Home namma chikmagalur ವಸತಿ ನಿಲಯಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಿ
namma chikmagalurchikamagalurHomeLatest News

ವಸತಿ ನಿಲಯಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಿ

Share
Share

ಚಿಕ್ಕಮಗಳೂರು:  ವಸತಿ ನಿಲಯಗಳ ಸುತ್ತಮುತ್ತ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಿರ್ಮೂಲನೆಗೊಳಿಸಿ ಸ್ವಚ್ಛತೆ ಕಾಪಾಡುವಂತೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಸ್.ಸೀಮಾ ತಿಳಿಸಿದರು.

ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆಯ ಪ್ರಯುಕ್ತ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ವಸತಿ ನಿಲಯ ಪಾಲಕರಿಗೆ ಇಂದು ಆಯೋಜಿಸಿದ್ದ ಡೆಂಗ್ಯೂ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಡೆಂಗ್ಯೂ, ಮಲೇರಿಯಾ, ಚಿಕೂನ್ ಗುನ್ಯದಂತಹ ರೋಗಗಳು ಮಳೆಗಾಲದಲ್ಲಿ ಅತೀ ಹೆಚ್ಚಾಗಿ ಕಂಡು ಬಂದಿರುವುದರಿಂದ ನಿಂತ ನೀರನ್ನು ಸರಾಗವಾಗಿ ಹರಿಯುವಂತೆ ಮಾಡುವುದು ಅಗತ್ಯ. ನೀರಿನ ಎಲ್ಲಾ ಪರಿಕರಗಳನ್ನು ಸಮರ್ಪಕವಾಗಿ ಮುಚ್ಚಿಡುವುದರಿಂದ ಸೊಳ್ಳೆಗಳನ್ನು ನಿಯಂತ್ರಿಸಬಹುದು. ಜೊತೆಗೆ ಎಲ್ಲಾ ವಸತಿ ನಿಲಯಗಳಲ್ಲಿ ಸೊಳ್ಳೆ ಪರದೆ ಮತ್ತು ಮೆಶ್‌ಗಳನ್ನು ಅಳವಡಿಸುವಂತೆ ಸೂಚನೆ ನೀಡಿದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶಶಿಕಲಾ ಮಾತನಾಡಿ, ಗ್ರಾಮೀಣ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳನ್ನು ಒಳಗೊಂಡಂತೆ ತಂಡಗಳನ್ನಾಗಿ ಮಾಡಿ ಲಾರ್ವಾ ಸಮೀಕ್ಷೆ ನಡೆಸಲಾಗುತ್ತಿದೆ. ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಬಗ್ಗೆ ಮತ್ತು ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್ ಮಾತನಾಡಿ, ಡೆಂಗ್ಯೂ ನಿಯಂತ್ರಣ ಮತ್ತು ಇಲಾಖಾವಾರು ಅನುಸರಿಸಬೇಕಾದ ಜವಾಬ್ದಾರಿಗಳ ಬಗ್ಗೆ ಹಾಗೂ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸುವಂತೆ ವಸತಿ ನಿಲಯ ಪಾಲಕರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜೆ.ಎನ್.ಬೇಬಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಂಜುನಾಥ್, ತಾಲ್ಲೂಕು ಆಶಾ ಮೇಲ್ವಿಚಾರಕಿ ಕಲಾಧರೆ, ತಾಲ್ಲೂಕು ವ್ಯಾಪ್ತಿಯ ವಸತಿ ನಿಲಯಗಳ ನಿಲಯಪಾಲಕರು ಭಾಗವಹಿಸಿದ್ದರು.

Maintain cleanliness around the dormitories.

 

Share

Leave a comment

Leave a Reply

Your email address will not be published. Required fields are marked *

Don't Miss

ಅಂದರ್-ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ – ಐವರ ಬಂಧನ

ಚಿಕ್ಕಮಗಳೂರು: ಹೊರವಲಯದ ಹುಕ್ಕುಂದ ಗ್ರಾಮದ ಖಾಲಿ ಜಾಗದಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಲಕ್ಷಾಂತರ ರೂಪಾಯಿ ಹಣವನ್ನು ಪಣವಾಗಿಟ್ಟುಕೊಂಡು ಅಂದರ್-ಬಾಹರ್ ಇಸ್ಪೀಟು ಜೂಜಾಟವಾಡುತ್ತಿದ್ದ ಹೈಟೆಕ್ ಅಡ್ಡೆಯ ಮೇಲೆ ಗ್ರಾಮಾಂತರ ಠಾಣೆಯ ಪಿಎಸ್‌ಐ...

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

Related Articles

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...