Home namma chikmagalur chikamagalur ಅ.26ರಂದು ಚಿಕ್ಕಮಗಳೂರಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
chikamagalurHomeLatest Newsnamma chikmagalur

ಅ.26ರಂದು ಚಿಕ್ಕಮಗಳೂರಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Share
oplus_161480704
Share

ಚಿಕ್ಕಮಗಳೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.26ರಂದು ಚಿಕ್ಕಮಗಳೂರಿನಲ್ಲಿ ಶ್ರದ್ಧಾಭಕ್ತಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಶ್ರೀ ವಾಲ್ಮೀಕಿ ನಾಯಕ ಯುವಕರ ಸಂಘದ ಜಿಲ್ಲಾಧ್ಯಕ್ಷ ಜಗದೀಶ್ ಕೋಟೆ ತಿಳಿಸಿದರು.

ನಗರದ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಯುವಕರ ಸಂಘ (ರಿ.), ಚಿಕ್ಕಮಗಳೂರು ಜಿಲ್ಲೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಸಂಯುಕ್ತಾಶ್ರಯದಲ್ಲಿ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಅ.26ರ ಸೋಮವಾರ ಬೆಳಿಗ್ಗೆ 9.30ಕ್ಕೆ ಚಿಕ್ಕಮಗಳೂರು ತಾಲೂಕು ಕಚೇರಿ ಆವರಣದಿಂದ ಮೆರವಣಿಗೆ ಆರಂಭವಾಗಿ, ಎಂ.ಜಿ. ರಸ್ತೆಯ ಮೂಲಕ ಕುವೆಂಪು ಕಲಾಮಂದಿರ ತಲುಪಲಿದೆ. ಜಯಂತಿ ಅಂಗವಾಗಿ ಕಲಾಮಂದಿರದಲ್ಲಿ ರಕ್ತದಾನ ಶಿಬಿರವನ್ನೂ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳು, ಪಿಎಚ್‌ಡಿ ಪದವಿ ಪಡೆದವರು ಹಾಗೂ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅಭ್ಯರ್ಥಿಗಳನ್ನು ಜಿಲ್ಲಾಡಳಿತದ ವತಿಯಿಂದ ಗೌರವಿಸಿ ಸನ್ಮಾನಿಸಲಾಗುವುದು ಎಂದರು.

ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲೆಯ ದಲಿತಪರ ಒಕ್ಕೂಟಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಕನ್ನಡಪರ ಹಾಗೂ ರೈತಪರ ಸಂಘಟನೆಗಳ ಮುಖಂಡರು, ಸಮಾಜದ ಗಣ್ಯರು, ಚುನಾಯಿತ ಜನಪ್ರತಿನಿಧಿಗಳು, ಸರ್ಕಾರಿ ನೌಕರರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಮುಖಂಡರಾದ ವಿಜಯ್ ಕುಮಾರ್, ಶ್ರೀಧರ್, ಕುಮಾರ್, ಮಧುಕುಮಾರ್ ಹಾಗೂ ಉಮೇಶ್ ಕುನ್ನಾಳು ಉಪಸ್ಥಿತರಿದ್ದರು.‌

Maharshi Valmiki Jayanti to be celebrated in Chikkamagaluru on October 26

Share

Leave a comment

Leave a Reply

Your email address will not be published. Required fields are marked *

Don't Miss

ಆಶಾ ಕಾರ್ಯಕರ್ತೆಯರ ಕನಿಷ್ಠ ಗೌರವಧನ ₹15 ಸಾವಿರಕ್ಕೆ ಹೆಚ್ಚಿಸಲು ಆಗ್ರಹ

ಚಿಕ್ಕಮಗಳೂರು: ಆಶಾ ಕಾರ್ಯಕರ್ತೆಯರ ಮಾಸಿಕ ಕನಿಷ್ಠ ಗೌರವಧನವನ್ನು ₹10 ಸಾವಿರದಿಂದ ₹15 ಸಾವಿರಕ್ಕೆ ಹೆಚ್ಚಿಸಬೇಕು. ಅವರ ಸೇವೆಗೆ ತಕ್ಕ ಗೌರವ, ಆರ್ಥಿಕ ಭದ್ರತೆ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ವಿಧಾನಮಂಡಲದಲ್ಲಿ...

ಘನತ್ಯಾಜ್ಯ ನಿರ್ವಹಣೆಗೆ ಕಟ್ಟುನಿಟ್ಟಿನ ಉಪನಿಯಮ ಅಳವಡಿಸಿಕೊಳ್ಳಬೇಕು

ಚಿಕ್ಕಮಗಳೂರು:  ನಗರ ಸ್ಥಳೀಯ ಸಂಸ್ಥೆಗಳಿಗೆ ಘನತ್ಯಾಜ್ಯ ನಿರ್ವಹಣೆ ಎನ್ನುವುದು ಅತ್ಯಂತ ತುರ್ತು ಹಾಗೂ ಪ್ರಮುಖ ಆದ್ಯತೆಯ ವಿಷಯವಾಗಿದ್ದು, ಸಾರ್ವಜನಿಕ ಸೇವೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರತಿಯೊಂದು ಸಂಸ್ಥೆಯೂ ಕಟ್ಟುನಿಟ್ಟಿನ ಉಪನಿಯಮಗಳನ್ನು ಅಳವಡಿಸಿಕೊಳ್ಳಬೇಕು ಎಂದು...

Related Articles

ಸಮಾನ ಆಚರಣಾ ಸಂಹಿತೆ, ಸಂಸ್ಕಾರ ಶಿಕ್ಷಣ ಇಂದಿನ ಅನಿವಾರ್ಯತೆ

*ಶೃಂಗೇರಿ:* ಭಾರತೀಯ ಮೂಲದ ಧಾರ್ಮಿಕ ಪರಂಪರೆಗಳಲ್ಲಿರುವ ಸಾಮಾನ್ಯ ಮೌಲ್ಯಗಳನ್ನು ಆಧರಿಸಿ ಸಮಾನ ಆಚರಣೆ ಸಂಹಿತೆ ಹಾಗೂ...

ಶಿಕ್ಷಣ ವಂಚಿತರು ಮುಂದೆ ಬರಲು ಸಂವಿಧಾನ ಅವಕಾಶ

ತರೀಕೆರೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಿಂದುಳಿದವರು, ಶಿಕ್ಷಣ ವಂಚಿತರು ಮುಂದೆ ಬರಲು ಬಾಬಾ ಸಾಹೇಬ ಅಂಬೇಡ್ಕರ್ ರಚಿಸಿರುವ...

ಬಡವರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಿ

ಚಿಕ್ಕಮಗಳೂರು: ಬಡವರು ತಮ್ಮ ಜೇಬಿನ ಹಣವನ್ನು ಖಾಸಗಿ ಆಸ್ಪತ್ರೆಗಳಿಗೆ ಸುರಿಯಬಾರದು ಎಂಬ ಉನ್ನತ ಉದ್ದೇಶದಿಂದ ಸರ್ಕಾರ...

ಎನ್‌ಸಿಡಿ ತಪಾಸಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ರಾಷ್ಟ್ರಮಟ್ಟದ ಗೌರವ

ಚಿಕ್ಕಮಗಳೂರು: ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ಕೈಗೊಂಡಿರುವ ಎನ್‌ಸಿಡಿ (ಸಾಂಕ್ರಾಮಿಕವಲ್ಲದ ಕಾಯಿಲೆಗಳ) ತಪಾಸಣಾ ಕಾರ್ಯಕ್ರಮಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ...