Home namma chikmagalur ಪ್ರೀತಿ ನಿರಾಕರಣೆ-ಯುವತಿ ಮೇಲೆ ಚಾಕುವಿನಿಂದ ಹಲ್ಲೆ
namma chikmagalurchikamagalurHomeLatest News

ಪ್ರೀತಿ ನಿರಾಕರಣೆ-ಯುವತಿ ಮೇಲೆ ಚಾಕುವಿನಿಂದ ಹಲ್ಲೆ

Share
Share

ಚಿಕ್ಕಮಗಳೂರು: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಸಿಟ್ಟಿಗೆದ್ದ ಯುವಕನೋರ್ವ ಯುವತಿ ಮೇಲೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಕಳಸ ಪಟ್ಟಣದ ಮಹಾವೀರ ಸರ್ಕಲ್ ಬಳಿ ಶುಕ್ರವಾರ ನಡೆದಿದೆ.

ಕಳಸ ತಾಲೂಕಿನ ಹೆಗ್ಗೋಡು ಮೂಲದ ಕಾವ್ಯ (೨೪) ಪ್ರಿಯಕರನಿಂದ ಚಾಕು ಇರಿತಕ್ಕೊಳಗಾದ ಯುವತಿಯಾಗಿದ್ದಾಳೆ. ಕೊಪ್ಪ ತಾಲೂಕಿನ ಗುಡ್ಡತೋಟ ಮೂಲದ ಯುವಕ ಆರೋಪಿಯಾಗಿದ್ದು ಸದ್ಯ ಪೊಲೀಸರು ಈತನ ಪತ್ತೆಗೆ ಬಲೆ ಬೀಸಿದ್ದಾರೆ.

ಘಟನೆ ವಿವಿರ: ಕಾವ್ಯ ಕಳಸದ ಖಾಸಗಿ ಕ್ಲಿನಿಕ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದು ಆಕೆಯನ್ನು ಯುವಕನೋರ್ವ ಪ್ರೀತಿಸುತ್ತಿದ್ದ ಎನ್ನಲಾಗಿದೆ ಆದರೆ ಆತನ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಾಳೆ

ಇದರಿಂದ ಕೋಪಗೊಂಡ ಯುವಕ ಪಟ್ಟಣದ ಮಹಾವೀರಸರ್ಕಲ್ ಬಳಿ ಕಲ್ಲಿನಿಂದ ಹಲ್ಲೆ ಮಾಡಿ ತಲೆ ಹಾಗೂ ಬೆನ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ, ಗಂಭೀರ ಗಾಯಗೊಂಡ ಯುವತಿಯನ್ನು ಕಳಸದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿದೆ.

ಘಟನೆ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗಾಗಿ ಪೊಲೀಸರು ತಂಡರ ಚಿಸಿ ಶೋಧ ಕಾರ್ಯನಡೆಸುತ್ತಿದ್ದಾರೆ.

Love rejection-Young woman attacked with knife

Share

Leave a comment

Leave a Reply

Your email address will not be published. Required fields are marked *

Don't Miss

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್ ಎಂಬುವವರ ಮನೆ ಮುಂದೆ ನಿಲ್ಲಿಸಲಾಗಿದ್ದ ಆಟೋರಿಕ್ಷಾ ಹಾಗೂ ಅವರ ಮನೆಯ ಮೇಲೆ ಬೃಹತ್ ಮರವೊಂದು...

ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆ – ಅಂಗನವಾಡಿಗಳಿಗೆ ರಜೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಆರ್ಭಟ ಮುಂದುವರಿದಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ನಾಳೆ...

Related Articles

ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ

ಕಡೂರು: ಮುಂಗಾರು ಮಳೆಯ ಕೊರತೆಯಿಂದ ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ ಎದುರಾಗಿದ್ದು, ಕುಡಿಯುವ ನೀರು, ಜಾನುವಾರುಗಳ...

ಜು.21ಕ್ಕೆ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶ

ಚಿಕ್ಕಮಗಳೂರು : ೪೬ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶವನ್ನು ಜು.೨೧...

ಅಕ್ರಮವಾಗಿ ಸಾಗಿಸುತ್ತಿ ಕಾಡುಜಾತಿಯ ಮರಗಳ ದಿಮ್ಮಿಗಳ ವಶ

ಮೂಡಿಗೆರೆ: ಕಾಡುಜಾತಿಯ ಮರಗಳ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಾಲ್ಲೂಕಿನ ಹಂಡುಗುಳಿ ಗ್ರಾಮದ ಸಮೀಪ ಅರಣ್ಯ ಇಲಾಖೆ...

ಜವಾಹರ್ ನವೋದಯ ವಿದ್ಯಾಲಯದಲ್ಲಿ ಪ್ರವೇಶಕ್ಕೆ ಆಹ್ವಾನ

ಚಿಕ್ಕಮಗಳೂರು:  ಸೀಗೋಡುವಿನ ಪಿ.ಎಂ.ಶ್ರೀ ಜವಾಹರ ನವೋದಯ ವಿದ್ಯಾಲಯವು  ವಸತಿಯುತ ಸಹಶಿಕ್ಷಣ ವಿದ್ಯಾಲಯವಾಗಿದ್ದು, ಗ್ರಾಮೀಣ ಪ್ರದೇಶದ ಪ್ರತಿಭಾವಂತ...