Home namma chikmagalur chikamagalur ಬೈಕ್‌ನಿಂದ ಬಿದ್ದು ಗಾಯವಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು
chikamagalurCrime NewsHomeLatest Newsnamma chikmagalur

ಬೈಕ್‌ನಿಂದ ಬಿದ್ದು ಗಾಯವಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

Share
Share

ಚಿಕ್ಕಮಗಳೂರು: ರಸ್ತೆಗೆ ಏಕಾಏಕಿ ಹಸು ಅಡ್ಡ ಬಂದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಸೋಮಪ್ಪ (೫೮) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ತರೀಕೆರೆ ತಾಲ್ಲೂಕಿನ ಕುಂಟಿನಮಡು ಗ್ರಾಮದ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಬೆಟ್ಟತಾವರೆಕೆರೆ ಸಮೀಪ ಈ ಘಟನೆ ಸಂಭವಿಸಿದೆ. ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಸೋಮಪ್ಪ ಅವರಿಗೆ ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಚಿಗಟೇರಿ ಜಿಲ್ಲಾ ಆಸ್ಪತ್ರೆಯ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಈ ಸಂಬಂಧ ಮೃತರ ಪುತ್ರ ನಾಗರಾಜ್ ನೀಡಿದ ದೂರಿನ ಮೇರೆಗೆ ತರೀಕೆರೆ ಪೊಲೀಸ್ ಠಾಣೆಯಲ್ಲಿ ಬೈಕ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

Man injured after falling from bike dies as treatment proves ineffective

Share

Leave a comment

Leave a Reply

Your email address will not be published. Required fields are marked *

Don't Miss

ಪ್ಯಾರಾ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಲೈಫ್‌ಲೈನ್ ಫೀಡ್ಸ್ ನಿಂದ ಸನ್ಮಾನ

ಚಿಕ್ಕಮಗಳೂರು: ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಪ್ಯಾರಾ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಲೈಫ್‌ಲೈನ್ ಫೀಡ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಗರದ ಒಕ್ಕಲಿಗರ ಸಮುದಾಯ...

ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕಿಂತ ಜನಸೇವೆ ಮುಖ್ಯ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿಗೆ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿರುವುದು ಸಂತಸದ ಸಂಗತಿ. ಕಟ್ಟಡದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸಿ, ಜನಸಾಮಾನ್ಯರ ಕೆಲಸಗಳನ್ನು ಸಕಾಲದಲ್ಲಿ ಮಾಡಿಕೊಟ್ಟಾಗ ಮಾತ್ರ ಕಟ್ಟಡ ನಿರ್ಮಾಣ...

Related Articles

ಕಾರ್ಖಾನೆಗಳ ವಿಪರೀತ ಹಾವಳಿ ಖಂಡಿಸಿ ಗೌಡನಹಳ್ಳಿ ಗ್ರಾಮಸ್ಥರ ಧರಣಿ

ಚಿಕ್ಕಮಗಳೂರು: ಕೈಗಾರಿಕೆ ಕಾರ್ಖಾನೆಗಳು ಹೊರಸೂಸುವ ಅನಿಲದಿಂದ ವಾಯುಮಾಲಿನ್ಯ ಹಾಗೂ ಜಮೀನಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಒತ್ತುವರಿ...

ನಕಲಿ ತುಪ್ಪದ ಬೆನ್ನಲ್ಲೇ ನಕಲಿ ಜೇನುತುಪ್ಪ ದಂಧೆ ಪತ್ತೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ನಕಲಿ ತುಪ್ಪದ ಹಾವಳಿ ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ನಕಲಿ...

ನೈಜ ಮತದಾರರ ಹಕ್ಕುಗಳ ರಕ್ಷಿಸಲು ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನ ಹಾಗೂ ನೈಜ ಮತದಾರರ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಕಾಂಗ್ರೆಸ್...

ತೋರಣಕಾಡು ಗ್ರಾಮದಲ್ಲಿ 10 ಅಡಿ ಉದ್ದದ ಬೃಹತ್ ಹೆಬ್ಬಾವು

ಚಿಕ್ಕಮಗಳೂರು: ಸುಮಾರು ೧೦ ಅಡಿ ಉದ್ದದ ಬೃಹತ್ ಹೆಬ್ಬಾವೊಂದು ಕಾಫಿ ತೋಟದಲ್ಲಿ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ...