Home namma chikmagalur ಮೂಡಿಗೆರೆಯಲ್ಲಿ 9 ಜೋಡಿಗಳ ಸಾಮೂಹಿಕ ವಿವಾಹ
namma chikmagalurchikamagalurHomeLatest News

ಮೂಡಿಗೆರೆಯಲ್ಲಿ 9 ಜೋಡಿಗಳ ಸಾಮೂಹಿಕ ವಿವಾಹ

Share
Share

ಮೂಡಿಗೆರೆ: ‘ಸತ್ಯದ ಹಾದಿ ಯಲ್ಲಿ ಸಾಗುವ ಮೂಲಕ ದಂಪತಿ ಸಂಬಂಧವನ್ನು ಗಟ್ಟಿ ಮಾಡಿಕೊ ಳ್ಳಬೇಕು’ ಎಂದು ಗೌರಿಗದ್ದೆ ಅವಧೂತ ವಿನಯ ಗುರೂಜಿ ಹೇಳಿದರು.

ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಭಾನುವಾರ ಆಶ್ರಯ ಸಾಮಾಜಿಕ ಸೇವಾ ಸಂಸ್ಥೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಸಮಿತಿ ವತಿಯಿಂದ ಏರ್ಪಡಿಸಿದ್ದ ಸಾಮೂಹಿಕ ವಿವಾಹಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕೋಟ್ಯಂತರ ರೂಪಾಯಿ ಖರ್ಚು ಮಾಡಿ, ಅದ್ಧೂರಿಯಿಂದ ನಡೆದ ಎಷ್ಟೋ ವಿವಾಹಗಳು ಒಂದೇ ವಾರಕ್ಕೆ ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿರುವುದನ್ನು ಕಾಣುತ್ತಿದ್ದೇವೆ. ಅದು ಉತ್ತಮ ಬೆಳವಣಿಗೆ ಅಲ್ಲ. ಸುಳ್ಳು ವ್ಯಭಿಚಾರಕ್ಕೆ ಸಮ. ಸುಳ್ಳಿನಿಂದ ಮಾನಸಿಕ ವಂಚನೆಯಾಗಿ ಸಂಬಂಧಗಳಲ್ಲಿ ಒಡಕುಂಟಾಗುತ್ತಿವೆ. ಸತ್ಯದ ದಾರಿಯಲ್ಲಿಯೇ ನಡೆದರೆ ನೆಮ್ಮದಿಯ ಜೀವನ ಕಂಡುಕೊಳ್ಳಬಹುದು’ ಎಂದರು.

ಶಾಸಕಿ ನಯನಾ ಮೋಟಮ್ಮ ಮಾತನಾಡಿ, ಬಡವರು ಸಾಲ ಮಾಡಿ, ಅದನ್ನು ತೀರಿಸಲು ಜೀವನ ಪೂರ್ತಿ ಒದ್ದಾಡುವುದನ್ನು ತಪ್ಪಿಸುವ ಉದ್ದೇಶದಿಂದ 27 ವರ್ಷದಿಂದ ತನ್ನ ತಾಯಿ ಈ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದಾರೆ. ಇದರಲ್ಲಿ ರಾಜಕೀಯ ಉದ್ದೇಶವಿಲ್ಲ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಂಗ್ರೆಸ್‌ ನಾಯಕಿ ಮೋಟಮ್ಮ, ‘ಅಂಬೇಡ್ಕರ್ ಅವರು ಹಾಕಿಕೊಟ್ಟ ದಾರಿಯಲ್ಲೇ ಎಲ್ಲರೂ ನಡೆಯಬೇಕು. ದುಶ್ಚಟಕ್ಕೆ ಬಲಿಯಾಗದೆ ಉತ್ತಮ ಜೀವನ ನಡೆಸುವ ಮೂಲಕ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಉನ್ನತ ಹುದ್ದೆ ಅಲಂಕರಿಸುವಂತೆ ಮಾಡಬೇಕು’ ಎಂದು ನವ ದಂಪತಿಗೆ ಕಿವಿಮಾತು ಹೇಳಿ ಪ್ರತಿಜ್ಞಾವಿಧಿ ಬೋಧಿಸಿದರು.

ಸಾಮೂಹಿಕ ವಿವಾಹದಲ್ಲಿ 9 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟವು. ದಲಿತ ಪುರೋಹಿತ ಎಚ್.ಟಿ. ಸುಬ್ರಹ್ಮಣ್ಯ, ಕೆ.ಎಲ್. ಸಾಗರ್, ಕೋಮರಾಜ್ ಚಕ್ರಮಣಿ, ರಮೇಶ್ ದಾರಹಹಳ್ಳಿ, ತಿಮ್ಮಯ್ಯ ಹಾಲೂರು, ದೇವರಾಜ್ ಸಬ್ಲಿ ಕನ್ನಡ ಮಂತ್ರವನ್ನು ಪಠಿಸಿದರು. ಮದುವೆಯಲ್ಲಿ ಬಿಳಿಯಪ್ಪ ಹಾಗೂ ಜಯಶೀಲಾ ದಂಪತಿ ವಧು–ವರರ ಪರವಾಗಿ ಧಾರೆ ಎರೆಯುವ ಕಾರ್ಯ ನೆರವೇರಿಸಿದರು.

ಸುಗ್ಗಿ ಕುಣಿತ, ಕೋಲಾಟ, ಜಾನಪದ ನೃತ್ಯ, ಜಾನಪದ ಗೀತೆ, ಸೋಬಾನೆ ಹಾಡು, ಭತ್ತ ಕುಟ್ಟುವ ಹಾಡು, ನಟ್ಟಿ ಹಾಡು ಸೇರಿದಂತೆ ಇತರೇ ಜಾನಪದ ಸೊಗಡಿನ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.ಮಾಜಿ ಸಚಿವ ಬಿ.ಬಿ. ನಿಂಗಯ್ಯ, ಪ.ಪಂ. ಉಪಾಧ್ಯಕ್ಷ ರಮೇಶ್ ಹೊಸ್ಕೆರೆ, ಸದಸ್ಯ ಹಂಝಾ, ಬೆಂಗಳೂ ರಿನ ಡಾ. ಪಾರ್ವತಿ ಧನಂಜಯ್, ರೇಣುಕಾ, ಲಕ್ಷ್ಮಯ್ಯ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಎಚ್.ಜಿ. ಸುರೇಂದ್ರ, ಮುಖಂ ಡರಾದ ಬಿ.ಎಸ್. ಜಯರಾಂ, ಸುಬ್ರಾ ಯಗೌಡ, ಬಿ.ಎಂ. ಶಂಕರ್, ಶ್ರೀನಾಥ್, ವೆಂಕಟಮ್ಮ ಹಾಲಯ್ಯ ಇದ್ದರು.

Mass wedding of 9 couples in Mudigere

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

Related Articles

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...