Home namma chikmagalur chikamagalur ಅಕ್ರಮ ವಿದ್ಯುತ್ ಬೇಲಿಗೆ ಬಲಿಯಾದ ಒಂಟಿ ಸಲಗ
chikamagalurHomeLatest Newsnamma chikmagalur

ಅಕ್ರಮ ವಿದ್ಯುತ್ ಬೇಲಿಗೆ ಬಲಿಯಾದ ಒಂಟಿ ಸಲಗ

Share
Share

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಾನವ-ವನ್ಯಜೀವಿ ಸಂಘರ್ಷ ಮತ್ತೊಂದು ದುರಂತಕ್ಕೆ ಸಾಕ್ಷಿಯಾಗಿದೆ. ಕಾಡುಪ್ರಾಣಿಗಳ ಹಾವಳಿ ತಡೆಯಲು ಜಮೀನಿಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ಸುಮಾರು ೧೫ ವರ್ಷ ವಯಸ್ಸಿನ ಒಂಟಿ ಸಲಗವೊಂದು ಮೃತಪಟ್ಟಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ ಸಮೀಪದ ಸಗಣಿ ಬಸವನಹಳ್ಳಿಯಲ್ಲಿ ನಡೆದಿದೆ.

ಆಹಾರ ಅರಸುತ್ತಾ ಕಾಡಿನಿಂದ ನಾಡಿನತ್ತ ಬಂದಿದ್ದ ಗಂಡಾನೆ ಜೋಳದ ಹೊಲಕ್ಕೆ ನುಗ್ಗಿದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕಾಡುಪ್ರಾಣಿಗಳಿಂದ ಬೆಳೆ ರಕ್ಷಿಸಿಕೊಳ್ಳುವ ಉದ್ದೇಶದಿಂದ ಜಮೀನಿನ ಮಾಲೀಕರು ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿದ್ದರು ಎನ್ನಲಾಗಿದೆ. ಹೊಲಕ್ಕೆ ಪ್ರವೇಶಿಸಿದ ಆನೆಗೆ ವಿದ್ಯುತ್ ತಂತಿ ತಗುಲಿದ್ದು, ವಿದ್ಯುತ್ ಪ್ರವಹಿಸಿದ ಪರಿಣಾಮ ಸ್ಥಳದಲ್ಲೇ ಕೊನೆಯುಸಿರೆಳೆದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕಡೂರು ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಆನೆ ಮೃತಪಟ್ಟಿರುವ ವಿಷಯ ತಿಳಿಯುತ್ತಿದ್ದಂತೆ ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿದ್ದ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

ಕಾಫಿನಾಡಿನಲ್ಲಿ ಕಾಡಾನೆಗಳ ಹಾವಳಿ, ಸ್ಥಳಾಂತರ ವಿವಾದ ಹಾಗೂ ಮಾನವ-ವನ್ಯಜೀವಿ ಸಂಘರ್ಷದ ಕುರಿತು ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮತ್ತೊಂದು ಸಲಗ ಅಕ್ರಮ ವಿದ್ಯುತ್ ಬೇಲಿಗೆ ಬಲಿಯಾಗಿರುವುದು ವನ್ಯಜೀವಿ ಸಂರಕ್ಷಣೆಯ ಬಗ್ಗೆ ಮತ್ತೆ ಆತಂಕ ಮೂಡಿಸಿದೆ. ಬೆಳೆ ರಕ್ಷಣೆಯ ಹೆಸರಿನಲ್ಲಿ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸುವ ಕೃತ್ಯಗಳಿಗೆ ಕಡಿವಾಣ ಹಾಕುವ ಅಗತ್ಯವನ್ನು ಈ ಘಟನೆ ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.

Lone wolf victim of illegal electric fence

 

Share

Leave a comment

Leave a Reply

Your email address will not be published. Required fields are marked *

Don't Miss

ಜಾನುವಾರು ಕಳ್ಳತನ ಪ್ರಕರಣದಲ್ಲಿ ಇಬ್ಬರಿಗೆ 3 ವರ್ಷ ಜೈಲು, ₹1.58 ಲಕ್ಷ ದಂಡ

ಚಿಕ್ಕಮಗಳೂರು: ಜಾನುವಾರುಗಳನ್ನು ಕಳ್ಳತನ ಮಾಡಿ, ಹಿಂಸಾತ್ಮಕವಾಗಿ ವಾಹನದಲ್ಲಿ ಸಾಗಿಸುತ್ತಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಚಿಕ್ಕಮಗಳೂರು 1ನೇ ಅಧಿಕ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ತಲಾ ಮೂರು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ...

ನೀರು !  ನೀರು ! ನೀರಿನ ಬರ ? ವಾಟರ್ ವಾರ್, ವಾಟರ್ ವಾರ್

ಚಿಕ್ಕಮಗಳೂರು ಜಿಲ್ಲೆಯಲ್ಲಿ ನೀರಿನ ಬರ ಪ್ರಾರಂಭವಾಗಿ ಹಲವು ವರ್ಷಗಳ ಜನ ಪರದಾಡುತ್ತಿದ್ದಾರೆ. ಮಲೆನಾಡು ಸದಾಕಾಲವೂ ನೀರಿನ,ಜರಿ ಮತ್ತು ಹಳ್ಳಕೊಳ್ಳಗಳಲ್ಲಿ ನದಿಗಳಲ್ಲಿ ನೀರು ಹರಿಯುತ್ತಿರುವ ದೃಶ್ಯ ಕಣ್ಮರೆಯಾಗಿ ಜಿಲ್ಲೆಯ ಮಲೆನಾಡಿನಲ್ಲಿ ನೀರಿಗಾಗಿ ಪರದಾಟ...

Related Articles

ಆಪರೇಷನ್ ಗಜ ಕಾರ್ಯಾಚರಣೆಗೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಮೂಡಿಗೆರೆ: ಬೇಲೂರು ಭಾಗದಿಂದ ಮೂಡಿಗೆರೆ ತಾಲೂಕಿನತ್ತ ಕಾಡಾನೆಗಳ ಹಿಂಡನ್ನು ಓಡಿಸುತ್ತಿರುವ ಅರಣ್ಯ ಇಲಾಖೆಯ ಆಪರೇಷನ್ ಗಜ...

ಕಾಡಾನೆ ಸಮಸ್ಯೆಗೆ ಪಕ್ಷಾತೀತವಾಗಿ ಒಗ್ಗಟ್ಟಿನ ಹೋರಾಟ ಅಗತ್ಯ

ಚಿಕ್ಕಮಗಳೂರು: ಮೂಡಿಗೆರೆ ಭಾಗಕ್ಕೆ 40ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಲಗ್ಗೆ ಇಟ್ಟಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಆತಂಕಕ್ಕೆ...

ಭದ್ರಾ ಅಭಯಾರಣ್ಯಕ್ಕೆ 38 ಆನೆಗಳು ದೊಡ್ಡ ಹೊರೆಯಲ್ಲ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲೂಕಿನ ವಿವಿಧ ಪ್ರದೇಶಗಳಲ್ಲಿ 38ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿರುವ ಹಿನ್ನೆಲೆಯಲ್ಲಿ ಜನರ...

ಜಿಲ್ಲೆಯ ಎಂಟು ತಾಲೂಕುಗಳ ಸರ್ವೇ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಸರ್ವೇ ಇಲಾಖೆ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿ...