ಚಿಕ್ಕಮಗಳೂರು: ಯುವಕನೊಬ್ಬ ನಿಯಂತ್ರಣ ತಪ್ಪಿ ಜೀಪ್ ಸಮೇತ ಭದ್ರಾ ನದಿಗೆ ಬಿದ್ದು ಸಾವನ್ನಪ್ಪಿದ್ದು, ಇದರ ವಿಚಾರ ತಿಳಿಯುತ್ತಿದ್ದಂತೆ ತಾಯಿಯೂ ಕೂಡಾ ಆತ್ಮಹತ್ಯೆ ಮಾಡಿಕೊಂಡಿರುವಂತಹ ದಾರುಣ ಘಟನೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಪುತ್ರ ಶಮಂತ್ (23) ಹಾಗೂ ತಾಯಿ ರವಿಕಲಾ (48) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಈ ದುರಂತ ಘಟನೆ ನಡೆದಿದೆ. ವರದಿಗಳ ಪ್ರಕಾರ ಶಮಂತ್ ಜೀಪ್ ಚಲಾಯಿಸುತ್ತಿದ್ದಾಗ ದುರ್ಘಟನೆ ನಡೆದಿದೆ. ಹಲವು ದಿನಗಳಿಂದ ಶಮಂತ್ ಪಿಕಪ್ ಜೀಪ್ನಲ್ಲಿ ಕಾರ್ಮಿಕರನ್ನು ತೋಟಕ್ಕೆ ಕರೆದುಕೊಂಡು ಹೋಗುತ್ತಿದ್ದ.
ಗುರುವಾರ ಸಂಜೆ ಬಾಡಿಗೆ ಇದೆ ಎಂದು ಶಮಂತ್ ಕಳಸಕ್ಕೆ ಬಂದು ವಾಪಸ್ ಹೋಗುವಾಗ ಭದ್ರಾ ನದಿ ಬಳಿ ದುರಂತ ಸಂಭವಿಸಿದೆ. ಧಾರಾಕಾರ ಮಳೆಯಿಂದಾಗಿ ಜೀಪ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಕ್ಕದಲ್ಲಿ ಹರಿಯುತ್ತಿದ್ದ ಭದ್ರಾ ನದಿಗೆ ಜೀಪ್ ಸಮೇತ ಶಮಂತ್ ಬಿದ್ದು ಸಾವನ್ನಪ್ಪಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ಶಮಂತ್ ಮೃತದೇಹಕ್ಕಾಗಿ ಕಾರ್ಯಾಚರಣೆ ನಡೆಸಲಾಗಿದೆ. ಶಮಂತ್ ತಾಯಿ ಮಗನ ಸಾವಾಗಿದೆ ಎಂಬ ವಿಚಾರ ತಿಳಿದು ಭದ್ರಾ ನದಿ ಬಳಿ ಕಣ್ಣೀರಿಟ್ಟಿದ್ದಾರೆ. ಆದರೆ ಮಗನ ಮೃತದೇಹವನ್ನು ಹೊರಗೆ ತೆಗೆಯುವುದಕ್ಕೂ ಮುನ್ನವೇ ರವಿಕಲಾ ರಾತ್ರಿ ಮನೆಗೆ ಹಿಂತಿರುಗಿ, ಹತ್ತಿರದಲ್ಲೇ ಇದ್ದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಯಿ ಹಾಗೂ ಮಗನ ದುರಂತ ಸಾವು ಸ್ಥಳೀಯರನ್ನು ತಲ್ಲಣಗೊಳಿಸಿದೆ. ಘಟನೆ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನುಶಿಕ್ಷಕಿಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಡಗು (Kodagu) ಜಿಲ್ಲೆಯ ಎಮ್ಮೆಮಾಡು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಸಪ್ರೀನಾ ಶೇಕ್ (32) ಎಂದು ಗುರುತಿಸಲಾಗಿದ್ದು, ಇವರು ಎಮ್ಮೆಮಾಡು ಗ್ರಾಮದ ನಿವಾಸಿ ನಜೀರ್ ಎಂಬವರ ಪತ್ನಿ. ಸಫ್ರೀನಾ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಸಫ್ರಿನಾ ಕುಟುಂಬಸ್ಥರು ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಗಂಭೀರ ಆರೋಪ ಮಾಡುತ್ತಿದ್ದಾರೆ.
ಬುಧವಾರ ಮಧ್ಯರಾತ್ರಿ ಎಮ್ಮೆಮಾಡುವಿನ ಮನೆಯಲ್ಲಿ ಸಫ್ರೀನಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕೂಡಲೆ ಪತಿ ನಜೀರ್ ಸಫ್ರೀನಾಳನ್ನು ನಾಪೋಕ್ಲುವಿನ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಅದಾಗಲೇ ಸಫ್ರೀನಾ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.
ಬಳಿಕ ಸಫ್ರಿನಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ತರಲಾಗಿದೆ. ಪತಿ ಹಾಗೂ ಪತ್ನಿ ನಡುವೆ ಕಲಹ ನಡೆಯುತ್ತಿತ್ತು ಎಂದು ಆರೋಪಿಸಲಾಗಿದೆ. ಮೃತರ ಕುಟುಂಬಸ್ಥರ ಆರೋಪದ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡಿರುವ ನಾಪೋಕ್ಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Magha disappears in Bhadra river – mother jumps into the lake
Leave a comment