ಚಿಕ್ಕಮಗಳೂರು: ಶ್ರಾವಣ ಮಾಸದ ಪೂಜೆ ಕಾರ್ಯಕ್ರಮದ ಅಂಗವಾಗಿ ಬಸವನಹಳ್ಳಿಯ ಜಿಲ್ಲಾ ಮಡಿವಾಳರ ಸಂಘದ ಆವರಣದಲ್ಲಿ ಆ.೧೦ ರಂದು ಭಾನುವಾರ ಬೆಳಗ್ಗೆ ೧೦.೩೦ ಕ್ಕೆ ಶ್ರೀ ಬಸವ ಮಾಚಿದೇವ ಸ್ವಾಮಿಗಳ ಸಾಮೂಹಿಕ ಪಾದಪೂಜೆ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ವಿ ರಾಮಚಂದ್ರ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಮಡಿವಾಳ ಸಮಾಜದ ಬಂಧುಗಳು ಸಕುಟುಂಬ ಸಮೇತರಾಗಿ ಆಗಮಿಸಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಆಸಕ್ತ ಭಕ್ತಾಧಿಗಳು ವಯಕ್ತಿಕವಾಗಿ ತಮ್ಮ ತಮ್ಮ ಮನೆಯಲ್ಲಿ ಪಾದಪೂಜೆ ಮಾಡಲಿಚ್ಚಿಸುವವರು ಅಂದು ಮಧ್ಯಾಹ್ನ ೨ ಗಂಟೆಯ ನಂತರ ಶ್ರೀಗಳ ಪಾದಪೂಜೆಗೆ ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ ೩ ದಿನ ಮುಂಚಿತವಾಗಿ ಸಂಘಕ್ಕೆ ಮಾಹಿತಿ ತಿಳಿಸಬೇಕೆಂದು ವಿನಂತಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯ ಮಡಿವಾಳ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಏರ್ಪಡಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ ಎಂದರು.
ಹೆಚ್ಚಿನ ಮಾಹಿತಿಗೆ ಪ್ರಧಾನ ಕಾರ್ಯದರ್ಶಿ ೯೩೪೨೦೨೩೨೩೫ ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಸಂಘದ ಕಡೂರು ತಾಲ್ಲೂಕು ಅಧ್ಯಕ್ಷ ಷಡಾಕ್ಷರಿ, ಖಜಾಂಚಿ ಸತೀಶ್, ಸದಸ್ಯ ಮಂಜುನಾಥ್ ಉಪಸ್ಥಿತರಿದ್ದರು.
Mass foot worship of Lord Basava Machideva on August 10th
Leave a comment