Home namma chikmagalur chikamagalur ಚಾರ್ಮಾಡಿ ಅರಣ್ಯದಲ್ಲಿ ಭಾರಿ ಬೆಂಕಿ
chikamagalurHomeLatest Newsnamma chikmagalur

ಚಾರ್ಮಾಡಿ ಅರಣ್ಯದಲ್ಲಿ ಭಾರಿ ಬೆಂಕಿ

Share
Share

ಕೊಟ್ಟಿಗೆಹಾರ: ದಕ್ಷಿಣ ಕನ್ನಡ-ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ.

ಮೂಡಿಗೆರೆ ಅರಣ್ಯ ವಲಯದೊಳಗೆ ಕಾಣಿಸಿಕೊಂಡಿರುವ ಬೆಂಕಿಯಿಂದ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸಂಪೂರ್ಣವಾಗಿ ಧಗಧಗಿಸಿ ಉರಿಯುತ್ತಿದೆ.

ಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ಕ್ಷಿಪ್ರವಾಗಿ ಹರಡುತ್ತಿದ್ದು, ಅರಣ್ಯ ಸಂಪತ್ತಿಗೆ ಗಂಭೀರ ಹಾನಿಯಾಗುವ ಆತಂಕ ವ್ಯಕ್ತವಾಗಿದೆ.

ಚಾರ್ಮಾಡಿ ಘಾಟಿಯ ರಸ್ತೆಯ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಸಂಚರಿಸುವ ವಾಹನ ಸವಾರರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು,

ಅರಣ್ಯ ಇಲಾಖೆ ಮುಂಜಾಗ್ರತ ಕ್ರಮವಾಗಿ ಬೆಂಕಿ ರೇಖೆ ಮಾಡದೆ ನಿರ್ಲಕ್ಷ ವಹಿಸಿದ್ದರಿಂದ ಈ ಅನಾಹುತಕ್ಕೆ ಕಾರಣವಾಗಿದೆ

ಮಾಹಿತಿ ಪಡೆದ ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಪರಿಸ್ಥಿತಿಯನ್ನು ನಿರಂತರವಾಗಿ ನಿಗಾ ವಹಿಸಲಾಗುತ್ತಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲು ತೀವ್ರ ಪ್ರಯತ್ನಗಳು ಮುಂದುವರಿದಿವೆ.

Massive fire breaks out in Charmadi forest

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...