Home namma chikmagalur chikamagalur ಕೊಪ್ಪ ತಾಲ್ಲೂಕಿನಲ್ಲಿ ಕಾಡುಕೋಣಗಳ ಉಪಟಳ
chikamagalurHomeLatest Newsnamma chikmagalur

ಕೊಪ್ಪ ತಾಲ್ಲೂಕಿನಲ್ಲಿ ಕಾಡುಕೋಣಗಳ ಉಪಟಳ

Share
Share

ಕೊಪ್ಪ: ಕಾಡುಕೋಣಗಳ ಉಪಟಳ ದಿನೇ ದಿನೇ ಮಿತಿ ಮೀರುತ್ತಿದ್ದು, ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಲಸೆ ಕಾರ್ಮಿಕರ ಮೇಲೆ ಏಕಾಏಕಿ ಕಾಡುಕೋಣ ದಾಳಿಗೆ ಯತ್ನಿಸಿದ ಆತಂಕಕಾರಿ ಘಟನೆ ಕೊಪ್ಪ ಅರಣ್ಯ ವಲಯ ವ್ಯಾಪ್ತಿಯ ಹೆಗ್ಗಾರುಕುಡಿಗೆ ಸಮೀಪದ ನಡೆದಿದೆ.

ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಇಬ್ಬರು ವಲಸೆ ಕಾರ್ಮಿಕರನ್ನು ಕಂಡೊಡನೆ ಕಾಡುಕೋಣ ಹಿಂಡು ಆಕ್ರಮಣಕಾರಿಯಾಗಿ ಓಡಿಸಿಕೊಂಡು ಬಂದಿದೆ. ಪ್ರಾಣಾಪಾಯದ ಸುಳಿವು ಅರಿತ ಕಾರ್ಮಿಕರು ಕ್ಷಣಾರ್ಧದಲ್ಲಿ ಪಕ್ಕದಲ್ಲೇ ಇದ್ದ ಮರವನ್ನು ಏರಿ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ.

ಕಾರ್ಮಿಕರು ಮರ ಏರುತ್ತಿದ್ದಂತೆ ತೀವು ಆಕ್ರೋಶಗೊಂಡ ಕಾಡುಕೋಣವೊಂದು ಮಣ್ಣಿನ ಗುಡ್ಡೆಗೆ ಗುದ್ದಿ ತನ್ನ ಆರ್ಭಟ ತೋರಿದೆ. ಮರವೇರಿದರೂ ಕಾರ್ಮಿಕರ ಬೆನ್ನು ಬಿಡದ ಕಾಡುಕೋಣಗಳ ಹಿಂಡು, ಮರದ ಬುಡದಲ್ಲೇ ಸಾಕಷ್ಟು ಹೊತ್ತು ಬೀಡು ಬಿಟ್ಟಿದ್ದವು. ಈ ವೇಳೆ ಮರದ ಮೇಲಿಂದಲೇ ಜೀವಭಯದಲ್ಲಿ ನಡುಗುತ್ತಾ ಕಾರ್ಮಿಕನೊಬ್ಬ ಕಾಡುಕೋಣಗಳ ಆರ್ಭಟವನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕೊಪ್ಪ ತಾಲೂಕಿನಲ್ಲಿ ಕಾಡುಕೋಣಗಳ ಹಾವಳಿ ವಿಪರೀತವಾಗಿ ಹೆಚ್ಚಾಗಿದ್ದು, ಎಸ್ಟೇಟ್ ಕಾರ್ಮಿಕರು ಹಾಗೂ ಸ್ಥಳೀಯರು ಪ್ರತಿದಿನ ಆತಂಕದಲ್ಲಿಯೇ ಜೀವ ಕೈಯಲ್ಲಿ ಹಿಡಿದುಕೊಂಡೇ ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

Menace of wild bison in Koppa taluk

Share

Leave a comment

Leave a Reply

Your email address will not be published. Required fields are marked *

Don't Miss

ಬೈಕ್‌ನಿಂದ ಬಿದ್ದು ಗಾಯವಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಚಿಕ್ಕಮಗಳೂರು: ರಸ್ತೆಗೆ ಏಕಾಏಕಿ ಹಸು ಅಡ್ಡ ಬಂದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಸೋಮಪ್ಪ (೫೮) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ತರೀಕೆರೆ ತಾಲ್ಲೂಕಿನ ಕುಂಟಿನಮಡು ಗ್ರಾಮದ ಬಳಿ...

ಕಂಪೌಂಡ್ ಸ್ಲ್ಯಾಬ್‌ಗಳ ವಾಹನ ಪಲ್ಟಿ: ಕಾರ್ಮಿಕ ಸಾವು

ಚಿಕ್ಕಮಗಳೂರು: ಸಿಮೆಂಟ್ ಬೆಂಚ್ ಹಾಗೂ ಕಂಪೌಂಡ್ ಸ್ಲ್ಯಾಬ್‌ಗಳನ್ನು ಸಾಗಿಸುತ್ತಿದ್ದ ಮಹೇಂದ್ರ ಜಿತೋ ವಾಹನದ ಹಿಂಬದಿಯ ಟೈರ್ ಸ್ಫೋಟಗೊಂಡು ಸಂಭವಿಸಿದ ಅಪಘಾತದಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಬೀರೂರು ಸಮೀಪದ ಚಟ್ನಹಳ್ಳಿ...

Related Articles

ಕೆಂಪುಬಸ್ ಬಲೂ ಗ್ಯಾರಂಟಿ ಡೇಂಜರ್ ? ಡೇಂಜರ್ ? ಕೆಟ್ಟು ನಿಲ್ಲುವ ಬಸ್ಸುಗಳು

ಚಿಕ್ಕಮಗಳೂರು:  ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಬಲೂ ಡೇಂಜರ್ ಯಾವಾಗ ಎಲ್ಲಿ ಕೆಟ್ಟು ನಿಲ್ಲುತ್ತವೆ ಎಂದು ಪ್ರಯಾಣಿಕರು...

ದೀಪಾವಳಿಗೆ ಕಾಡುಪ್ರಾಣಿಗಳ ಬೇಟೆ: ಓರ್ವನ ಬಂಧನ; ಮೂವರು ಪರಾರಿ

ಮೂಡಿಗೆರೆ: ದೀಪಾವಳಿ ಹಬ್ಬದ ಸಂಭ್ರಮಕ್ಕಾಗಿ ಅಕ್ರಮವಾಗಿ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾಂಸ ಹಂಚಿಕೆ ಮಾಡುತ್ತಿದ್ದ ತಂಡವೊಂದರ ವಿರುದ್ಧ...

ಇಂದು ನವೀಕರಣಗೊಂಡ ರೈಲು ನಿಲ್ದಾಣದ ಲೋಕಾರ್ಪಣೆ

ಚಿಕ್ಕಮಗಳೂರು: ರೈಲು ನಿಲ್ದಾಣದ ನವೀಕರಣ ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ...

ಕಾವಲುಗಾರ ಕೊಲೆ ಮಾಡಿದ್ದ ಆರೋಪಿ ಬಂಧನ

ಕಡೂರು: ತೋಟದ ಮನೆಯೊಂದರಲ್ಲಿ ಕಾವಲುಗಾರನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಯನ್ನು ಕಡೂರು ಠಾಣೆ ಪೊಲೀಸರು...