Home Latest News ತೆಂಗಿನಕಾಯಿ ಕದ್ದ ವ್ಯಕ್ತಿಯ ಮೇಲೆ ಹಲ್ಲೆ- ಚಿಕಿತ್ಸೆ ಫಲಕಾರಿಯಾಗದೆ ಸಾವು
Latest NewsCrime NewsHomeKadurnamma chikmagalur

ತೆಂಗಿನಕಾಯಿ ಕದ್ದ ವ್ಯಕ್ತಿಯ ಮೇಲೆ ಹಲ್ಲೆ- ಚಿಕಿತ್ಸೆ ಫಲಕಾರಿಯಾಗದೆ ಸಾವು

Share
Share

ಚಿಕ್ಕಮಗಳೂರು: ತೆಂಗಿನ ತೋಟದಲ್ಲಿ ತೆಂಗಿನಕಾಯಿ ಕದ್ದಿದ್ದಾನೆ ಎಂದು ತೆಂಗಿನ ತೋಟದ ಮಾಲೀಕ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದಲ್ಲಿ ನಡೆದಿದೆ.

ಗೊಲ್ಲರಹಟ್ಟಿ ನಿವಾಸಿ ಕುಮಾರ್(೩೭) ಮೃತ ವ್ಯಕ್ತಿ. ಹಲ್ಲೆ ಮಾಡಿದ ಮಧು ಮತ್ತು ಚಂದ್ರಪ್ಪ ವಿರುದ್ಧ ಸಖ ರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದ ರಸ್ತೆ ಪಕ್ಕ ಚಂದ್ರಪ್ಪ ಅವರ ತೋಟವಿದ್ದು ಕುಮಾರ್ ಬಿದ್ದ ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ಕುಮಾರ್ ಮೇಲೆ ತೋಟದ ಮಾಲೀಕ ಚಂದ್ರಪ್ಪ ಮತ್ತು ಚಂದ್ರಪ್ಪ ಅವರ ಅಳಿಯ ಮಧು ಮನಸ್ಸೋ ಇಚ್ಛೆ ಥಳಿಸಿದ್ದಾರೆ.

ತೋಟದ ಪಕ್ಕದ ಹಳ್ಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಕುಮಾರ್‌ನನ್ನು ಪೋಷಕರು ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಕುಮಾರ್ ಆಸ್ಪತ್ರೆಯಲ್ಲಿ ಮೃತಪಟ್ಟಿ ದ್ದಾನೆ. ಹಲ್ಲೆ ನಡೆಸಿದ ಮಧು ಮತ್ತು ಚಂದ್ರಪ್ಪ ನನ್ನು ಸಖರಾಯಪಟ್ಟಣ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ದಾಖಲಿಸಿಕೊಳ್ಳಲು ಸಖರಾಯಪಟ್ಟ ಪೊಲೀಸ್ ಠಾಣೆ ಪೊಲೀಸರು ವಿಳಂಬ ನೀತಿ ಅನುಸರಿಸಿದ್ದಾರೆಂದು ಮೃತನ ಕುಟುಂಬಸ್ಥರು ಸ್ಥಳೀಯರು ಪೊಲೀಸ್ ಠಾಣೆ ಮುಂದೆ ಧಿಕ್ಕಾಗಿ ಕೂಗಿ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Man attacked for stealing coconuts – dies after treatment fails

Share

Leave a comment

Leave a Reply

Your email address will not be published. Required fields are marked *

Don't Miss

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಸೆ.29ರಂದು ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಫೆಡರೇಶನ್ (AITUC) ವತಿಯಿಂದ ಸೆ.29ರಂದು...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ *₹2.20 ಲಕ್ಷ ಹಣ ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿರುವ ಆರೋಪ* ಕೇಳಿಬಂದಿದೆ. ಈ...

Related Articles

12 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಜಿಲ್ಲೆಯ 12...

ಕಳಸದಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ

ಕಳಸ : ಮನೆಯಂಗಳದಲ್ಲೇ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಬೆಚ್ಚಿಬೀಳಿಸಿದ ಘಟನೆ ಕಳಸ ತಾಲೂಕಿನ...

ಕೆಎಸ್‌ಆರ್‌ಟಿಸಿ ಬಸ್–ಟ್ರ್ಯಾಕ್ಟರ್ ಇಂಜಿನ್ ಡಿಕ್ಕಿಗೆ ಚಾಲಕ ಸಾವು

ತರೀಕೆರೆ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ರ್ಯಾಕ್ಟರ್ ಇಂಜಿನ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಟ್ರ್ಯಾಕ್ಟರ್...

ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಪ್ರಜಾಸೇವ ಆಂದೋಲನದ ಉದ್ದೇಶ

ಚಿಕ್ಕಮಗಳೂರು:  ಜನರ ಸಮಸ್ಯೆಗಳನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಗ್ಗೂಡಿ ಆಲಿಸಿ, ಸಾಧ್ಯವಾದಷು ಶೀಘ್ರವಾಗಿ ಇತ್ಯರ್ಥ ಪಡಿಸುವ...