ಎನ್.ಆರ್. ಪುರ: ಸೊಪ್ಪು ಕಡಿಯಲು ಮರ ಹತ್ತಿದ್ದ ವೇಳೆ ಒಣಗಿದ ಕೊಂಬೆ ಮುರಿದು ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ದುರ್ಮರಣಕ್ಕೀಡಾಗಿರುವ ಘಟನೆ ಎನ್.ಆರ್. ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗಡಿಗೇಶ್ವರದ ಆಡುವಳ್ಳಿ ಗ್ರಾಮದ ನಿವಾಸಿ ಹರೀಶ್ (47) ಮೃತಪಟ್ಟ ದುರ್ದೈವಿ. ಹರೀಶ್ ಅವರ ಆರೋಗ್ಯ ಸರಿಯಿಲ್ಲದಿದ್ದರೂ ಗಿರಿಜಮ್ಮ ಎಂಬುವವರು ಒತ್ತಾಯಪೂರ್ವಕವಾಗಿ ಕರೆದುಕೊಂಡು ಹೋಗಿ ಮರ ಹತ್ತಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ.
ಕಾಡಿನಲ್ಲಿ ಮರ ಹತ್ತಿ ಸೊಪ್ಪು ಕಡಿಯುತ್ತಿದ್ದಾಗ ಆಕಸ್ಮಿಕವಾಗಿ ಒಣಗಿದ ಕೊಂಬೆ ಮುರಿದು ಕೆಳಗೆ ಬಿದ್ದು ಅವರು ಪ್ರಾಣ ಕಳೆದುಕೊಂಡಿದ್ದಾರೆ.
ಅನಾರೋಗ್ಯದ ನಡುವೆಯೂ ಒತ್ತಾಯಪೂರ್ವಕವಾಗಿ ಕರೆದೊಯ್ದು ಈ ದುರಂತಕ್ಕೆ ಕಾರಣರಾದ ಗಿರಿಜಮ್ಮ ಎಂಬುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಮೃತ ಹರೀಶ್ ಅವರ ಪತ್ನಿ ಲಕ್ಷ್ಮಿ ಪೊಲೀಸರಿಗೆ ದೂರು ನೀಡಿದ್ದಾರೆ. ಸಲ್ಲಿಕೆಯಾದ ದೂರಿನ ಆಧಾರದ ಮೇಲೆ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Man falls to death after climbing tree to cut greens
Leave a comment