Home namma chikmagalur chikamagalur ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
chikamagalurHomeLatest Newsnamma chikmagalur

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Share
Share

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಸಮಾಜದ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ ಅಕ್ಟೋಬರ್ 7ರಂದು ಪ್ರತಿಭಾ ಪುರಸ್ಕಾರ ಹಾಗೂ ಸಾಧಕರ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ. ಲೋಕೇಶ್ ತಿಳಿಸಿದ್ದಾರೆ.

ಗುರುವಾರ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರಿನ ಶ್ರೀ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 10:30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಪರಮಪೂಜ್ಯ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರ ಸೋಮೇಶ್ವರ ಶಿವಾಚಾರ್ಯ ಸಾನ್ನಿಧ್ಯದಲ್ಲಿ ಸಮಾರಂಭ ಜರುಗಲಿದೆ ಎಂದರು.

ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್. ಸಚ್ಚಿದಾನಂದ ಮೂರ್ತಿ, ರಾಷ್ಟ್ರೀಯ ಪದಾಧಿಕಾರಿ ಗಣೇಶ್ ಶಾಮನೂರು, ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಕಾಶಪ್ಪನವರ, ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ, ಮಹಿಳಾ ಘಟಕದ ಅಧ್ಯಕ್ಷೆ ಮುಕ್ತಾಂಬ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷ ವೆಂಕಟರೆಡ್ಡಿ, ರಾಜ್ಯ ಯುವ ಘಟಕದ ಅಧ್ಯಕ್ಷ ಮನೋಹರ ಅಂಬಿಗೇರೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಚಿಕ್ಕಮಗಳೂರು ತಾಲೂಕಿನ ಶಾಸಕರು, ಜಿಲ್ಲೆಯ ಮಾಜಿ ಶಾಸಕರು ಹಾಗೂ ಸಮಾಜದ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದೇ ಸಂದರ್ಭದಲ್ಲಿ ಸಮಾಜದಲ್ಲಿ ಕೃಷಿ, ಕ್ರೀಡೆ, ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿರುವ ಸಾಧಕರನ್ನು ಸನ್ಮಾನಿಸಲಾಗುವುದು. ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ವಿದ್ಯಾರ್ಥಿಗಳಿಗೆ ವಿಶೇಷ ಸೂಚನೆ: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ–ವಿದ್ಯಾರ್ಥಿನಿಯರು ಪ್ರತಿಭಾ ಪುರಸ್ಕಾರಕ್ಕೆ ಅರ್ಹರಾಗಿದ್ದು, ತಮ್ಮ ಬ್ಯಾಂಕ್ ಖಾತೆ ಸಂಖ್ಯೆ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ತರಬೇಕು. ಪುರಸ್ಕಾರದ ಮೊತ್ತವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದರಿಂದ ಈ ದಾಖಲೆಗಳನ್ನು ಒದಗಿಸುವುದು ಅಗತ್ಯವಾಗಿದೆ. ಅರ್ಹ ವಿದ್ಯಾರ್ಥಿಗಳು ನಿಗದಿತ ಸಮಯದೊಳಗೆ ನೋಂದಣಿ ಮಾಡಿಕೊಳ್ಳಬೇಕು ಎಂದು ಎಚ್.ಎಂ. ಲೋಕೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸೋಮಶೇಖರ್, ಈಶ್ವರಪ್ಪ, ನಿಶಾಂತ್ ಹಾಗೂ ಪ್ರಕಾಶ್ ಉಪಸ್ಥಿತರಿದ್ದರು.

Merit awards for students who secured over 90% marks.

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಚಿನ್ನದ ಸರ ಕನ್ನತನ

ಚಿಕ್ಕಮಗಳೂರು: ಸಂಭ್ರಮದಿಂದ ಬಂಧುಗಳ ಮದುವೆ ಮುಗಿಸಿಕೊಂಡು ನೆಮ್ಮದಿಯಾಗಿ ಮನೆ ಕಡೆ ಹೆಜ್ಜೆ ಹಾಕುತ್ತಿದ್ದ ಮಹಿಳೆಯೊಬ್ಬರಿಗೆ ಮಾರ್ಗಮಧ್ಯದಲ್ಲೇ...