Home namma chikmagalur chikamagalur ಮೂಡಿಗೆರೆಯಲ್ಲಿ ರೈತರ ಬೃಹತ್ ರೈತ ಸಮಾವೇಶ ಕಾರ್ಯಕ್ರಮ
chikamagalurHomeLatest Newsnamma chikmagalur

ಮೂಡಿಗೆರೆಯಲ್ಲಿ ರೈತರ ಬೃಹತ್ ರೈತ ಸಮಾವೇಶ ಕಾರ್ಯಕ್ರಮ

Share
Share

ಮೂಡಿಗೆರೆ: ರೈತರನ್ನು ವಿರೋಧ ಕಟ್ಟಿಕೊಂಡು, ರೈತ ವಿರೋಧ ಕಾನೂನು ತರುವ ಸರಕಾರಗಳು ಚರಿತ್ರೆಯಲ್ಲೇ ಉಳಿದಿಲ್ಲವೆಂದು ಹಿರಿಯ ವಕೀಲ ಎಂ.ಶಿವಪ್ರಸಾಧ್ ಹೇಳಿದರು.

ಅವರು ನಮ್ಮ ಭೂಮಿ ಮತ್ತು ಹಕ್ಕಿಗಾಗಿ ಶನಿವಾರ ಪಟ್ಟಣದ ರೈತ ಭವನದಲ್ಲಿ ಏರ್ಪಡಿಸಿದ್ದ ರೈತರ ಬೃಹತ್ ರೈತ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಂದಾಯ ಕಾರ್ಯದರ್ಶಿಗಳು ಅಕ್ರಮ ಸಕ್ರಮ ಸಮಿತಿಯಲ್ಲಿ ಮಂಜೂರಾದ ರೈತರ ಭೂಮಿಯ ಬಗ್ಗೆ ೩ ತಿಂಗಳಲ್ಲಿ ಸರಕಾರಕ್ಕೆ ವರದಿ ಸಲ್ಲಿಸಬೇಕೆಂದು ತನಿಖಾ ತಂಡವೊಂದನ್ನು ನೇಮಿಸಲಾಗಿತ್ತು.

ಅದರ ವರದಿಯನ್ನು ಜಿಲ್ಲಾಧಿಕಾರಿಗಳು ಸರಕಾರಕ್ಕೆ ಕಳಿಸಬೇಕಿತ್ತು. ನಂತರ ಆ ವರದಿ ಆಧಾರದ ಮೇರೆಗೆ ಸರಕಾರ ಮುಂದಿನ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಅಧಿಕಾರಿಗಳು ಏಕಾಏಕಿ ಅರ್ಜಿಗಳನ್ನೇ ವಜಾ ಮಾಡಿರುವುದು ತಪ್ಪು. ಇದರಿಂದ ಹೆಚ್ಚಾಗಿ ೧೦, ೧೫ ಗುಂಟೆ ಇರುವ ದಲಿತರ, ಅಲ್ಪಸಂಖ್ಯಾತರ, ಹಿಂದುಳಿತ ವರ್ಗದ ಸಣ್ಣ ರೈತರಿಗೆ ತೊಂದರೆಯಾಗಿದೆ. ಈ ಬಗ್ಗೆ ಸ್ಥಳೀಯ ಶಾಸಕರು ಮಧ್ಯ ಪ್ರವೇಶಿಸಿ, ರೈತರ ಸಮಸ್ಯೆ ಬಗೆಹರಿಸಿದ್ದರೆ ಕಾನೂನು ಸಮರ ಅಗತ್ಯವಿರಲಿಲ್ಲವೆಂದು ಹೇಳಿದರು.

