Home Crime News ಮೀನು ಹಿಡಿಯಲು ಹೋಗಿ ವ್ಯಕ್ತಿ ಸಾವು : ಕೆರೆಗೆ ಜಾರಿ ಮೃತ್ಯು
Crime News

ಮೀನು ಹಿಡಿಯಲು ಹೋಗಿ ವ್ಯಕ್ತಿ ಸಾವು : ಕೆರೆಗೆ ಜಾರಿ ಮೃತ್ಯು

Share
Share

ಚಿಕ್ಕಮಗಳೂರು: ಮೀನು ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ವ್ಯಕ್ತಿಯೊಬ್ಬ ಸಾವು ಕಂಡಿದ್ದಾನೆ. ಮೀನು ಹಿಡಿಯಲು ಹೋಗಿದ್ದ ಕೂಲಿ ಕಾರ್ಮಿಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತನನ್ನು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಮೂಲದ ತಿಮ್ಮಯ್ಯ (55) ಎಂದು ಗುರುತಿಸಲಾಗಿದೆ. ಮೀನು ಹಿಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ತಿಮ್ಮಯ್ಯ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತ ದೇಹವನ್ನು ಫಿಶ್ ಮೋಣು ನೇತೃತ್ವದ ಮೂಡಿಗೆರೆ ಸಾಮಾಜಿಕ ಸಕ್ರಿಯ ಸೇವಾ ತಂಡದ ಸದಸ್ಯರು ಕಾರ್ಯಾಚರಣೆ ನಡೆಸಿದ್ದು ಅಗ್ನಿ ಶಾಮಕ ದಳ ಅಧಿಕಾರಿಗಳು ಸಿಬ್ಬಂದಿ ಸೇರಿ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ. ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...