Home Latest News ಲೋಕ ಅದಾಲತ್‌ನಿಂದ ಕಕ್ಷಿದಾರರ ಬಾಂಧವ್ಯ ಉಳಿವು
Latest NewschikamagalurHomenamma chikmagalur

ಲೋಕ ಅದಾಲತ್‌ನಿಂದ ಕಕ್ಷಿದಾರರ ಬಾಂಧವ್ಯ ಉಳಿವು

Share
Share

ಚಿಕ್ಕಮಗಳೂರು:  ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದಿಂದ ಪ್ರಕರಣಗಳು ಶೀಘ್ರ ಇತ್ಯರ್ಥಗೊಳ್ಳುವುದರ ಜೊತೆಗೆ ಕಕ್ಷಿದಾರರಲ್ಲಿ ಬಾಂಧವ್ಯವೂ ಉಳಿಯಲಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರೂ, ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರೂ ಆದ ರಾಜೇಶ್ವರಿ ಎನ್.ಹೆಗಡೆ ಹೇಳಿದರು.

ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಲೋಕ ಅದಾಲತನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿ ನ್ಯಾಯಾಲಯಗಳಲ್ಲಿ ಸಾವಿರಾರು ಪ್ರಕರಣಗಳು ಬಾಕಿ ಉಳಿದಿದ್ದು, ಅವೆಲ್ಲಾ ಇತ್ಯರ್ಥಗೊಳ್ಳಬೇಕೆಂದರೆ ಸಾಕಷ್ಟು ಕಾಲಾವಕಾಶ ಹಿಡಿಯಲಿದೆ. ಹಾಗಾಗಿ ಲೋಕ ಅದಾಲತ್‌ನಲ್ಲಿ ಅವುಗಳನ್ನು ಬಗೆಹರಿಸಿಕೊಳ್ಳುವುದು ಸೂಕ್ತ. ಇದರಿಂದ ಕಕ್ಷಿದಾರರು ಪಾವತಿಸಬೇಕಾದ ನ್ಯಾಯಾಲಯದ ಶುಲ್ಕ ಹಾಗೂ ಸಮಯ ಉಳಿತಾಯವಾಗಲಿದೆ. ಆದರೆ ಕೊಲೆ, ಅತ್ಯಾಚಾರ ಹಾಗೂ ಲೋಕಾಯುಕ್ತದ ಪ್ರಕರಣಗಳು ನ್ಯಾಯಾಲಯದಲ್ಲೇ ಇತ್ಯರ್ಥವಾಗಬೇಕಿದ್ದು, ಸಹಜವಾಗಿಯೇ ವಿಳಂಬವಾಗುತ್ತದೆ ಎಂದರು.

ನಾವ್ಯಾರೂ ಶಾಶ್ವತವಲ್ಲ; ಹೃದಯಾಘಾತದಂತಹ ಪ್ರಸಂಗಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಣ್ಣ ಪುಟ್ಟ ಪ್ರಕರಣಗಳನ್ನು ವ್ಯಾಜ್ಯಗಳಾಗಿ ಬೆಳೆಸಿಕೊಳ್ಳದೆ ಲೋಕ ಅದಾಲತ್‌ನಲ್ಲಿ ಬಗೆಹರಿಸಿಕೊಳ್ಳುವುದು ಸೂಕ್ತ ಮತ್ತು ಅಗತ್ಯ ಕೂಡ ಎಂದು ಹೇಳಿದರು.
ವಕೀಲರ ಸಂಘದ ಅಧ್ಯಕ್ಷ ವಕೀಲರ ಸಂಘದ ಅಧ್ಯಕ್ಷ ಡಿ.ಬಿ.ಸುಜೇಂದ್ರ ಮಾತನಾಡಿ, ನ್ಯಾಯ ಅರಸಿ ಬರುವ ಕಕ್ಷಿದಾರರಿಗೆ ಅತ್ಯುತ್ತಮವಾದ ತೀರ್ಪು ಸಿಗಬೇಕೆಂದರೆ ಅದು ರಾಜಿ ಸಂಧಾನದಿಂದ ಮಾತ್ರ ಸಾಧ್ಯ. ಅದಾಲತ್‌ನಲ್ಲಿ ಭಾಗವಹಿಸುವ ಮುನ್ನ ಇಲ್ಲಿ ಸಿಗುವಂತೆ ಇನ್ನೆಲ್ಲೂ ನ್ಯಾಯ ಸಿಗಲು ಸಾಧ್ಯವಿಲ್ಲ ಎಂಬುದನ್ನು ಕಕ್ಷಿದಾರರು ಮನದಟ್ಟು ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ವಿವಾದವನ್ನು ಬಗೆಹರಿಸಿಕೊಳ್ಳುವ ಸರಳ ವಿಧಾನ ಮುಂದೆ ಇರುವಾಗ ಸಂಘರ್ಷವನ್ನು ಯಾಕಾಗಿ ಬೆಳೆಸಿಕೊಳ್ಳಬೇಕು? ಪ್ರತಿಯೊಬ್ಬರಲ್ಲೂ ಪ್ರಕರಣಗಳು ಶೀಘ್ರ ಇತ್ಯರ್ಥವಾಗದಿರುವ ಬಗ್ಗೆ ಅಸಮಾಧಾನವಿದ್ದೇ ಇರುತ್ತದೆ. ನಿಮ್ಮೆದುರು ಇರುವ ಕಕ್ಷಿದಾರರು ನಿಮ್ಮ ಶತ್ರುವಲ್ಲ, ಬದಲಾಗಿ ನಿಮ್ಮೊಳಗಿರುವ ಸಿಟ್ಟು, ಅಹಂಕಾರ ಹಾಗೂ ಸಂಘರ್ಷದ ಮನಸ್ಥಿತಿ ಇದೆಯಲ್ಲ ಅವೇ ನಿಮ್ಮ ಶತ್ರು. ಆಸ್ತಿ, ಹಣ ಸಂಪಾದನೆ ಮಾಡುವುದು ನಮ್ಮ ಸುಖ, ಸಂತೋಷಕ್ಕಾಗಿ. ನಮ್ಮ ಸುಖಕ್ಕೆ ಸಿಗದ ಆಸ್ತಿ, ಹಣ ವಯಸ್ಸು ಇರುವಾಗ ಸಿಗದಿದ್ದಲ್ಲಿ ಪ್ರಯೋಜನವಾದರೂ ಏನು ಎಂದು ಪ್ರಶ್ನಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಆದ ವಿ.ಹನುಮಂತಪ್ಪ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಧಾನಕಾರರು, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಭಾನುಮತಿ, ನ್ಯಾಯಾಧೀಶರುಗಳಾದ ಪ್ರಕಾಶ್, ಮಂಜುನಾಥ, ಕುಲಕರ್ಣಿ, ಗುರುಪ್ರಸಾದ್, ರಾಘವೇಂದ್ರ, ಸುಜಾತ, ದ್ಯಾವಪ್ಪ, ಲತಾ, ಅನುರಾಧ, ಶರತ್ ಕುಮಾರ್, ನಂದಿನಿ, ವಕೀಲರು ಹಾಗೂ ಕಕ್ಷಿದಾರರು ಭಾಗವಹಿಸಿದ್ದರು,

