Home namma chikmagalur chikamagalur ಪ್ರೀತಿ ನಿರಾಕರಣೆ : ಬಾಲಕಿ ಮೇಲೆ ಹಲ್ಲೆ
chikamagalurHomeLatest Newsnamma chikmagalur

ಪ್ರೀತಿ ನಿರಾಕರಣೆ : ಬಾಲಕಿ ಮೇಲೆ ಹಲ್ಲೆ

Share
Share

ಚಿಕ್ಕಮಗಳೂರು: ಕಾಫಿನಾಡಿನ ಹೃದಯ ಭಾಗದಲ್ಲಿರುವ ಎಸ್ಪಿ ಮತ್ತು ಡಿಸಿ ಕಚೇರಿ ಪಕ್ಕದಲ್ಲೇ ಇರುವ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕರನ್ನ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಕಡೂರು ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ಚಿಕ್ಕಮಗಳೂರಿನ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಳು.

ಆದರೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬಾಣಾವರ ಮೂಲದ ರೋಹಿತ್ ಎಂಬ ಹುಚ್ಚು ಪ್ರೇಮಿ ಈಕೆಯ ಹಿಂದೆ ಬಿದ್ದಿದ್ದನು. ಬಾಲಕಿ ಆತನ ಪ್ರೀತಿಯನ್ನು ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಯುವಕ, ಜಿಲ್ಲಾ ಕ್ರೀಡಾಂಗಣದಲ್ಲಿ ಆಕೆಯನ್ನು ನೆಲಕ್ಕೆ ಹಾಕಿ ಮನಬಂದಂತೆ ತುಳಿದು ಹಲ್ಲೆ ನಡೆಸಿದ್ದಾನೆ.

ಈ ಕ್ರೂರ ಕೃತ್ಯ ಕ್ರೀಡಾಂಗಣದಲ್ಲಿದ್ದ ಸಾರ್ವಜನಿಕರ ಕಣ್ಣಿಗೆ ಬೀಳುತ್ತಿದ್ದಂತೆ, ಅವರು ತಕ್ಷಣವೇ ಬಾಲಕಿಯ ರಕ್ಷಣೆಗೆ ಧಾವಿಸಿದ್ದಾರೆ. ಸ್ಥಳೀಯರು ಓಡಿ ಬರುವುದನ್ನು ಕಂಡ ಪಾಗಲ್ ಪ್ರೇಮಿ ರೋಹಿತ್ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆದರೂ ಬಿಡದ ಸಾರ್ವಜನಿಕರು ಆತನನ್ನು ಬೆನ್ನಟ್ಟಿ ಹೋಗಿ, ಎಸ್ಪಿ ನಿವಾಸದ ಬಳಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಹುಚ್ಚು ಪ್ರೇಮಿಯನ್ನು ತಕ್ಷಣವೇ ಅಕ್ಕ ಪಡೆ ಪೊಲೀಸರಿಗೆ ಒಪ್ಪಿಸಲಾಗಿದೆ. ಈ ಯುವಕನ ಕಾಟ ಇದೇ ಮೊದಲಲ್ಲ ಎಂಬುದು ಈಗ ಬಯಲಾಗಿದೆ. ಈ ಹಿಂದೆ ಬಾಲಕಿಯ ಮನೆ ಬಳಿಗೂ ಹೋಗಿ ಪ್ರೀತಿಸುವಂತೆ ಬೆದರಿಕೆ ಹಾಕಿದ್ದ ಈತ, ಬಾಲಕಿಯ ಪೋಷಕರಿಗೂ ಫೋನ್ ಮಾಡಿ ಧಮ್ಮಿ ಹಾಕಿದ್ದನು.

ಅಷ್ಟೇ ಅಲ್ಲದೇ, ಬಾಲಕಿ ಉಳಿದುಕೊಂಡಿದ್ದ ಹಾಸ್ಟೆಲ್ ಬಳಿಗೂ ಬಂದು ರಂಪಾಟ ಮಾಡಿದ್ದರಿಂದ ಹಾಸ್ಟೆಲ್‌ ವಾರ್ಡನ್ ಕೂಡ ಈ ಬಗ್ಗೆ ಬಾಲಕಿಗೆ ಎಚ್ಚರಿಕೆ ನೀಡಿದ್ದರು. ಸದ್ಯ ಈ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಯುವಕನ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.

Love rejection: Attack on girl

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...