ಚಿಕ್ಕಮಗಳೂರು: ಹಜ್ ಯಾತ್ರಿಕರ ವಿಮಾನಗಳ ಸಂಚಾರ ವಿಳಂಬದಿಂದ ಉಂಟಾಗಿರುವ ಸಮಸ್ಯೆ ಪರಿಹಾರಕ್ಕೆ ಹಜ್ ಸಮಿತಿ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಯು.ಟಿ. ಖಾದರ್ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಲಾಯಿತು.
ಹಜ್ ಯಾತ್ರಿಕರನ್ನು ಕರೆದೊಯ್ಯಲು ನಿಗದಿಪಡಿಸಿದ್ದ ವಿಮಾನಗಳ ಪ್ರಯಾಣ ಮುಂದೂಡಿಕೆಯಾಗಿರುವುದರಿಂದ ಯಾತ್ರಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವಿಶೇಷವಾಗಿ ದೆಹಲಿಯಲ್ಲಿ ತಂಗುವ ವ್ಯವಸ್ಥೆ, ಊಟ ಸೇರಿದಂತೆ ಮೂಲಭೂತ ಸೌಕರ್ಯಗಳ ಸಮಸ್ಯೆ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಹಜ್ ಸಮಿತಿಯ ಅಧ್ಯಕ್ಷರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ದೆಹಲಿಗೆ ತೆರಳಿ ಅಲ್ಲಿನ ಸ್ಥಳೀಯ ಸಂಘ-ಸಂಸ್ಥೆಗಳೊಂದಿಗೆ ಚರ್ಚಿಸಿ ಯಾತ್ರಿಕರಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಿದ್ದಾರೆ. ಯಾತ್ರಿಕರ ನೆರವಿಗಾಗಿ ಸಹಾಯವಾಣಿ ಸಂಖ್ಯೆಗಳನ್ನೂ ಬಿಡುಗಡೆ ಮಾಡಲಾಗಿದೆ.
ವಿಮಾನಯಾನ ಸಂಸ್ಥೆಗಳು ಮೊದಲು ಪ್ರಯಾಣದ ಟಿಕೆಟ್‌ಗಳನ್ನು ಕಾಯ್ದಿರಿಸಿ, ನಂತರ ನಿಗದಿತ ದಿನದ ವಿಮಾನ ಸಂಚಾರವನ್ನು ಮುಂದೂಡುತ್ತಿರುವುದು ಸಮಸ್ಯೆಗೆ ಕಾರಣವಾಗಿದೆ. ಇಂಡಿಗೋ, ಆಕಾಶ ಏರ್ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಯಾನ ಸಂಸ್ಥೆಗಳಿಂದ ಈ ಸಮಸ್ಯೆ ಉಂಟಾಗಿದೆ ಎಂದು ಆರೋಪಿಸಲಾಗಿದೆ. ವಿಮಾನ ಸಂಚಾರವನ್ನು ಆರಂಭಿಸುವ ಕುರಿತು ಒಂದೊಂದು ದಿನಾಂಕವನ್ನು ನೀಡಲಾಗುತ್ತಿದ್ದು, ಇದರಿಂದ ಯಾತ್ರಿಕರು ಅನಿಶ್ಚಿತತೆಯಲ್ಲಿ ದಿನ ಕಳೆಯುವಂತಾಗಿದೆ.
ಈ ಕುರಿತು ಮುಖ್ಯಮಂತ್ರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ, ನಿರೀಕ್ಷಿತ ಪ್ರತಿಕ್ರಿಯೆ ದೊರೆತಿಲ್ಲ ಎಂದು ತಿಳಿಸಲಾಯಿತು. ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಸಮಸ್ಯೆ ಪರಿಹಾರವಾಗದಿದ್ದರೆ ಹಜ್ ಸಮಿತಿ ವತಿಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಚಿಂತನೆ ಇದೆ. ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆದೊಯ್ದು ಮರಳಿ ಕರೆತರುವ ಜವಾಬ್ದಾರಿಯನ್ನು ಹೊಂದಿದ್ದು, ವಿಳಂಬದಿಂದ ಉಂಟಾಗಿರುವ ನಷ್ಟಕ್ಕೆ ಪರಿಹಾರ ನೀಡಬೇಕು ಎಂಬ ಬೇಡಿಕೆಯನ್ನೂ ಮುಂದಿಡಲಾಗುವುದು ಎಂದು ತಿಳಿಸಲಾಯಿತು.
ಹಜ್ ಯಾತ್ರಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಹಜ್ ಭವನದಿಂದಲೇ ಪ್ರತಿ ತಿಂಗಳು ಉಮ್ರಾ ಯಾತ್ರೆಗೆ ಎರಡು ತಂಡಗಳನ್ನು ಕಳುಹಿಸುವ ವ್ಯವಸ್ಥೆ ರೂಪಿಸುವ ಚಿಂತನೆ ಇದೆ. ಯಾವುದೇ ಲಾಭ-ನಷ್ಟದ ಉದ್ದೇಶವಿಲ್ಲದೆ, ಸಾಧ್ಯವಾದಷ್ಟು ಕಡಿಮೆ ವೆಚ್ಚದಲ್ಲಿ ಯಾತ್ರಿಕರಿಗೆ ಸೇವೆ ಒದಗಿಸುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಲಾಯಿತು.
ಹಜ್ ಯಾತ್ರಿಕರ ಸಹಾಯವಾಣಿ ಸಂಖ್ಯೆಗಳು: ೯೪೮೩೫೦೩೧೩೨, ೭೮೯೯೭೦೭೭೭೫
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಟಿ.ಡಿ. ರಾಜೇಗೌಡ, ನಯನಾಮೋಟಮ್ಮ, ವಿಧಾನ ಪರಿಷತ್ ಸದಸ್ಯರಾದ ಗಾಯತ್ರಿ ಶಾಂತೇಗೌಡ, ಕರ್ನಾಟಕ ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇಶ್ ಹಾಗೂ ಭದ್ರಾ ಕಾಡಾ ಅಧ್ಯಕ್ಷ ಅಂಶುಮಂತ್ ಉಪಸ್ಥಿತರಿದ್ದರು.
Measures to resolve the issue of flight delays for Hajj pilgrims
Leave a comment