ಹಿರಿಯ ವಕೀಲ ಎಚ್.ಎಂ.ಪ್ರಸಾಧ್ ಮಾತನಾಡಿ, ಅಕ್ರಮವನ್ನು ಸಕ್ರಮ ಮಾಡಿದ್ದು, ಸಕ್ರಮವನ್ನು ಅಕ್ರಮವೆಂದು ಹೇಳುತ್ತಿರುವುದು, ತನಿಖೆ ಮಾಡಿರುವುದು, ನಂತರ ಅರ್ಜಿ ವಜಾ ಮಾಡಿರುವುದು ಸರಕಾರದ ಅಧಿಕಾರಿಗಳೆ ಆದ ಮೇಲೆ ಇಲ್ಲಿ ರೈತರ ತಪ್ಪೇನಿದೆ?. ಅಧಿಕಾರಿಗಳು ಮಾಡಿರುವ ತಪ್ಪಿನಿಂದ ರೈತರು ಬೀದಿಗೆ ಬರುವ ಸ್ಥಿತಿಗೆ ತಂದಿದ್ದಾರೆ. ಸರಕಾರ ಮಾಡಿರುವ ತಪ್ಪನ್ನು ಈಗ ಸರಕಾರವೇ ಬಗೆಹರಿಸಬೇಕು. ಇದಕ್ಕಾಗಿ ನ್ಯಾಯಾಲಯದವರೆಗೆ ಬರುವ ಅವಶ್ಯಕತೆ ಇರಲಿಲ್ಲ ರೈತರಿಗೆ ತೊಂದರೆ ಕೊಡುವ ಜನಪ್ರತಿನಿಧಿಗಳು ಮತ್ತೆ ಜೀವನದಲ್ಲಿ ಜನಪ್ರತಿನಿಧಿಗಳಾಗಲು ಅವಕಾಶ ಕೊಡಬಾರದೆಂದು ಹೇಳಿದರು.

ಮಾಜಿ ಶಾಸಕ ವೈಎಸ್‌ವಿ ಧತ್ತ ಮಾತನಾಡಿ, ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದ್ದರಿಂದ ಸಾವಿರಾರು ರೈತರಿಗೆ ಪುನರ್‌ಜೀವನ ಸಿಕ್ಕಿದಂತಾಗಿದೆ. ಆದರೆ ಇದು ತಾತ್ಕಾಲಿಕ ಪರಿಹಾರವಷ್ಟೆ. ಶಾಶ್ವತ ಪರಿಹಾರಕ್ಕಾಗಿ ಸರಕಾರ ರೈತರ ನೆರವಿಗೆ ಬರಬೇಕಾಗಿದೆ. ಅದಕ್ಕಾಗಿ ಬಿ.ಎಲ್.ಶಂಕರ್ ಅವರು ನಮ್ಮ ಹಕ್ಕೊತ್ತಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಬೇಕು. ಜತೆಗೆ ರೈತರ ನಿಯೋಗ ಕರೆದೊಯ್ದು ರೈತರ ಸಮಸ್ಯೆ ಬಗೆಹರಿಸಬೇಕೆಂದು ಮನವಿ ಮಾಡಿದರು.

ಮಾಜಿ ಸಭಾಪತಿ ಬಿ.ಎಲ್.ಶಂಕರ್ ಮಾತನಾಡಿ, ಮಲೆನಾಡು ಭಾಗದ ರೈತರಿಗೆ ಹೋರಾಟದ ಮನಸ್ಥಿತಿ ಬಂದಿರುವುದು ಉತ್ತಮ ಬೆಳವಣಿಗೆ. ತಾನು ಸರಕಾರದ ಯಾವುದೇ ಹುದ್ದೆಯಲ್ಲಿಲ್ಲ, ಆದರೂ ತಾನು ಕೂಡ ಓರ್ವ ರೈತನಾಗಿದ್ದು, ರೈತರ ಹೋರಾಟಕ್ಕೆ ಬೆಂಬಲ ನೀಡುವುದು ತನ್ನ ಕರ್ತವ್ಯ. ತಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಈ ಬಗ್ಗೆ ಚರ್ಚಿಸಿ, ನಂತರ ನಿಯೋಗ ಕರೆದೊಯ್ದು ಸಮಸ್ಯೆ ಬಗೆಹರಿಸಲು ಶ್ರಮಿಸುತ್ತೇನೆಂದು ಹೇಳಿದರು.

ಕಾಂಗ್ರೆಸ್ ಮಖಂಡ ಎಚ್.ಎಚ್.ದೇವರಾಜ್ ಮಾತನಾಡಿ, ಕಾಡು ಪ್ರಾಣಿಗಳಿಂದ ಕಂಗೆಟ್ಟಿದ್ದ ರೈತರು, ಕೃಷಿ ಚಟುವಟಿಕೆ ನಡೆಸಲು ಹಿಂದೇಟು ಹಾಕುವ ಸ್ಥಿತಿ ನಿರ್ಮಾಣವಾಗಿದೆ. ಎಷ್ಟೋ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದರ ಜೊತೆಗೆ ಅಧಿಕಾರಿಗಳು ಮಾಡಿದ ತಪ್ಪಿನಿಂದ ರೈತರು ಭೂಮಿ ಕಳೆದುಕೊಂಡು, ಬದುಕು ಕಟ್ಟಿಕೊಳ್ಳಲು ಸಾಧ್ಯವಾಗದೇ ಆಂತಕದ ಸ್ಥಿತಿ ಉಂಟಾಗಿದೆ. ಇದನ್ನು ಶಾಸಕರ ಗಮನಕ್ಕೆ ತಂದರೆ ರೈತರು ಪಾಳೇಗಾರಿಕೆ ಮಾಡುತ್ತಿದ್ದಾರೆಂದು ಹೇಳಿರುವುದು ಸರಿಯಲ್ಲ. ಅಲ್ಲದೇ ತಿಂಗಳಿಗೊಮ್ಮೆ ಮೋಜು ಮಸ್ತಿ ಮಾಡೋಕೆ ಇಲ್ಲಿಗೆ ಬರುತ್ತಿರುವ ಕಂದಾಯ ಕಾರ್ಯದರ್ಶಿಗಳು ಇನ್ನು ಮುಂದೆ ಇಲ್ಲಿಗೆ ಬಾರದಂತೆ ಸರಕಾರಕ್ಕೆ ಎಚ್ಚರಿಸಬೇಕೆಂದು ಆಗ್ರಹಿಸಿದರು.

ಸಮಾವೇಶದಲ್ಲಿ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಯಿತು. ಬಳಿಕ ವೇದಿಕೆ ಮುಖಂಡರು ಬಿ.ಎಲ್.ಶಂಕರ್ ಅವರಿಗೆ ಮನವಿ ಸಲ್ಲಿಸಿದರು. ಸಮಾವೇಶಕ್ಕೆ ಬಂದಿದ್ದ ಸಾವಿರಾರು ರೈತರು ವಕಾಲತ್ತು ಅರ್ಜಿಯನ್ನು ಹಿರಿಯ ವಕೀಲರಾದ ಎಂ.ಶಿವಪ್ರಸಾಧ್, ಎಚ್.ಎಂ.ಪ್ರಸಾಧ್ ಅವರಿಗೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದಿಕೆ ಅಧ್ಯಕ್ಷ ಬಿ.ಕೆ.ಲಕ್ಷ್ಮಣ್‌ಕುಮಾರ್ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಸುರೇಂದ್ರ ಹ್ಯಾರಗುಡ್ಡೆ, ಉಪಾಧ್ಯಕ್ಷರಾದ ಗಬ್ಬಳ್ಳಿ ಚಂದ್ರೇಗೌಡ, ಬಂಕೇನಹಳ್ಳಿ ಸುರೇಶ್, ಕಾರ್ಯದರ್ಶಿಯಾದ ನವೀನ್ ಮರೆಬೈಲ್, ಎಂ.ಕೆ.ರವಿ ಮಗ್ಗಲಮಕ್ಕಿ, ಮಂಜಪ್ಪಯ್ಯ ಕಳಸ, ರಾಧಾ ಸುಂದ್ರೇಶ್, ಎಚ್.ಎಚ್.ದೇವರಾಜ್, ಬಿ.ಎಸ್.ಜಯರಾಂಗೌಡ, ಅಬ್ದುಲ್ ರೆಹಮಾನ್, ಅನಿಲ್ ಗುರುದೇವ್ ಮತ್ತಿತರರಿದ್ದರು.

Massive farmers’ conference program in Mudigere

 

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...