Home namma chikmagalur chikamagalur ಅಪ್ರಾಪ್ತೆ ಅತ್ಯಾಚಾರ ಆರೋಪಿಗೆ 20ವರ್ಷ ಜೈಲು ಶಿಕ್ಷೆ
chikamagalurCrime NewsHomeLatest Newsnamma chikmagalur

ಅಪ್ರಾಪ್ತೆ ಅತ್ಯಾಚಾರ ಆರೋಪಿಗೆ 20ವರ್ಷ ಜೈಲು ಶಿಕ್ಷೆ

Share
Share

ಚಿಕ್ಕಮಗಳೂರು:  ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಚಿಕ್ಕಮಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್ ಟಿಎಸ್ ಸಿ ಪೋಕ್ಸೋ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಕುಪ್ಪ ತಾಲೂಕು ಹೆಗ್ಗಾರು ಗ್ರಾಮದ ಕಾರೆಮನೆಯ ಕೆ.ಎಸ್.ಸಂತೋಷ್ ಶಿಕ್ಷೆಗೆ ಗುರಿಯಾದ ಆರೋಪಿ. ಈತ ಸಂಬಂಧಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಹಲವು ಬಾರಿ ಅತ್ಯಾಚಾರ ನಡೆಸಿದ. ಗಾಗಿ ಅಪ್ಪ್ಯಾಪ್ತ ಬಾಲಕಿ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಳು.

ಈ ಬಗ್ಗೆ ಅಪ್ತಾಪ್ತೆಯ ತಾಯಿ ಸಂತೋಷ್ ವಿರುದ್ಧ ಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಕೊಪ್ಪ ಪೊಲೀಸ್ ವೃತ್ತ ನಿರೀಕ್ಷಕ ಮಂಜು ಅವರು ಆರೋಪಿಯ ವಿರುದ್ಧ ಸಾಕ್ಷ ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ರಾಘವೇಂದ್ರ ಗುರುಪ್ರಸಾದ್ ಕುಲಕರಣಿ ಅವರು ಸಂತೋಷ್ ಮೇದಿನಿ ಆರೋಪ ಸಾಬೀತಾಗಿದ್ದರಿಂದ ಆತನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 25 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ನೊಂದ ಬಾಲಕಿಗೆ ಕರ್ನಾಟಕ ರಾಜ್ಯದ ಸಂತ್ರಸ್ತರ ಪರಿಹಾರ ನಿಧಿಯಿಂದ ನಾಲ್ಕು ಲಕ್ಷ ರೂ. ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ಬಿ‌.ಭರತ್ ಕುಮಾರ್ ವಾದ ಮಂಡಿಸಿದ್ದರು.

Minor rape accused sentenced to 20 years in prison

Share

Leave a comment

Leave a Reply

Your email address will not be published. Required fields are marked *

Don't Miss

ಅನಧಿಕೃತ ಜೀಪ್‌ಗಳ ಹಾವಳಿ ತಪ್ಪಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ಚಿಕ್ಕಮಗಳೂರು:  ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನಧಿಕೃತ ಮತ್ತು ಅಕ್ರಮ ಜೀಪ್ ಗಳ ಹಾವಳಿ ತಡೆಗಟ್ಟಿ ಪ್ರವಾಸಿಗರ ಸುರಕ್ಷತೆ ಕಾಪಾಡಬೇಕು ಎಂದು ಆಗ್ರಹಿಸಿ ಜಿಲ್ಲೆಯ ಸ್ಥಳೀಯ ನಾಗರೀ ಕರು ಸೋಮವಾರ ಅಪರ ಜಿಲ್ಲಾಧಿಕಾರಿ...

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮಾಫಿಯಾ ದಂದೆಗಳು ?

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಅಗ್ರಸ್ಥಾನವಿದೆ.ನಿಜವಾದ ಪ್ರವಾಸಿಗರು ಜಿಲ್ಲೆಯ ಪ್ರಕೃತಿ ಸೌಂದರ್ಯದ ಜೊತೆಗೆ ಧಾರ್ಮಿಕ ಸ್ಥಳಗಳು, ಝರಿಗಳ ಜೊತೆಗೆ ಬೋರ್ಗರಿಯುವ ನದಿಗಳು, ಉಪ ನದಿಗಳು,ಅರಣ್ಯದ ಜೊತೆಗೆ ಕಾಡು ಪ್ರಾಣಿಗಳು...

Related Articles

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ...

ಅಂಚೆ ನಾಗಭೂಷಣ್ ಗೆ’ಪತ್ರಿಕಾ ರತ್ನ’ ಪ್ರಶಸ್ತಿ ಪ್ರಧಾನ

ತರೀಕೆರೆ : ಪಟ್ಟಣದ ಹಿರಿಯ ಪತ್ರಕರ್ತರು, ಜಿಲ್ಲಾ ಕನ್ನಡ ವಾರಪತ್ರಿಕೆ ಅಂಚೆವಾರ್ತೆ ಸಂಪಾದಕರು ಆದ ಅಂಚೆ...

ಇಂದು ಆರ್‌ಟಿಒ ರಾಕೇಶ್ ಕುಮಾರ್ ವಿರುದ್ಧ ವಿಚಾರಣೆ

ಚಿಕ್ಕಮಗಳೂರು: ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಭ್ರಷ್ಟಾಚಾರ ಹಾಗೂ ಹಣಕಾಸು ಅಕ್ರಮಗಳ ಆರೋಪ ಕೇಳಿಬಂದಿರುವ ಬೆನ್ನಲ್ಲೇ...

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು...