Home Crime News ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು
Crime NewsHomeKadurLatest Newsnamma chikmagalur

ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Share
Share

ಕಡೂರು: ಪರೀಕ್ಷೆಗೆಂದು ವಿದ್ಯಾರ್ಥಿ ಕಾಲೇಜಿಗೆ ತೆರಳಿದ್ದ ಸಮಯ ಸಾಧಿಸಿದ ಖದೀಮರು, ಮನೆಯ ಬೀಗ ಮುರಿದು ಒಳನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿರುವ ಘಟನೆ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಲೋಹಿತ್ ಬಿ. ಎಂಬ ಬಿ.ಎ. ವಿದ್ಯಾರ್ಥಿ ಕಡೂರಿನ ಜೂನಿಯರ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಏಪ್ರಿಲ್ 15ರಂದು ಪರೀಕ್ಷೆ ಬರೆಯಲು ಶಿವಮೊಗ್ಗದಿಂದ ಬೆಳಗ್ಗೆ ಕಡೂರಿಗೆ ಬಂದಿದ್ದರು. ಬೆಳಗ್ಗೆ ಸುಮಾರು 10 ಗಂಟೆಗೆ ಅವರು ತಮ್ಮ ಮನೆಗೆ ಹೋದಾಗ, ಮನೆಯ ಮುಂಭಾಗದ ಬಾಗಿಲಿನ ಇಂಟರ್ ಲಾಕ್ ಬೀಗವನ್ನು ಯಾರೋ ಮುರಿದಿರುವುದು ಕಂಡುಬಂದಿದೆ. ಆತಂಕಗೊಂಡ ಲೋಹಿತ್ ತಕ್ಷಣವೇ ತಮ್ಮ ತಾಯಿಗೆ ವಿಷಯ ತಿಳಿಸಿ, ಮನೆಯೊಳಗೆ ಹೋಗಿ ಪರಿಶೀಲಿಸಿದ್ದಾರೆ.

ಮನೆಯ ಹಾಲ್‌ನಲ್ಲಿದ್ದ ಗಾಡೇಜ್ ಬೀರುವಿನ ಬಾಗಿಲನ್ನು ಕಳ್ಳರು ಯಾವುದೋ ಆಯುಧದಿಂದ ಮೀಟಿ, ಅದರೊಳಗಿನ ಲಾಕ್ ಅನ್ನು ಕೂಡ ಮುರಿದಿರುವುದು ಕಂಡುಬಂದಿದೆ. ಬೀರುವಿನಲ್ಲಿದ್ದ ವಸ್ತುಗಳೆಲ್ಲಾ ನೆಲದ ಮೇಲೆ ಹರಡಿಕೊಂಡಿದ್ದವು. ಕಳ್ಳರು ಬೀರುವಿನಲ್ಲಿದ್ದ ಸುಮಾರು 40 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರ (ಅಂದಾಜು ಬೆಲೆ ರೂ. 4,00,000/-), 13 ಗ್ರಾಂ ತೂಕದ ಚಿನ್ನದ ಚೈನ್ (ಅಂದಾಜು ಬೆಲೆ ರೂ. 1,30,000/-), 5 ಗ್ರಾಂ ತೂಕದ ಚಿನ್ನದ ಕಿವಿ ಮಾಟಿ ಮತ್ತು ಕೊಂಡಿಗಳು (ಅಂದಾಜು ಬೆಲೆ ರೂ. 50,000/-) ಹಾಗೂ ಸುಮಾರು 60 ಗ್ರಾಂ ತೂಕದ ಬೆಳ್ಳಿಯ ಕಾಲ್ ಚೈನ್ (ಅಂದಾಜು ಬೆಲೆ ರೂ. 12,000/-) ಮತ್ತು 8000 ರೂಪಾಯಿ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.

ಒಟ್ಟಾರೆಯಾಗಿ ಸುಮಾರು 5,80,000/- ರೂಪಾಯಿ ಮೌಲ್ಯದ 58 ಗ್ರಾಂ ಚಿನ್ನದ ಒಡವೆಗಳು, 12,000/- ರೂಪಾಯಿ ಮೌಲ್ಯದ ಬೆಳ್ಳಿಯ ವಸ್ತುಗಳು ಹಾಗೂ 8000/- ರೂಪಾಯಿ ನಗದನ್ನು ಕಳ್ಳರು ದೋಚಿದ್ದಾರೆ ಎಂದು ಲೋಹಿತ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Lock broken, jewellery worth lakhs stolen

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...