Home namma chikmagalur ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ
namma chikmagalurchikamagalurHomeLatest News

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ

Share
Share

ಚಿಕ್ಕಮಗಳೂರು:  ಹಿಂದೂಗಳ ಶ್ರದ್ಧಾಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸಿ ಕ್ಷೇತ್ರದ ಪಾವಿತ್ರ್ಯಕ್ಕೆ ಕಳಂಕ ತರುವ ಷಡ್ಯಂತ್ರ ರೂಪಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಆ.೧೩ ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ನೆಡೆಸಲು ಬಿಜೆಪಿ ನಿರ್ಧರಿಸಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾ ಬಿಜೆಪಿ ವಕ್ತಾರ ಸಿ.ಹೆಚ್. ಲೋಕೇಶ್ ಅನಾಮದೇಯ ವ್ಯಕ್ತಿಯೊಬ್ಬ ಹತ್ತಾರು ಹೆಣಗಳನ್ನು ಹೂತಿರುವುದಾಗಿ ನೀಡಿದ ಹೇಳಿಕೆಯನ್ನೇ ಗಂಭಿರವಾಗಿ ಪರಿಗಣಿಸಿದ ರಾಜ್ಯಸರ್ಕಾರ ಆತನಿಗೆ ಭದ್ರತೆ ನೀಡಿ ಶವಗಳ ಪತ್ತೆಗೆ ಅಧಿಕಾರಿಗಳು ಮತ್ತು ಕಾರ್ಮಿಕರನ್ನು ಬಳಸಿ ಉತ್ಖನನ ನಡೆಸುವ ಮೂಲಕ ಕ್ಷೇತ್ರದ ಬಗ್ಗೆ ಹಿಂದೂ ಸಮಾಜದಲ್ಲಿ ಅನುಮಾನ ಮೂಡಿಸುವ ಕುತಂತ್ರ ನಡೆಯುತ್ತಿದೆ ಎಂದು ಆರೋಪಿಸಿದರು.

ಎಡಪಂಥೀಯರ ಒತ್ತಡಕ್ಕೆ ಮಣಿದು ಪ್ರಕರಣವನ್ನು ಎಸ್‌ಐಟಿ ಗೆ ನೀಡಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಹಿರಂಗಪಡಿಸಿದ್ದಾರೆ. ಸರ್ಕಾರ ಈಗಾಗಲೇ ಹಲವು ಹಿಂದು ವಿರೋಧಿ ನಿರ್ಧಾರಗಳನ್ನು ಕೈಗೊಂಡು ಧರ್ಮಸ್ಥಳದ ಪವಿತ್ರ ಕ್ಷೇತ್ರವನ್ನು ಅಪವಿತ್ರಗೊಳಿಸಲು ಮುಂದಾಗಿವೆ ಎಂದು ದೂರಿದರು.

ಶ್ರೀ ಕ್ಷೇತ್ರದ ಪಾವಿತ್ರ್ಯತೆಗೆ ಭಂಗ ತಂದು ವಾಮಮಾರ್ಗದ ಮೂಲಕ ಅಪನಂಬಿಕೆ ಮೂಡಿಸಿ ಕ್ಷೇತ್ರದ ಬಗ್ಗೆ ಶ್ರದ್ಧೆಯನ್ನು ಕುಗ್ಗಿಸಿ ಹಿಂದೂ ಸಮಾಜವನ್ನು ದುರ್ಬಲಗೊಳಿಸುವ ಮೂಲಕ ಒಗ್ಗಟ್ಟು ಮುರಿಯಲು ಸರ್ಕಾರವೇ ಮುಂದಾಗಿರುವುದು ವಿಪರ್ಯಾಸ ಎಂದರು.
ಸೌಜನ್ಯ ಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಈ ರೀತಿಯ ಕುತಂತ್ರಗಳನ್ನು ಸಮಾಜ ವಿರೋಧಿಗಳು ಹೆಣದ ಕಾರಣ ಆರಂಭದಲ್ಲಿ ಹಿಂದೂ ಸಮಾಜ ಮೌನವಾಗಿತ್ತು. ಸೌಜನ್ಯಳಿಗೆ ನ್ಯಾಯ ಸಿಗಬೇಕು ಎನ್ನುವ ಕಾರಣಕ್ಕೆ ದಿನಕಳೆದಂತೆ ಕುತಂತ್ರಿಗಳ ಗುರಿ ಶ್ರೀ ಕ್ಷೇತ್ರ ಎನ್ನುವುದು ಬಹಿರಂಗವಾಗಿದೆ ಎಂದರು.