Lok Adalat preserves the relationship between the parties

Share

Leave a comment

Leave a Reply

Your email address will not be published. Required fields are marked *

Don't Miss

ರೈತರ ಅನುಕೂಲಕ್ಕಾಗಿ ಚಾನಲ್ ಕಾಮಗಾರಿ ಸ್ಥಗಿತಗೊಳಿಸಲು ಆಗ್ರಹ

ಚಿಕ್ಕಮಗಳೂರು: ಅಯ್ಯನಕೆರೆ ಕೋಡಿಬಿದ್ದು ಹರಿಯುವ ನೀರಿನಿಂದ ಕೆರೆಗಳನ್ನು ತುಂಬಿಸುವ ಕಾಮಗಾರಿ ಎಂದು ಸರ್ಕಾರ ಅನುಮೋದನೆ ನೀಡಿದ್ದು, ಈ ಯೋಜನೆಯ ಬಗ್ಗೆ ಎರಡೂ ಭಾಗದ ರೈತರ ಗಮನಕ್ಕೆ ಅಧಿಕಾರಿಗಳು ಸರಿಯಾದ ಮಾಹಿತಿ ನೀಡಿಲ್ಲ...

ರೈತರನ್ನು ಆರ್ಥಿಕ ಸದೃಢರನ್ನಾಗಿ ಮಾಡುವುದು ಅಗತ್ಯ

ಚಿಕ್ಕಮಗಳೂರು: ದೇಶದ ಜನತೆಗೆ ಅನ್ನ ನೀಡುವ ಅನ್ನದಾತರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುವುದು ಅಗತ್ಯ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು. ತೋಟಗಾರಿಕೆ ಇಲಾಖೆ ವತಿಯಿಂದ ಇಂದು ನಗರದ ಕಾಫಿ ಮಂಡಳಿಯಲ್ಲಿ ರೈತರಿಗೆ ತೆಂಗು,...

Related Articles

ಸಖರಾಯಪಟ್ಟಣದ ಅಗ್ರಹಾರ ಬಳಿ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು: ಸಖರಾಯಪಟ್ಟಣ ಹೋಬಳಿ ಅಗ್ರಹಾರ ಗ್ರಾಮದ ಚೆಕ್‌ಡ್ಯಾಂ ನಿರ್ಮಾಣ ಕಾಮಗಾರಿಗೆ ಪರ-ವಿರೋಧ ವ್ಯಕ್ತವಾಗಿದ್ದು, ಉಭಯ ಕಡೆ...

ಆ.17: ಅಜ್ಜಂಪುರ ಪ.ಪಂ. ಚುನಾವಣೆಗೆ ವೇಳಾ ಪಟ್ಟಿ ಪ್ರಕಟ

ಚಿಕ್ಕಮಗಳೂರು: ಹೊಸದಾಗಿ ರಚನೆಯಾಗಿರುವ ಅಜ್ಜಂಪುರ ಪಟ್ಟಣ ಪಂಚಾಯಿತಿಯ ನಂ. ೧ರಿಂದ ೧೨ ವಾರ್ಡ್‌ಗಳ ಕೌನ್ಸಿಲರುಗಳ ಸಾರ್ವತ್ರಿಕ...

ಗೊಬ್ಬರದ ಅಭಾವಕ್ಕೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯೇ ಕಾರಣ

ಚಿಕ್ಕಮಗಳೂರು: ರಾಜ್ಯದಲ್ಲಿ ಯೂರಿಯಾ ಗೊಬ್ಬರದ ಅಭಾವ ಸೃಷ್ಟಿಯಾಗಲು ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯೇ ಕಾರಣ ,ಗೊಬ್ಬರ...

ನಿಯಮಬಾಹಿರ ಗಣಿಗಾರಿಕೆಯ ವಿರುದ್ಧ ರೈತಸಂಘ ಚಳುವಳಿ

ಚಿಕ್ಕಮಗಳೂರು : ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದ ಸ.ನಂ. ೧೩೪ರಲ್ಲಿ ನಿಯಮಬಾಹಿರವಾಗಿ ನಡೆಸುತ್ತಿರುವ ಅನುಸೂಯಮ್ಮ ಎಂಬವರ...