕಮಗಳೂರು ಸಮೀಪ ಇರುವ ಬೇಲೂರು ತಾಲ್ಲೂಕಿನ ಹಲ್ಮಿಡಿ ಶಾಸನದಲ್ಲಿ ಪ್ರಸಿದ್ಧಿಯಾಗಿದೆ. ಕನ್ನಡ ಸಾಹಿತ್ಯ ಲೋಕಕ್ಕೆ ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯಗಳು ಪ್ರಕಾರಗಳು ವಿಶೇಷ ಬೇರುಗಳನ್ನು ತಂದುಕೊಟ್ಟಿದೆ. ನಮ್ಮ ಕನ್ನಡದ ಜನಪದಿಗರು ಜಾನಪದ ಗೀತೆಗಳ ಮೂಲಕ ಈ ನೆಲದ ಸೊಗಡನ್ನು ಹೆಚ್ಚಿಸಿದ್ದಾರೆಂದು ಹೇಳಿದರು.

ರಾಷ್ಟ್ರಕವಿ ಕುವೆಂಪು ಅವರು ಹೇಳಿದಂತೆ ‘ಎಲ್ಲಾದರೂ ಇರು, ಎಂತಾದರು ಇರು ಎಂದೆಂದಿಗು ನೀ ಕನ್ನಡವಾಗಿರು’ ಎನ್ನುವಂತೆ ಎಲ್ಲರು ಕನ್ನಡ ತನ ಉಳಿಸಲು ಕಂಕಣಬದ್ಧರಾಗಬೇಕು. ಸರ್ಕಾರ ೨೦೨೩ ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರಿಗೆ ಲಿಂಗತಾರತಮ್ಯವನ್ನು ಸರಿದೂಗಿಸುವ ಜಾತ್ಯಾತೀತವಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಅಡ್ಡಿ ಆತಂಕವಿಲ್ಲದೆ ವಿರೋಧಿಗಳ ನಿರಂತರ ವಿರೋಧದ ನಡುವೆಯು ಅತ್ಯಂತ ಸಮರ್ಪಕವಾಗಿ ಅನುಷ್ಠಾನಗೊಳಿಸಲಾತ್ತಿದೆ ಎಂದರು.

ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದರೂ ಅಭಿವೃದ್ಧಿ ವಿಷಯದಲ್ಲಿ ಸರ್ಕಾರ ರಾಜಿ ಮಾಡಿಕೊಳ್ಳದೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತುಕೊಟ್ಟಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿಯೂ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು. ಜಿ.ಪಂ ವತಿಯಿಂದ ಹೆಣ್ಣುಮಕ್ಕಳ ಭದ್ರಬಾಲ್ಯ ಸುರಕ್ಷತೆಯ ಬಗ್ಗೆ ಕಾಳಜಿ ಉಳ್ಳ ವಿನೂತನ ವಿಶೇಷ ಕಾರ್ಯಕ್ರಮವಾಗಿದ್ದು, ಇದನ್ನು ಈ ಬಾರಿಯ ಮೈಸೂರು ದಸರಾದಲ್ಲಿ ಸ್ತಬ್ದಚಿತ್ರ ಪ್ರದರ್ಶನದಲ್ಲಿ ತೃತೀಯ ಸ್ಥಾನ ಲಭಿಸಿದೆ ಎಂದು ಹೇಳಿದರು.

ಜಿಲ್ಲೆಯ ೫ ವಿಧಾನಸಭಾ ಕ್ಷೇತ್ರಗಳ ಶಾಸಕರುಗಳಿಗೆ ತಲಾ ೫೦ ಕೋಟಿ ರೂ.ನಂತೆ ೨೫೦ ಕೋಟಿ ರೂಗಳ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು. ನಗರದಲ್ಲಿ ನೂತನವಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದ್ದು, ೧೬ ಕೋಟಿ ರೂ ವೆಚ್ಚದಲ್ಲಿ ಕಡೂರಿನಲ್ಲಿ ಪ್ರಜಾಸೌಧ ಕಟ್ಟಡ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ತಿಳಿಸಿದರು.

ಭೂಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳನ್ನು ಡಿಜಿಟಲೀಕರಣ ಪ್ರಕ್ರಿಯೆ ಜಿಲ್ಲೆಯ ೯ ತಾಲ್ಲೂಕುಗಳ ಪೈಕಿ ಒಟ್ಟು ೭ ತಾಲ್ಲೂಕುಗಳಲ್ಲಿ ಪೂರ್ಣಗೊಂಡಿದ್ದು, ಇನ್ನುಳಿದ ೨ ತಾಲ್ಲೂಕುಗಳಲ್ಲಿ ಶೀಘ್ರವಾಗಿ ಮುಕ್ತಾಯಗೊಳಿಸಲು ಕ್ರಮವಹಿಸಲಾಗುವುದೆಂದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತರೀಕೆರೆಯ ಅಮೃತಾಪುರ, ಕಡೂರಿನ ಸಿಂಗಟಗೆರೆ, ಚಿಕ್ಕಮಗಳೂರು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಗಳ ನಿರ್ಮಾಣ ಮತ್ತು ಚಿಕ್ಕಮಗಳೂರು ತಾಲ್ಲೂಕಿಗೆ ೨ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣ ಹಾಗೂ ಪ.ಜಾ ಕಾಲೋನಿಗಳ ಮೂಲಕಭೂತ ಸೌಕರ್ಯ ಅಭಿವೃದ್ಧಿಗೆ ೧೨೦.೧೩ ಕೋಟಿ ರೂ ಬಿಡುಗಡೆಯಾಗಿದೆ ಎಂದರು.

ಕನ್ನಡ ನಮ್ಮ ಮಾತೃಭಾಷೆ, ಕನ್ನಡಾಂಭೆಯ ಮಕ್ಕಳಾದ ನಾವು ನ.೧ ರಂದು ಕನ್ನಡ ರಾಜ್ಯೋತ್ಸವ ಆಚರಿಸುವ ಮೂಲಕ ಕನ್ನಡಾಂಭೆಗೆ ಗೌರವ ಸಲ್ಲಿಸುವುದು ಮಾತ್ರವಲ್ಲ, ಕನ್ನಡ ಭಾಷಾಭಿಮಾನ ಬೆಳೆಸಿಕೊಳ್ಳಬೇಕೆಂದು ಕರೆನೀಡಿದರು. ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಇಲಾಖೆಗಳು ಮತ್ತು ಶಾಲಾ ಕಾಲೇಜುಗಳಿಂದ ಸ್ತಬ್ದಚಿತ್ರಗಳ ಪ್ರದರ್ಶನ ನಡೆಯಿತು. ಪೊಲೀಸ್ ಮತ್ತು ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹೆಚ್.ಡಿ. ತಮ್ಮಯ್ಯ ವಹಿಸಿದ್ದರು. ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ ಪ್ರಾಣೇಶ್, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ, ಎಸ್.ಎಲ್ ಭೋಜೇಗೌಡ, ಭದ್ರಾ ಕಾಡಾ ಅಧ್ಯಕ್ಷ ಡಾ. ಕೆ.ಪಿ ಅಂಶುಮಂತ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಶಿವಾನಂದಸ್ವಾಮಿ, ಜಿಲ್ಲಾಧಿಕಾರಿ ಸಿ.ಎನ್ ಮೀನಾನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ, ಜಿ.ಪಂ ಸಿಇಓ ಹೆಚ್.ಎಸ್. ಕೀರ್ತನ, ತಹಶೀಲ್ದಾರ್ ರೇಷ್ಮ, ನಗರಸಭಾಧ್ಯಕ್ಷೆ ಶೀಲಾದಿನೇಶ್, ಉಪಾಧ್ಯಕ್ಷೆ ಲಲಿತಾನಾಯ್ಕ್, ಪೌರಾಯುಕ್ತ ಬಿ.ಸಿ. ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.

Let’s embrace our mother tongue Kannada with love

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...