ಚಿಕ್ಕಮಗಳೂರು: ಪಕ್ಷದ ಸೂಚನೆಯನ್ನು ಧಿಕ್ಕರಿಸಿ ಇತ್ತೀಚೆಗೆ ನಡೆದ ಡಿ.ಸಿ.ಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸ್ಪರ್ಧಿಸಿದ್ದ ಎಂ.ಎಸ್ ನಿರಂಜನ್ರನ್ನು ೬ ವರ್ಷಗಳ ಕಾಲ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ತಿಳಿಸಿದ್ದಾರೆ.
ಬಿಜೆಪಿ ಜಿ.ಪಂಗೆ ಬಿಜೆಪಿ ಸ್ಪರ್ಧೆ ಮಾಡಲು ಅವಕಾಶ ಮಾಡಿಕೊಟ್ಟಿತ್ತು. ಡಿ.ಸಿಸಿ ನಿರ್ದೇಶಕರನ್ನಾಗಿ ಪಕ್ಷವು ಮಾಡಿದ್ದರೂ ೨೦೨೧ ರ ವಿಧಾನ ಪರಿಷತ್ ಚುನಾವಣೆಯ ಸಂಧರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ರವರ ವಿರುದ್ಧ ಕಾಂಗ್ರೆಸ್ನವರ ಪರವಾಗಿ ಮತಯಾಚನೆ ಮಾಡಿರುವುದು.
೨೦೨೧ರ ಡಿಸೆಂಬರ್ನಲ್ಲಿ ನಡೆದ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸತೀಶ್ ಕುಪ್ಪೇನಹಳ್ಳಿ ವಿರುದ್ಧ ಕಾಂಗ್ರೆಸ್ನ ಪರವಾಗಿ ಕೆಸ ಮಾಡಿದ್ದರೂ ೨೦೨೪ರಲ್ಲಿ ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಿಸಲಾಯಿತು.
ಡಿ.ಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದು,ಈ ಎಲ್ಲಾ ಕಾರಣದಿಂದ ಮುಂದಿನ ೬ ವರ್ಷಗಳ ಕಾಲ ಭಾರತೀಯ ಜನತಾ ಪಕ್ಷದಿಂದ ನಿರಂಜನ್ ರವರನ್ನು ಉಚ್ಛಾಟಿಸಲಾಗಿದೆ ಎಂದಿದ್ದಾರೆ.
M.S. Niranjan expelled from BJP primary membership
Leave a comment