ಹಿಂದೂ ಸಮಾಜ ಎಚ್ಚೆತ್ತುಕೊಂಡಿದ್ದು, ಷಡ್ಯಂತ್ರವನ್ನು ಮುಂದುವರೆಸಿದರೆ ತಕ್ಕ ಶಾಸ್ತಿ ಮಾಡಲಿದೆ ಎಂದು ಎಚ್ಚರಿಸಿದ ಅವರು, ಹಿಂದೂ ಸಮಾಜದ ಧಾರ್ಮಿಕ ಆಚರಣೆಗಳಿಗೆ ಧಕ್ಕೆ ತರುವವರ ವಿರುದ್ಧ ಬಿಜೆಪಿ ತಕ್ಕ ಉತ್ತರ ನೀಡಲಿದೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಕ್ತಾರರಾದ ಸೋಮಶೇಖರ್ ಬಿ.ಜೆ, ಹೆಚ್.ಎಸ್. ಪುಟ್ಟಸ್ವಾಮಿ, ರಾಜ್ಯ ಓಬಿಸಿ ಮೋರ್ಚಾ ಕಾರ್ಯದರ್ಶಿ ಡಿ. ರಾಜಪ್ಪ, ಮಾಧ್ಯಮ ಪ್ರಮುಖ್ ದಿನೇಶ್ ಕೋಟೆ, ಸುರೇಶ್ ಉಪಸ್ಥಿತರಿದ್ದರು.

Massive protest in the city condemning misinformation about Dharmasthala

Share

Leave a comment

Leave a Reply

Your email address will not be published. Required fields are marked *

Don't Miss

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ಆದರೆ, ನಮ್ಮ ರಾಜ್ಯ ಸರ್ಕಾರ ಈಗಾಗಲೇ ತನ್ನ ಪಾಲಿನ ೧೨,೦೦೦...

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಜೆಪಿ ರಾಜಕೀಯ

ಕಡೂರು: ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರಾಮಲಿಂಗಾರೆಡ್ಡಿ ಅವರು ರಾಜಕೀಯ ವಲಯದ ಪ್ರಮುಖ ವಿದ್ಯಮಾನಗಳು, ರಾಜ್ಯದ ಜಲವಿವಾದ ಹಾಗೂ ಸಚಿವ ಸಂಪುಟ ವಿಸ್ತರಣೆಯ ಕುರಿತಾಗಿ ಮಾಧ್ಯಮಗಳ ಎದುರು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ....

Related Articles

ವಾಹನ ಡಿಕ್ಕಿಗೆ ಬೈಕ್ ಸವಾರ ಸಾವು

ಬೀರೂರು: ಕಡೂರು ತಾಲ್ಲೂಕಿನ ಹೇಮಗಿರಿ ಗೇಟ್ ಬಳಿಯ ಜಮೀನಿನಲ್ಲಿ ಕೆಲಸ ಮುಗಿಸಿ, ಅಜ್ಜಂಪುರ ಕಡೆಗೆ ಬೀರೂರು...

ಕಾಫಿ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಮನವಿ

ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ...

ದನ ಅಕ್ರಮ ಸಾಗಾಟ: ಪ್ರಕರಣ ದಾಖಲು

ಅಲ್ಲೂರು: ಇಲ್ಲಿಗೆ ಸಮೀಪದ ಹಾಂದಿಯ ಅಂಬೇಡ್ಕರ್ ವೃತ್ತದ ಬಳಿಯ ರಜಾ ಕ್ಯಾಂಟೀನ್ ಎದುರು 5 ವರ್ಷ...

ಅಕ್ರಮ ನುಸುಳುಕೋರರ ಮತಪಟ್ಟಿಗೆ ದಾಖಲಿಸದಂತೆ ಕ್ರಮವಹಿಸಿ

ಚಿಕ್ಕಮಗಳೂರು: ಎಸ್‌ಐಆರ್ ಸಂಬಂಧ ಬಿಎಲ್‌ಒ೨ಗಳು ಪಕ್ಷದ ಮತದಾರರನ್ನು ಪಟ್ಟಿ ಯಿಂದ ಕೈಜಾರದಂತೆ ಗಮನಹರಿಸುವ ಜೊತೆಗೆ ಅಕ್ರಮ...