Home namma chikmagalur chikamagalur ನಾಪತ್ತೆಯಾಗಿದ್ದ ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಗೂ ಪತ್ತೆ
chikamagalurHomeLatest Newsnamma chikmagalur

ನಾಪತ್ತೆಯಾಗಿದ್ದ ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಗೂ ಪತ್ತೆ

Share
Share

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಕೆಳಗೂರು ಕಾಫಿ ಎಸ್ಟೇಟ್‌ನಲ್ಲಿ ನಾಪತ್ತೆಯಾಗಿದ್ದ ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಗೂ ಪತ್ತೆಯಾಗಿದೆ. ಇಡೀ ರಾತ್ರಿ ಸುರಿಯುವ ಮಳೆಯ ನಡುವೆ, ದಟ್ಟವಾದ ಕಾಫಿ ತೋಟದ ಹಳ್ಳವೊಂದರಲ್ಲಿ ಹಸಿವು ಮತ್ತು ಚಳಿಯಿಂದ ನಡುಗುತ್ತಿದ್ದ ಮಗುವನ್ನು ಪೊಲೀಸರು ಹಾಗೂ ಸ್ಥಳೀಯರು ಹರಸಾಹಸ ಪಟ್ಟು ರಕ್ಷಿಸಿದ್ದಾರೆ.

ಘಟನೆಯ ಹಿನ್ನೆಲೆ:

ಮಧ್ಯಪ್ರದೇಶ ಮೂಲದ ಗೋನು ಮತ್ತು ಸೋನು ದಂಪತಿ ಕಳೆದೊಂದು ವಾರದ ಹಿಂದಷ್ಟೇ ಕೆಲಸ ಅರಸಿ ಕೆಳಗೂರು ಎಸ್ಟೇಟ್‌ಗೆ ಬಂದಿದ್ದರು. ಕೂಲಿ ಕೆಲಸಕ್ಕೆ ಹೋಗುವಾಗ ತಮ್ಮ ಐವರು ಮಕ್ಕಳನ್ನು ನೋಡಿಕೊಳ್ಳಲು ಓರ್ವ ಮಹಿಳೆಯನ್ನು ನೇಮಿಸಿದ್ದರು. ಆದರೆ, ಶುಕ್ರವಾರ ಮಧ್ಯಾಹ್ನ ಮಗು ಅಳುತ್ತಿದೆ ಎಂಬ ಕಾರಣಕ್ಕೆ ಆ ಮಹಿಳೆ, ೮ ವರ್ಷದ ಬಾಲಕಿಯ ಜೊತೆ ಮಗುವನ್ನು ಎಸ್ಟೇಟ್ ಬಳಿ ಕಳುಹಿಸಿದ್ದರು. ಕಾಫಿ ತೋಟದ ನಡುವೆ ಅಡ್ಡಾಡಿ ಸುಸ್ತಾಗಿದ್ದ ಮಕ್ಕಳು ಮಧ್ಯಾಹ್ನ ಊಟ ಮಾಡಿ ಅಲ್ಲೇ ಮಲಗಿದ್ದಾರೆ. ಈ ವೇಳೆ ೮ ವರ್ಷದ ಬಾಲಕಿ, ಒಂದೂವರೆ ವರ್ಷದ ಶಿವಂ ಎಂಬ ಮಗುವನ್ನು ರಸ್ತೆಯಲ್ಲೇ ಬಿಟ್ಟು ಮನೆಗೆ ಮರಳಿದ್ದಾಳೆ.

೧೨ ಗಂಟೆಗಳ ಕಾಲ ನಡೆದ ಹುಡುಕಾಟ:

ಸಂಜೆ ಪೋಷಕರು ಕೆಲಸ ಮುಗಿಸಿ ಮನೆಗೆ ಬಂದಾಗ ಮಗು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅವರು ಬಾಳೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು, ಶ್ವಾನ ದಳ ಹಾಗೂ ಸ್ಥಳೀಯರು ಕಾರ್ಯಾಚರಣೆ ಆರಂಭಿಸಿದರು. ಕಾಫಿ ತೋಟದ ಅಂಚಿನಲ್ಲಿ ರಾತ್ರಿಯಿಡೀ ಹುಡುಕಾಟ ನಡೆಸಲಾಯಿತಾದರೂ ಕಾಡು ಪ್ರಾಣಿಗಳ ಭಯ ಮತ್ತು ಸುರಿಯುವ ಮಳೆಯಿಂದಾಗಿ ಹುಡುಕಾಟ ಕಷ್ಟವಾಗಿತ್ತು. ಇಡೀ ರಾತ್ರಿ ಪೋಷಕರು ಕಣ್ಣೀರು ಹಾಕುತ್ತಾ ಮಗುವಿಗಾಗಿ ಕಾದು ಕುಳಿತಿದ್ದರು.

ಪವಾಡದಂತೆ ಬದುಕುಳಿದ ಮಗು:

ಇಂದು ಮುಂಜಾನೆ ಮನೆಯಿಂದ ಸುಮಾರು ೫೦೦ ಮೀಟರ್ ದೂರದಲ್ಲಿರುವ ಹಳ್ಳದ ಬಳಿ ಹುಡುಕಾಟ ನಡೆಸಿದಾಗ, ಮಗು ಶಿವಂ ಅಲ್ಲಿ ನಡುಗುತ್ತಾ ಕುಳಿತಿರುವುದು ಕಂಡುಬಂದಿದೆ. ರಾತ್ರಿಯಿಡೀ ಸುರಿದ ಮಳೆ ಹಾಗೂ ಕತ್ತಲೆಯಲ್ಲಿ ಕಾಡು ಪ್ರಾಣಿಗಳ ನಡುವೆಯೂ ಮಗು ಪ್ರಾಣಾಪಾಯದಿಂದ ಪಾರಾಗಿರುವುದು ಒಂದು ಪವಾಡವೇ ಸರಿ. ಸದ್ಯ ಮಗುವನ್ನು ರಕ್ಷಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಮಗು ಪತ್ತೆಯಾದ ಸುದ್ದಿ ಕೇಳಿ ಪೋಷಕರು ಹಾಗೂ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Missing one and a half year old girl finally found

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...