Home namma chikmagalur ಭದ್ರಾ ನದಿಯಲ್ಲಿ ಮಗ ಕಣ್ಮರೆ-ಕೆರೆಗೆ ಹಾರಿದ ತಾಯಿ
namma chikmagalurchikamagalurHomeLatest News

ಭದ್ರಾ ನದಿಯಲ್ಲಿ ಮಗ ಕಣ್ಮರೆ-ಕೆರೆಗೆ ಹಾರಿದ ತಾಯಿ

Share
Share

ಚಿಕ್ಕಮಗಳೂರು: ಯುವಕನೊಬ್ಬ ನಿಯಂತ್ರಣ ತಪ್ಪಿ ಜೀಪ್ ಸಮೇತ ಭದ್ರಾ ನದಿಗೆ ಬಿದ್ದು ಸಾವನ್ನಪ್ಪಿದ್ದು, ಇದರ ವಿಚಾರ ತಿಳಿಯುತ್ತಿದ್ದಂತೆ ತಾಯಿಯೂ ಕೂಡಾ ಆತ್ಮಹತ್ಯೆ ಮಾಡಿಕೊಂಡಿರುವಂತಹ ದಾರುಣ ಘಟನೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಪುತ್ರ ಶಮಂತ್ (23) ಹಾಗೂ ತಾಯಿ ರವಿಕಲಾ (48) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಈ ದುರಂತ ಘಟನೆ ನಡೆದಿದೆ. ವರದಿಗಳ ಪ್ರಕಾರ ಶಮಂತ್ ಜೀಪ್ ಚಲಾಯಿಸುತ್ತಿದ್ದಾಗ ದುರ್ಘಟನೆ ನಡೆದಿದೆ. ಹಲವು ದಿನಗಳಿಂದ ಶಮಂತ್ ಪಿಕಪ್ ಜೀಪ್‌ನಲ್ಲಿ ಕಾರ್ಮಿಕರನ್ನು ತೋಟಕ್ಕೆ ಕರೆದುಕೊಂಡು ಹೋಗುತ್ತಿದ್ದ.

ಗುರುವಾರ ಸಂಜೆ ಬಾಡಿಗೆ ಇದೆ ಎಂದು ಶಮಂತ್ ಕಳಸಕ್ಕೆ ಬಂದು ವಾಪಸ್ ಹೋಗುವಾಗ ಭದ್ರಾ ನದಿ ಬಳಿ ದುರಂತ ಸಂಭವಿಸಿದೆ. ಧಾರಾಕಾರ ಮಳೆಯಿಂದಾಗಿ ಜೀಪ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಕ್ಕದಲ್ಲಿ ಹರಿಯುತ್ತಿದ್ದ ಭದ್ರಾ ನದಿಗೆ ಜೀಪ್ ಸಮೇತ ಶಮಂತ್ ಬಿದ್ದು ಸಾವನ್ನಪ್ಪಿದ್ದಾರೆ.

ವಿಚಾರ ತಿಳಿಯುತ್ತಿದ್ದಂತೆ ಶಮಂತ್ ಮೃತದೇಹಕ್ಕಾಗಿ ಕಾರ್ಯಾಚರಣೆ ನಡೆಸಲಾಗಿದೆ. ಶಮಂತ್ ತಾಯಿ ಮಗನ ಸಾವಾಗಿದೆ ಎಂಬ ವಿಚಾರ ತಿಳಿದು ಭದ್ರಾ ನದಿ ಬಳಿ ಕಣ್ಣೀರಿಟ್ಟಿದ್ದಾರೆ. ಆದರೆ ಮಗನ ಮೃತದೇಹವನ್ನು ಹೊರಗೆ ತೆಗೆಯುವುದಕ್ಕೂ ಮುನ್ನವೇ ರವಿಕಲಾ ರಾತ್ರಿ ಮನೆಗೆ ಹಿಂತಿರುಗಿ, ಹತ್ತಿರದಲ್ಲೇ ಇದ್ದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಯಿ ಹಾಗೂ ಮಗನ ದುರಂತ ಸಾವು ಸ್ಥಳೀಯರನ್ನು ತಲ್ಲಣಗೊಳಿಸಿದೆ. ಘಟನೆ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನುಶಿಕ್ಷಕಿಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಡಗು (Kodagu) ಜಿಲ್ಲೆಯ ಎಮ್ಮೆಮಾಡು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಸಪ್ರೀನಾ ಶೇಕ್ (32) ಎಂದು ಗುರುತಿಸಲಾಗಿದ್ದು, ಇವರು ಎಮ್ಮೆಮಾಡು ಗ್ರಾಮದ ನಿವಾಸಿ ನಜೀರ್ ಎಂಬವರ ಪತ್ನಿ. ಸಫ್ರೀನಾ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಸಫ್ರಿನಾ ಕುಟುಂಬಸ್ಥರು ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಗಂಭೀರ ಆರೋಪ ಮಾಡುತ್ತಿದ್ದಾರೆ.

ಬುಧವಾರ ಮಧ್ಯರಾತ್ರಿ ಎಮ್ಮೆಮಾಡುವಿನ ಮನೆಯಲ್ಲಿ ಸಫ್ರೀನಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕೂಡಲೆ ಪತಿ ನಜೀ‌ರ್ ಸಫ್ರೀನಾಳನ್ನು ನಾಪೋಕ್ಲುವಿನ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಅದಾಗಲೇ ಸಫ್ರೀನಾ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಬಳಿಕ ಸಫ್ರಿನಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ತರಲಾಗಿದೆ. ಪತಿ ಹಾಗೂ ಪತ್ನಿ ನಡುವೆ ಕಲಹ ನಡೆಯುತ್ತಿತ್ತು ಎಂದು ಆರೋಪಿಸಲಾಗಿದೆ. ಮೃತರ ಕುಟುಂಬಸ್ಥರ ಆರೋಪದ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡಿರುವ ನಾಪೋಕ್ಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Magha disappears in Bhadra river – mother jumps into the lake

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...