ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ.
ಸಚಿವರು ಅಮೃತ ಮಹಲ್ ತಳಿ ಸಂವರ್ಧನ ಕೇಂದ್ರಕ್ಕೆ ಭೇಟಿ ನೀಡಲು ತೆರಳುತ್ತಿದ್ದಾಗ, ಅವರ ಕಾರಿನ ಮುಂಭಾಗದಲ್ಲಿ ಚಲಿಸುತ್ತಿದ್ದ ಪೊಲೀಸ್ ಜೀಪಿನ ಚಾಲಕ ತಿರುವಿನಲ್ಲಿ ಏಕಾಏಕಿ ದಿಢೀರ್ ಬ್ರೇಕ್ ಹಾಕಿದ್ದಾನೆ. ಈ ವೇಳೆ ವಾಹನವು ಚಾಲಕನ ನಿಯಂತ್ರಣಕ್ಕೆ ಸಿಗದೇ ನೇರವಾಗಿ ಅಮೃತ ಮಹಲ್ ಸಂವರ್ಧನ ಕೇಂದ್ರದ ಮುಖ್ಯ ದ್ವಾರಕ್ಕೆ (ಗೇಟ್‌ಗೆ) ಭೀಕರವಾಗಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಪೊಲೀಸ್ ಜೀಪಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಆದರೆ, ವಾಹನದಲ್ಲಿದ್ದ ಪೊಲೀಸರು ಹಾಗೂ ಸಿಬ್ಬಂದಿಗೆ ಯಾವುದೇ ರೀತಿಯ ಗಂಭೀರ ಗಾಯಗಳಾಗದೇ ಅಪಾಯದಿಂದ ಪಾರಾಗಿದ್ದು, ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.
Minister K.J. George convoy accident
Leave a comment