Home namma chikmagalur chikamagalur ರಸ್ತೆ ಅಪಘಾತದಲ್ಲಿ ಗಾಯವಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು
chikamagalurCrime NewsHomeLatest Newsnamma chikmagalur

ರಸ್ತೆ ಅಪಘಾತದಲ್ಲಿ ಗಾಯವಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Share
Share

ಕೊಪ್ಪ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಹಮ್ಮದ್ ರಫೀಕ್ ಎಂಬ 32 ವರ್ಷದ ಯುವಕ ದುರಂತ ಅಂತ್ಯ ಕಂಡಿರುವ ಘಟನೆ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

ಹೊನಗೋಡಿನ ದೇವಸ್ಥಾನದ ಬಳಿ ಮೇ 25 ರಂದು ಹರಿಹರಪುರದ ಮತ್ವಾನಿಯಲ್ಲಿರುವ ನಾದಿನಿಯ ಮನೆಗೆ ಸ್ಕೂಟಿಯಲ್ಲಿ ಬಂದಿದ್ದ ರಫೀಕ್, ಮರುದಿನ ಬೆಳಗಿನ ಜಾವ ಶೃಂಗೇರಿಯ ತಮ್ಮ ಮನೆಗೆ ವಾಪಸ್ ಹೊರಟಿದ್ದರು.

ಈ ವೇಳೆ ಹೊನಗೋಡು ರಸ್ತೆಯಲ್ಲಿ ಅತಿ ವೇಗ ಮತ್ತು ಅಜಾಗರೂಕತೆಯಿಂದ ಬಂದ ಅಪರಿಚಿತ ವಾಹನವೊಂದು ಇವರ ಸ್ಕೂಟಿಗೆ ಜೋರಾಗಿ ಡಿಕ್ಕಿ ಹೊಡೆದು, ಗಾಯಾಳುವನ್ನು ಉಪಚರಿಸದೆ ಸ್ಥಳದಿಂದ ಪರಾರಿಯಾಗಿದೆ.

ಅಪಘಾತದಿಂದ ತಲೆ ಹಾಗೂ ಕಾಲಿಗೆ ತೀವ್ರ ಪೆಟ್ಟಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ರಫೀಕ್ ಅವರನ್ನು ಆ ಮಾರ್ಗವಾಗಿ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಸಹೃದಯಿ ಪ್ರವಾಸಿಗರು ಗಮನಿಸಿ, ತಕ್ಷಣ ತಮ್ಮದೇ ವಾಹನದಲ್ಲಿ ಶೃಂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಆದರೆ ಪರಿಸ್ಥಿತಿ ಗಂಭೀರವಾಗಿದ್ದರಿಂದ ವೈದ್ಯರ ಸೂಚನೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಶೃಂಗೇರಿಯ ಶ್ರೀ ಅಭಿನವ ವಿದ್ಯಾ ತೀರ್ಥ ಆಸ್ಪತ್ರೆಗೆ ತಕ್ಷಣವೇ ಅಂಬುಲೆನ್ಸ್ ಮೂಲಕ ಕರೆದೊಯ್ಯಲಾಯಿತಾದರೂ, ಬೆಳಿಗ್ಗೆ ಸುಮಾರು 6-30 ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಕೊನೆಯುಸಿರೆಳೆದಿದ್ದಾರೆ.

ಮೃತರ ತಂದೆ ಅಬ್ದುಲ್ ರಹೀಂ ನೀಡಿದ ಲಿಖಿತ ದೂರಿನನ್ವಯ ಹರಿಹರಪುರ ಪೊಲೀಸರು ಹಿಟ್ ಅಂಡ್ ರನ್ ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತ ಎಸಗಿ ಮಾನವೀಯತೆಯೇ ಇಲ್ಲದೆ ಓಡಿಹೋದ ಅಪರಿಚಿತ ವಾಹನ ಮತ್ತು ಅದರ ಚಾಲಕನ ಪತ್ತೆಗಾಗಿ ತೀವ್ರ ಜಾಲ ಬೀಸಿದ್ದಾರೆ.

Man injured in road accident dies due to lack of treatment

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...