Home namma chikmagalur chikamagalur ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ
chikamagalurCrime NewsHomeLatest Newsnamma chikmagalur

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

Share
Share

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ ಪ್ರಮುಖ ರಸ್ತೆಯಲ್ಲಿರುವ ‘ಭಗವಾನ್ ಮೆಡಿಕಲ್’ ಅಂಗಡಿಯ ಬೀಗ ಒಡೆದು ಒಳನುಗ್ಗಿದ ಕಳ್ಳರು, ಕ್ಯಾಶ್ ಟೇಬಲ್‌ನಲ್ಲಿದ್ದ ಬರೋಬ್ಬರಿ ₹2.66 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ.

ಕಳ್ಳರು ಅಂಗಡಿಯ ಬೀಗ ಮುರಿದು ಒಳನುಗ್ಗಲು ಸಂಚು ರೂಪಿಸುತ್ತಿದ್ದ ಹಾಗೂ ಬಳಿಕ ಕಳ್ಳತನ ಎಸಗಿದ ದೃಶ್ಯಗಳು ಅಂಗಡಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ದೃಶ್ಯಾವಳಿಗಳ ಆಧಾರದ ಮೇಲೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿ, ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿದ್ದಾರೆ. ಖದೀಮರ ಚಲನವಲನಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ ಪೊಲೀಸರು, ಸಿಸಿಟಿವಿ ಫೂಟೇಜ್ ಆಧರಿಸಿ ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.

ಪಟ್ಟಣದ ಪ್ರಮುಖ ರಸ್ತೆಯಲ್ಲೇ ಈ ಕಳ್ಳತನ ನಡೆದಿರುವುದು ಸ್ಥಳೀಯ ವ್ಯಾಪಾರಿಗಳ ಆತಂಕವನ್ನು ಮತ್ತಷ್ಟು ಹೆಚ್ಚಿಸಿದ್ದು, ರಾತ್ರಿ ವೇಳೆ ಪೊಲೀಸ್ ಗಸ್ತು ಬಲಪಡಿಸುವಂತೆ ವ್ಯಾಪಾರಿಗಳು ಆಗ್ರಹಿಸಿದ್ದಾರೆ. ಪ್ರಕರಣ ಸಂಬಂಧ ಶೃಂಗೇರಿ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

Medical shop robbed: Rs 2.66 lakh cash flees

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...