Home namma chikmagalur ಅಜ್ಜಂಪುರ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮಂಜುನಾಥ್ ಅಜ್ಜಂಪುರ ಆಯ್ಕೆ
namma chikmagalurajjampuraHomeLatest News

ಅಜ್ಜಂಪುರ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮಂಜುನಾಥ್ ಅಜ್ಜಂಪುರ ಆಯ್ಕೆ

Share
Share

ಅಜ್ಜಂಪುರ: ಅಜ್ಜಂಪುರ ತಾಲೂಕು ೫ ನೇ ಕನ್ನಡ ಸಾಹಿತ್ಯ ಸಮ್ಮೇಳನ ನ. ೩೦ ರ ಭಾನುವಾರ ಪಟ್ಟಣದ ಬೀರಲಿಂಗೇಶ್ವರ ಕಲ್ಯಾಣ ಮಂಟಪದ ಆವರಣದಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಹೆಚ್. ಆರ್. ಚಂದ್ರಪ್ಪ ತಿಳಿಸಿದರು.

ಈ ಸಮ್ಮೇಳನದ ಸಮ್ಮೇಳನ ಅಧ್ಯಕ್ಷರಾಗಿ ಮಂಜುನಾಥ್ ಅಜ್ಜಂಪುರ ಸರ್ವಾನು ಮತದಿಂದ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.

ಅಜ್ಜಂಪುರ ಮಂಜುನಾಥ್ ಈ ಹಿಂದೆ ಗೀತಾ ಮಿತ್ರ ಪುಸ್ತಕ ಪ್ರಕಟಣೆ ಮಾಡುತ್ತಿದ್ದ ಗೀತಾ ಪ್ರಿಂಟರ್ಸ್ ಮಾಲೀಕ ನಾಗರಾಜ್ ಗುಪ್ತ ಅವರ ಪುತ್ರರಾಗಿದ್ದು ಇವರು ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢ ಶಿಕ್ಷಣವನ್ನು ಅಜ್ಜಂಪುರದಲ್ಲೂ ಹಾಗೂ ಬಿ ಎಸ್ಸಿ ಪದವಿ ಪಡೆದಿರುವ ಇವರು ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್ ಇದರ ಮುಖ್ಯಸ್ಥರಾಗಿ ನಿವೃತ್ತರಾಗಿದ್ದಾರೆ

ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯರಾಗಿ ಕೆಲಸ ನಿರ್ವಹಿಸಿದ ಇವರಿಗೆ ೨೦೨೧ ರಲ್ಲಿ ಸಾಹಿತ್ಯ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರಾಗಿದ್ದಾರೆ. ಈವರೆಗೂ ೨೦ ಕ್ಕೂ ಹೆಚ್ಚು ಗ್ರಂಥಗಳ ಸಂಪಾದನೆ ಮತ್ತು ಕೃತಿ ರಚನೆ ಮಾಡಿದ್ದಾರೆ.ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಸಂಶೋಧನಾ ಲೇಖನಗಳು ಪ್ರಕಟಣೆಗೊಂಡಿವೆ. ೧,೫೦೦ಕ್ಕೂ ಹೆಚ್ಚು ಅಂಕಣ, ಲೇಖನ, ಕಥೆ, ಪ್ರಬಂಧಗಳು, ಪ್ರಕಟವಾಗಿವೆ

ಇವರಿಗೆ ಹಲವು ಪ್ರಶಸ್ತಿ ಹಾಗೂ ಪುರಸ್ಕಾರಗಳು ಲಭಿಸಿವೆ, ಅವುಗಳಲ್ಲಿ ಪ್ರಮುಖವಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ ಸಿರಿ ಪ್ರಶಸ್ತಿ ಪುರಸ್ಕಾರ ಹೀಗೆ ಹತ್ತು ಹಲವು ಪ್ರಶಸ್ತಿ ಪುರಸ್ಕಾರಗಳು ಇವರಿಗೆ ಲಭಿಸಿವೆ ಎಂದು ಅವರು ತಿಳಿಸಿದರು.

Manjunath Ajjampura elected as the President of Ajjampura Taluk Literary Conference

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...