Home namma chikmagalur chikamagalur ಶಾಸಕ ಎಚ್.ಡಿ.ತಮ್ಮಯ್ಯರಿಂದ ಸೈಕಲ್ ತುಳಿ ಸಮಸ್ಯೆ ತಿಳಿ ಕಾರ್ಯಕ್ರಮ
chikamagalurHomeLatest Newsnamma chikmagalur

ಶಾಸಕ ಎಚ್.ಡಿ.ತಮ್ಮಯ್ಯರಿಂದ ಸೈಕಲ್ ತುಳಿ ಸಮಸ್ಯೆ ತಿಳಿ ಕಾರ್ಯಕ್ರಮ

Share
Share

ಚಿಕ್ಕಮಗಳೂರು:  ನಗರದ ವಿವಿಧೆಡೆ ಶಾಸಕ ಎಚ್.ಡಿ.ತಮ್ಮಯ್ಯ ಅವರು ಅಧಿಕಾರಿಗಳೊಂದಿಗೆ ಹಾಗೂ ಸ್ಥಳೀಯ ನಗರಸಭಾ ಸದಸ್ಯರೊಂದಿಗೆ ಶುಕ್ರವಾರ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು.

ಸೈಕಲ್ ತುಳಿ ಸಮಸ್ಯೆ ತಿಳಿ ಕಾರ್ಯಕ್ರಮ ಈ ಹಿಂದೆ ಇಲ್ಲಿನ ಮಧುವನ ಲೇಔಟ್ ನಿಂದ ಪ್ರಾರಂಭಗೊಂಡಿತ್ತು. ಆಗ ಸ್ಥಳೀಯ ನಿವಾಸಿಗರು ಮೂಲಭೂತ ಸೌಲಭ್ಯಗಳ ಬೇಡಿಕೆಯನ್ನು ಇಟ್ಟಿದ್ದರು. ಅವುಗಳಲ್ಲಿ ಹಲವು ಕೆಲಸಗಳು ಕಾರ್ಯರೂಪಕ್ಕೆ ಬಂದಿದ್ದು ನೂತನವಾಗಿ ಡಾಂಬರೀಕರಣವಾಗಿರುವ ರಸ್ತೆಯನ್ನು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಉದ್ಘಾಟಿಸಿದರು.

ಮಧುವನ ಲೇಔಟ್‌ನಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಅಂಗನವಾಡಿ ಕಟ್ಟಡದ ಕಾಮಗಾರಿಗೆ ಶಾಸಕರು ಇದೇ ಸಂದರ್ಭದಲ್ಲಿ ಶಂಕುಸ್ಥಾಪನೆಯನ್ನು ನೆರವೇರಿಸಿದರು. ಬಳಿಕ ಶಾಸಕರು ಸೈಕಲ್‌ನಲ್ಲಿಯೇ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಕಾಮಗಾರಿಯ ವೀಕ್ಷಣೆಗೆ ತೆರಳಿದರು.

ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿದ ಅವರು, ನಿಧಾನಗತಿಯಲ್ಲಿ ಸಾಗುತ್ತಿರುವ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡಿ ಮುಗಿಸಬೇಕು. ಈ ಕಟ್ಟಡದ ಮೊದಲನೇ ಅಂತಸ್ತಿನಲ್ಲಿ ಕಮರ್ಷಿಯಲ್ ಮಳಿಗೆಗಳನ್ನು ನಿರ್ಮಾಣ ಮಾಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಈ ಕಾಮಗಾರಿಯನ್ನು ೨೦೨೭ರ ಮಾರ್ಚ್ ಅಂತ್ಯದೊಳಗೆ ಮುಗಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಶಾಸಕರ ಗಮನಕ್ಕೆ ತಂದರು. ಈ ಕಟ್ಟಡದಲ್ಲಿ ಹೈಟೆಕ್ ಶೌಚಾಲಯ, ವಿಶ್ರಾಂತಿ ಕೊಠಡಿ, ತಾಯಿ ಮಗು ಆರೈಕೆ ಕೊಠಡಿ ತೆರೆಯಲು ಆದ್ಯತೆ ನೀಡಬೇಕೆಂದು ಶಾಸಕರು ಹೇಳಿದರು.

ಬಳಿಕ ಶಾಸಕರು ಮೂಡಿಗೆರೆ ರಸ್ತೆಯಲ್ಲಿ ಸೈಕಲ್ ನಲ್ಲಿಯೇ ತೆರಳುವ ವೇಳೆಯಲ್ಲಿ ಶ್ರೀ ಬೋಳರಾಮೇಶ್ವರ ವೃತ್ತದ ಬಳಿ ಶ್ರೀ ರಾಮೇಶ್ವರ ಬಡಾವಣೆಯ ನಿವಾಸಿಗರು ತಮ್ಮ ಬಡಾವಣೆಯ ಅಹವಾಲುಗಳನ್ನು ನೀಡಿದರು. ಆಗ ಶಾಸಕರು ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕಟ್ಟಡ ವೀಕ್ಷಿಸಿ ನಿಯಮದ ಪ್ರಕಾರ ಕಟ್ಟಡ ನಿರ್ಮಾಣ ಆಗಬೇಕು. ನಿಯಮ ಮೀರಿದರೆ ಕಾಮಗಾರಿ ತಡೆಯಬೇಕೆಂದು ನಗರಸಭಾ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ಇದೇ ಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮತ್ತೊಂದು ಕಟ್ಟಡದ ಮಾಲೀಕರು ರಸ್ತೆ ಜಾಗ ಒತ್ತುವರಿ ಮಾಡಿರುವುದನ್ನು ಗಮನಿಸಿದ ಶಾಸಕರು ಕೂಡಲೇ ತೆರವುಗೊಳಿಸಬೇಕೆಂದು ಸೂಚನೆ ನೀಡಿದರು. ಶಾಸಕರು ತೇಗೂರಿಗೆ ತೆರಳಿ ವಾಪಸ್ ಬರುವಾಗ ನಗರಸಭೆ ಸಿಬ್ಬಂಧಿಯವರು ರಸ್ತೆ ಒತ್ತುವರಿ ಜಾಗ ತೆರವುಗೊಳಿಸಿದ್ದರು.

ನಂತರ ಶಾಸಕರು ಮೂಡಿಗೆರೆ ರಸ್ತೆಯಲ್ಲಿ ಸೈಕಲ್ ನಲ್ಲೇ ಮೆಡಿಕಲ್ ಕಾಲೇಜ್ ರಸ್ತೆ ವೀಕ್ಷಣೆಗೆ ತೆರಳುವಾಗ ರಾಂಪುರ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಯನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಶಾಸಕರು ಸೈಕಲ್ ತುಳಿ ಸಮಸ್ಯೆ ತಿಳಿ ಕಾರ್ಯಕ್ರಮವನ್ನು ಮುಂದುವರೆಸಿದರು.

MLA H.D. Thammaiah’s program to understand the problem of bicycle accidents

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...