Home namma chikmagalur chikamagalur ಸಾವಿನ ಹೆಣ ಇಟ್ಟುಕೊಂಡು ಕೀಳು ಮಟ್ಟದ ರಾಜಕೀಯ
chikamagalurHomeLatest Newsnamma chikmagalur

ಸಾವಿನ ಹೆಣ ಇಟ್ಟುಕೊಂಡು ಕೀಳು ಮಟ್ಟದ ರಾಜಕೀಯ

Share
Oplus_16908288
Share

ಚಿಕ್ಕಮಗಳೂರು: ಇತ್ತೀಚೆಗೆ ನಡೆದ ಆನೆ ದಾಳಿಯಿಂದಾದ ಸಾವು ಮತ್ತು ಅದರ ಸುತ್ತ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಕೆಪಿಸಿಸಿ ವಕ್ತಾರ ರವೀಶ್ ಕ್ಯಾತನಬೀಡು ಅವರು ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ.

ನಮ್ಮ ಸರ್ಕಾರದ ಅವಧಿಯಲ್ಲಿ ಏನಾದರೂ ಲೋಪಗಳಾಗಿದ್ದರೆ ಅದನ್ನು ಒಪ್ಪಿಕೊಳ್ಳಲು ತಾವು ಸಿದ್ಧರಿರುವುದಾಗಿ ತಿಳಿಸಿದ ಅವರು, ಆದರೆ ಈ ಸೂಕ್ಷ್ಮ ವಿಷಯದಲ್ಲಿ ಮಾಜಿ ಶಾಸಕರಾದ ಜೀವರಾಜ್ ಮತ್ತು ಸುಧಾಕರ್ ಶೆಟ್ಟಿ ಅವರು ನಡೆದುಕೊಳ್ಳುತ್ತಿರುವ ರೀತಿ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಂದು ಸಾವು ಅಥವಾ ಹೆಣವನ್ನು ಇಟ್ಟುಕೊಂಡು ರಾಜಕೀಯ ಮಾಡುವುದು ಅತ್ಯಂತ ಕೆಳಮಟ್ಟದ ನಡೆ ಎಂದು ಅವರು ಟೀಕಿಸಿದ್ದಾರೆ.

ರಾಜಕೀಯ ಲಾಭಕ್ಕಿಂತ ಮಾನವೀಯತೆ ಮುಖ್ಯ ಹೆಣದ ಮುಂದೆ ರಾಜಕೀಯ ಮಾಡಿ ಗಳಿಸಿಕೊಳ್ಳುವಂಥದ್ದು ಯಾವುದೂ ಇಲ್ಲ ಎಂದು ಹೇಳಿದ ರವೀಶ್, ಆಂಬುಲೆನ್ಸ್‌ನಲ್ಲಿ ಹೆಣವನ್ನು ಕೊಂಡೊಯ್ಯಲು ಬಿಡದೆ ಅಧಿಕಾರದ ಹಪಹಪಿತನ ಪ್ರದರ್ಶಿಸುತ್ತಿರುವುದು ಖಂಡನೀಯ ಎಂದಿದ್ದಾರೆ.

ಕಾಡುಪ್ರಾಣಿಗಳಿಗೆ ಬಿಜೆಪಿ, ಕಾಂಗ್ರೆಸ್ ಅಥವಾ ಜೆಡಿಎಸ್ ಎಂಬ ಭೇದವಿಲ್ಲ ಹಾಗೂ ಅವುಗಳಿಗೆ ಯಾವುದೇ ಪಕ್ಷದ ಅಥವಾ ಜಾತಿಯ ಹಂಗಿಲ್ಲ ಎಂಬುದನ್ನು ಮರೆಯಬಾರದು ಎಂದು ಅವರು ಚಾಟಿ ಬೀಸಿದ್ದಾರೆ. ಆನೆ ಮತ್ತು ಮಾನವ ಸಂಘರ್ಷ ನಿರಂತರವಾಗಿದ್ದು, ಈ ಬಗ್ಗೆ ಅರಣ್ಯ ಸಚಿವರು ನಾಳೆಯೇ ಭೇಟಿ ನೀಡಿ ಚರ್ಚೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.

Low-level politics while holding the body of death

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...