Home namma chikmagalur chikamagalur ವಿಧಾನ ಪರಿಷತ್‌ ಹಾಗೂ ಉಪ ಸಭಾಪತಿ ಸ್ಥಾನಕ್ಕೆ ಎಂ.ಕೆ. ಪ್ರಾಣೇಶ್ ರಾಜೀನಾಮೆ
chikamagalurHomeLatest Newsnamma chikmagalur

ವಿಧಾನ ಪರಿಷತ್‌ ಹಾಗೂ ಉಪ ಸಭಾಪತಿ ಸ್ಥಾನಕ್ಕೆ ಎಂ.ಕೆ. ಪ್ರಾಣೇಶ್ ರಾಜೀನಾಮೆ

Share
Share

ಚಿಕ್ಕಮಗಳೂರು : ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ ಬಿಜೆಪಿ ಎಂ.ಕೆ. ಪ್ರಾಣೇಶ್ ಅವರು ನ್ಯಾಯಾಲಯದ ಆದೇಶಕ್ಕೆ ತಲೆಬಾಗಿ, ವಿಧಾನ ಪರಿಷತ್ ಉಪಸಭಾಪತಿ ಹಾಗೂ ಸದಸ್ಯತ್ವ ಸ್ಥಾನಕ್ಕೆ ತಮ್ಮ ರಾಜೀನಾಮೆ ಘೋಷಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಸಂದೇಶ ಹಂಚಿಕೊಂಡಿರುವ ಅವರು, ತಮ್ಮ ಚುನಾವಣೆಯಲ್ಲಿ ಯಾವುದೇ ರೀತಿಯ ಅಕ್ರಮ ಎಸಗಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. 1997ರಿಂದಲೂ ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸುವ ಹಕ್ಕು ಹೊಂದಿದ್ದರು ಮತ್ತು ಅದೇ ನಿಯಮದಂತೆ ಈ ಬಾರಿಯೂ ಮತದಾನ ನಡೆದಿತ್ತು.

ಆದರೆ ನಾಮನಿರ್ದೇಶಿತ ಸದಸ್ಯರ ಮತದಾನವೇ ಈ ವಿವಾದದ ಕೇಂದ್ರಬಿಂದುವಾಯಿತು. ಈ ಕಾನೂನು ಹೋರಾಟದಲ್ಲಿ ಹಿನ್ನಡೆಯಾಗಿ ಫಲಿತಾಂಶ ವ್ಯತಿರಿಕ್ತವಾಗಿ ಬಂದಿರುವುದು ವಿಷಾದನೀಯ ಎಂದಿದ್ದಾರೆ.

ಕಳೆದ ನಾಲ್ಕೂವರೆ ವರ್ಷಗಳ ಕಾಲ ಯಾವುದೇ ಭ್ರಷ್ಟಾಚಾರಕ್ಕೆ ಆಸ್ಪದ ನೀಡದೆ, ಪಕ್ಷಾತೀತವಾಗಿ ಹಾಗೂ ಅತ್ಯಂತ ಪ್ರಾಮಾಣಿಕವಾಗಿ ಕ್ಷೇತ್ರದ ಸೇವೆ ಸಲ್ಲಿಸಿದ್ದೇನೆ. ಈ ಹಂತದಲ್ಲಿ ತಮಗೆ ಸಂಪೂರ್ಣ ಬೆಂಬಲವಾಗಿ ನಿಂತ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಜನತೆಗೆ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಈ ತೀರ್ಪಿನಿಂದ ಯಾವುದೇ ಕಾರ್ಯಕರ್ತರು ಅಥವಾ ಬೆಂಬಲಿತರು ಎದೆಗುಂದಬಾರದು. ಅಧಿಕಾರ ಕಳೆದುಕೊಂಡರೂ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿದ್ದು ಕೆಲಸ ಮಾಡುತ್ತೇನೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಶಕ್ತಿಯುತವಾಗಿ ಎಲ್ಲರೂ ಒಟ್ಟಾಗಿ ಮುನ್ನಡೆಯೋಣ ಎಂದು ಕರೆ ನೀಡಿದ್ದಾರೆ.

ಇದೇ ವೇಳೆ ನೂತನ ಸದಸ್ಯೆಯಾಗಿ ಆಯ್ಕೆಯಾಗಿರುವ ಗಾಯತ್ರಿ ಶಾಂತೇಗೌಡ ಅವರಿಗೆ ಶುಭಾಶಯ ಕೋರಿರುವ ಪ್ರಾಣೇಶ್, ಅವರು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಉತ್ತಮವಾಗಿ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸಿದ್ದಾರೆ.

M.K. Pranesh resigns from the post of Legislative Council and Deputy Speaker

Share

Leave a comment

Leave a Reply

Your email address will not be published. Required fields are marked *

Don't Miss

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ನೀಡಿರುವ ಹೇಳಿಕೆಯನ್ನು...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ ತಾಂತ್ರಿಕ ಅಡಚಣೆಗಳನ್ನು ಪರಿಶೀಲಿಸಿ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್...

Related Articles

ಭದ್ರೆಯ ಕೃಪೆಯಿಂದ ಕೋಡಿಬಿದ್ದ ಕುಕ್ಕಸಮುದ್ರ ಕೆರೆ

ಚಿಕ್ಕಮಗಳೂರು: ಭದ್ರಾ ಮೇಲ್ದಂಡೆಯ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಹರಿದು ಬಂದ ಭದ್ರಾ ನೀರು ಕಡೂರು...

ಮಹೇಶ್ ಜೋಷಿಗೆ ಹಿನ್ನೆಡೆ-ಮತ್ತೆ ಕೋರ್ಟ್ ನಲ್ಲಿ ಹೋರಾಟಕ್ಕೆ ಜಯ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆದಿದೆ ಎನ್ನಲಾದ ಆಡಳಿತಾತ್ಮಕ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಕುರಿತು ಹಿರಿಯ ಸಾಹಿತಿಗಳು,...

ಅ.8ರಂದು ಚಿಕ್ಕಮಗಳೂರಿನಲ್ಲಿ ದಲಿತ ಸಂಘರ್ಷ ಸಮಿತಿಯ ಮಹಿಳಾ ಮಹಾಸಭೆ

ಚಿಕ್ಕಮಗಳೂರು:  ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯ ಸಮಿತಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಸಮಿತಿ...

 ಅ.8ರಂದು ಚಿಕ್ಕಮಗಳೂರಿನಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ

ಚಿಕ್ಕಮಗಳೂರು: ದೇಶಾದ್ಯಂತ ನಡೆಯುತ್ತಿರುವ ‘ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ–ದೇಶ ಬಚಾವೋ’ ಚಳುವಳಿಯ ಭಾಗವಾಗಿ ಅ.8ರಂದು ಚಿಕ್ಕಮಗಳೂರು...