ಚಿಕ್ಕಮಗಳೂರು: ತೆಂಗಿನ ತೋಟದಲ್ಲಿ ತೆಂಗಿನಕಾಯಿ ಕದ್ದಿದ್ದಾನೆ ಎಂದು ತೆಂಗಿನ ತೋಟದ ಮಾಲೀಕ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದಲ್ಲಿ ನಡೆದಿದೆ.
ಗೊಲ್ಲರಹಟ್ಟಿ ನಿವಾಸಿ ಕುಮಾರ್(೩೭) ಮೃತ ವ್ಯಕ್ತಿ. ಹಲ್ಲೆ ಮಾಡಿದ ಮಧು ಮತ್ತು ಚಂದ್ರಪ್ಪ ವಿರುದ್ಧ ಸಖ ರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದ ರಸ್ತೆ ಪಕ್ಕ ಚಂದ್ರಪ್ಪ ಅವರ ತೋಟವಿದ್ದು ಕುಮಾರ್ ಬಿದ್ದ ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ಕುಮಾರ್ ಮೇಲೆ ತೋಟದ ಮಾಲೀಕ ಚಂದ್ರಪ್ಪ ಮತ್ತು ಚಂದ್ರಪ್ಪ ಅವರ ಅಳಿಯ ಮಧು ಮನಸ್ಸೋ ಇಚ್ಛೆ ಥಳಿಸಿದ್ದಾರೆ.
ತೋಟದ ಪಕ್ಕದ ಹಳ್ಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಕುಮಾರ್‌ನನ್ನು ಪೋಷಕರು ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಕುಮಾರ್ ಆಸ್ಪತ್ರೆಯಲ್ಲಿ ಮೃತಪಟ್ಟಿ ದ್ದಾನೆ. ಹಲ್ಲೆ ನಡೆಸಿದ ಮಧು ಮತ್ತು ಚಂದ್ರಪ್ಪ ನನ್ನು ಸಖರಾಯಪಟ್ಟಣ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ದಾಖಲಿಸಿಕೊಳ್ಳಲು ಸಖರಾಯಪಟ್ಟ ಪೊಲೀಸ್ ಠಾಣೆ ಪೊಲೀಸರು ವಿಳಂಬ ನೀತಿ ಅನುಸರಿಸಿದ್ದಾರೆಂದು ಮೃತನ ಕುಟುಂಬಸ್ಥರು ಸ್ಥಳೀಯರು ಪೊಲೀಸ್ ಠಾಣೆ ಮುಂದೆ ಧಿಕ್ಕಾಗಿ ಕೂಗಿ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Man attacked for stealing coconuts – dies after treatment fails
Leave a comment