Home Crime News ಕತ್ತು ಕೊಯ್ದುಕೊಂಡು ಸ್ನೇಹಿತರಿಗೆ ವಿಡಿಯೊ ಕಾಲ್ ಮಾಡಿದ ಯುವಕ
Crime News

ಕತ್ತು ಕೊಯ್ದುಕೊಂಡು ಸ್ನೇಹಿತರಿಗೆ ವಿಡಿಯೊ ಕಾಲ್ ಮಾಡಿದ ಯುವಕ

Share
Share

ಚಿಕ್ಕಮಗಳೂರು : ಬ್ಲೇಡ್ ನಿಂದ ಕತ್ತು ಕೊಯ್ದುಕೊಂಡು ಯುವಕನೊರ್ವ ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿದ್ದಾನೆ,
ಹೆಂಡ್ತಿ ಜೊತೆಯಲ್ಲಿನ ಜಗಳದಿಂದ ಮನನೊಂದು ಈತ ಆತ್ಮಹತ್ಯೆ ಯತ್ನ ಮಾಡಿದ್ದಾನೆ.

ಹಾಸನದಿಂದ ಬಂದು ಕಾಫಿನಾಡಲ್ಲಿ ಆತ್ಮಹತ್ಯೆಗೆ ಯತ್ನ ಮಾಡಿದ್ದು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಏಕಲವ್ಯ ವಸತಿ ಶಾಲೆ ಬಳಿ ಘಟನೆ ನಡೆದಿದೆ,
ಮನು ಎಂಬಾತನೇ ಹಾಸನದಿಂದ ಬಂದು ಚಾರ್ಮಾಡಿ ಘಾಟಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ

ಘಟನೆ ತಿಳಿದ ಸ್ನೇಹಿತರು ಕೂಡಲೇ 112 ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ, ಕೂಡಲೇ ಸ್ಥಳಕ್ಕೆ ಬೇಡಿ ನೀಡಿದ ಪೊಲೀಸರು ಆತನನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ
ತಕ್ಷಣ ಪೊಲೀಸರು ಅಲರ್ಟ್ ಆಗಿದ್ದರಿಂದ‌ ಸಾವಿನಿಂದ ಮನು ಪಾರಾಗಿದ್ದಾನೆ,

ಬ್ಲೇಡ್ ನಿಂದ ಕತ್ತು ಕೊಯ್ದುಕೊಂಡು ತೀವ್ರ ರಕ್ತ ಸುರಿಯುತ್ತಿದ್ದಾಗ ಕೂಡಲೇ ಬಣಕಲ್‌ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಪೊಲೀಸರು ಕೊಡಿಸಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ಆತನನ್ನು ರವಾನೆ ಮಾಡಿದ್ದಾರೆ, ಕುತ್ತಿಗೆಗೆ ಹೊಲಿಗೆ ಹಾಕಿಸಿ ಅವನ ಹೆಂಡತಿಗೆ ಕರೆ ಮಾಡಿ ಕರೆಸಿದ ಪೊಲೀಸರು
ಗಂಡ-ಹೆಂಡತಿಗೆ ಬುದ್ಧಿ ಹೇಳಿ ಹಾಸನಕ್ಕೆ ವಾಪಸ್ ಕಳುಹಿಸಿ ಕೊಟ್ಟಿದ್ದಾರೆ, ಬಣಕಲ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...