Home namma chikmagalur chikamagalur ಜಿಲ್ಲೆಯ ಎಂಟು ತಾಲೂಕುಗಳ ಸರ್ವೇ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
chikamagalurHomeLatest Newsnamma chikmagalur

ಜಿಲ್ಲೆಯ ಎಂಟು ತಾಲೂಕುಗಳ ಸರ್ವೇ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Share
Share

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಸರ್ವೇ ಇಲಾಖೆ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.

ಜಿಲ್ಲೆಯ ಎಂಟು ತಾಲೂಕುಗಳಲ್ಲಿರುವ ಸರ್ವೇ ಇಲಾಖೆಯ ADLR ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದೆ. ಚಿಕ್ಕಮಗಳೂರು, ಕಡೂರು, ಮೂಡಿಗೆರೆ, ಶೃಂಗೇರಿ, ಎನ್‌.ಆರ್‌.ಪುರ, ಕೊಪ್ಪ, ತರೀಕೆರೆ ಹಾಗೂ ಅಜ್ಜಂಪುರದ ಕಚೇರಿಗಳಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಲೋಕಾಯುಕ್ತ ಎಸ್‌ಪಿ ನಂದಿನಿ ಹಾಗೂ ಡಿವೈಎಸ್‌ಪಿ ತಿರುಮಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಇನ್ಸ್‌ಪೆಕ್ಟರ್‌ಗಳಾದ ಮಲ್ಲಿಕಾರ್ಜುನ್, ಗವಿರಾಜ್, ರುದ್ರೇಶ್ ಸೇರಿದಂತೆ ವಿವಿಧ ಅಧಿಕಾರಿಗಳು ತಂಡದಲ್ಲಿ ಭಾಗವಹಿಸಿದ್ದಾರೆ.

ಸರ್ವೇ ಇಲಾಖೆಯ ಕಚೇರಿಗಳಲ್ಲಿನ ಕಡತಗಳು, ಭೂಮಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ವಿವಿಧ ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ದಾಖಲೆಗಳ ಪರಿಶೀಲನೆ ಪೂರ್ಣಗೊಂಡ ಬಳಿಕ ಕಾರ್ಯಾಚರಣೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆ.

Lokayukta raids on survey offices in the district’s eight taluks

Share

Leave a comment

Leave a Reply

Your email address will not be published. Required fields are marked *

Don't Miss

ಪ್ರತಿಭಟನೆಗೆ ಅಪ್ರಾಪ್ತ ಮಕ್ಕಳ ಬಳಕೆ – ಸಂಘಟಕನ ವಿರುದ್ಧ ಪ್ರಕರಣ

ಚಿಕ್ಕಮಗಳೂರು: ಕೈಗಾರಿಕಾ ಮಾಲಿನ್ಯದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಅಪ್ರಾಪ್ತ ಮಕ್ಕಳನ್ನು ಕಾನೂನುಬಾಹಿರವಾಗಿ ಬಳಸಿಕೊಂಡ ಆರೋಪದಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ.18ರಂದು ರಾತ್ರಿ 8.30ಕ್ಕೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಪರವಾಗಿ...

ಮರಕ್ಕೆ ಡಿಕ್ಕಿ ಹೊಡೆದು ಬಸ್ ನಿಲ್ಲಿಸಿದ ಚಾಲಕ ಸಾವು

ಚಿಕ್ಕಮಗಳೂರು: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಚಾಲನೆ ಮಾಡುತ್ತಿದ್ದ ವೇಳೆ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಹೃದಯಾಘಾತಕ್ಕೊಳಗಾದ ಪರಿಣಾಮ ಬಸ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಕೊಪ್ಪ ತಾಲೂಕಿನ...

Related Articles

ಶ್ರೀಗಂಧದ ಕೋಟೆ “ಬಂದ್” ಕಣ್ಣು ಮುಚ್ಚಿರುವ ಅರಣ್ಯ ಇಲಾಖೆ

ತರೀಕೆರೆ: ಕರ್ನಾಟಕವನ್ನು ಶ್ರೀ ಗಂಧದ ನಾಡು ಎಂದು ಕರೆಯಲಾಗುತಿತ್ತು ಅಷ್ಟೊಂದು ಶ್ರೀ ಗಂಧ ನೈಸರ್ಗಿಕವಾಗಿ ಬೆಳೆಯುತಿತ್ತು....

ಶಿರವಾಸೆ ಗ್ರಾಮದಲ್ಲಿ ಕುಡಿತದ ಅಮಲಿನಲ್ಲಿ ಮನೆಗೆ ಬೆಂಕಿ

ಚಿಕ್ಕಮಗಳೂರು: ಇಲ್ಲಿಗೆ ಸಮೀಪದ ಶಿರವಾಸೆ ಗ್ರಾಮದಲ್ಲಿ ಕುಡಿತದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬರು ಮನೆಗೆ ಬೆಂಕಿ ಹಚ್ಚಿದ ಪರಿಣಾಮ...

ಆನ್‌ಲೈನ್ ಗೇಮಿಂಗ್ ಆಮಿಷ; 1621 ಯುಆರ್‌ಎಲ್‌ಗಳ ವಿರುದ್ಧ ಪ್ರಕರಣ

ಚಿಕ್ಕಮಗಳೂರು: ಹೆಚ್ಚಿನ ಲಾಭ ಹಾಗೂ ರಿಟರ್ನ್ಸ್ ನೀಡುವುದಾಗಿ ಆಮಿಷವೊಡ್ಡಿ ಯುವಕರಿಂದ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸುತ್ತಿರುವ...

APK ಫೈಲ್ ಮೂಲಕ ಮೊಬೈಲ್ ಹ್ಯಾಕ್; 1.85 ಲಕ್ಷ ರೂ. ಹಣ ವರ್ಗಾವಣೆ

ಚಿಕ್ಕಮಗಳೂರು: APK ಫೈಲ್ ಮೂಲಕ ಮೊಬೈಲ್ ಹ್ಯಾಕ್ ಮಾಡಿ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು UPI ಮೂಲಕ...